ಕಾರ್ಕಳ ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರು, ಕಾಂಗ್ರೆಸ್ ಸರ್ಕಾರ ಅಭಿವೃದ್ಧಿಯನ್ನು ಮರೆತು ಸಿಎಂ ಕುರ್ಚಿಗಾಗಿನ ಗೊಂದಲದಲ್ಲಿ ಕಾಲಹರಣ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಜನವರಿ ಹೊತ್ತಿಗೆ ಸರ್ಕಾರ ಪತನವಾಗಲಿದ್ದು, ಬಿಜೆಪಿ ಮಧ್ಯಂತರ ಚುನಾವಣೆಗೆ ಸಿದ್ಧತೆ ನಡೆಸುತ್ತಿದೆ ಎಂದು ಅವರು ಹೇಳಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಚಟುವಟಿಕೆಗಳನ್ನು ಸಂಪೂರ್ಣ ಮರೆಮಾಚಿದ್ದು, ನಾಯಕರು ಸಿಎಂ ಯಾರಾಗಬೇಕು ಎನ್ನುವ ಗೊಂದಲದಲ್ಲೇ ಕಾಲಹರಣ ಮಾಡುತ್ತಿದ್ದಾರೆ. ಶಾಸಕರು ಪ್ರತ್ಯೇಕವಾಗಿ ಸಭೆ ಮಾಡುತ್ತಿದ್ದು, ಜನವರಿ ಹೊತ್ತಿಗೆ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ. ಹಾಗಾಗಿ ಮಧ್ಯಂತರ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ ಎಂದು ಕಾರ್ಕಳ ಬಿಜೆಪಿ ಶಾಸಕ ಸುನಿಲ್ ಕುಮಾರ್ ಹೇಳಿದ್ದಾರೆ.
24
ಆಡಳಿತ ವ್ಯವಸ್ಥೆ ಕುಸಿತ
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ಎರಡೂವರೆ ವರ್ಷದಿಂದ ಕಾಂಗ್ರೆಸ್ ಸರ್ಕಾರ ಕಾಲ ಹರಣ ಮಾಡಿದ್ದು, ಪಕ್ಷದವರೇ ನವೆಂಬರ್ ಕ್ರಾಂತಿ ಎನ್ನುವುದನ್ನು ಹುಟ್ಟುಹಾಕಿ ಚರ್ಚೆ ಮಾಡುತ್ತಿದ್ದಾರೆ. ಗ್ರಾಮದಿಂದ ವಿಧಾನಸೌಧ ತನಕ ಆಡಳಿತ ವ್ಯವಸ್ಥೆ ಕುಸಿತದ ಬಗ್ಗೆ ಚರ್ಚೆ ಮಾಡುತ್ತಿಲ್ಲ ಎಂದು ಕಿಡಿಕಾರಿದರು.
34
ಕುರ್ಚಿ ಫೈಟ್
ರಾಜ್ಯದ ಜನ ಕಾಂಗ್ರೆಸ್‌ಗೆ ಬಹುಮತ ಕೊಟ್ಟಾಗ ಒಳ್ಳೆಯ ಆಡಳಿತ ನಿರೀಕ್ಷಿಸಿದ್ದರು. ಆದರೆ, ಕಾಂಗ್ರೆಸ್ ನಾಯಕರು ರಾಜ್ಯದ ಅಭಿವೃದ್ಧಿ ವಿಚಾರ ಇಟ್ಟುಕೊಂಡು ದೆಹಲಿಗೆ ಹೋಗುತ್ತಿಲ್ಲ. ಬದಲಾಗಿ ತಮ್ಮ ಕುರ್ಚಿ ಉಳಿಸಿಕೊಳ್ಳಲು ಹಾಗೂ ಮತ್ತೊಬ್ಬರ ಕುರ್ಚಿ ಎಳೆಯಲು ಹೋಗುತ್ತಿದ್ದಾರೆ. ಈ ಸರ್ಕಾರ ಯಾವಾಗ ಕುಸಿದು ಬೀಳಲಿದೆ ಎಂದು ಜನರು ಕೂಡ ಕಾದು ನೋಡುತ್ತಿದ್ದಾರೆ ಎಂದು ಟೀಕಿಸಿದರು.
ರಾಜ್ಯದ ಜನರು ಈ ಹಿಂದೆಯೇ ಕಬ್ಬು ಬೆಳೆಗೆ ನಿರ್ದಿಷ್ಟ ಬೆಲೆ ನಿಗದಿಗೆ ಒತ್ತಾಯಿಸಿದ್ದರು. ಕಳೆದ 8 ದಿನಗಳಿಂದ ರೈತರು ರಸ್ತೆಯಲ್ಲಿದ್ದಾರೆ. ಆದರೆ, ಸರ್ಕಾರ ಕಾರ್ಖಾನೆ ಮಾಲೀಕರ ಕರೆದು ಮಾತನಾಡುತ್ತಿಲ್ಲ. ಕಾಂಗ್ರೆಸ್ ನಾಯಕರಿಗೆ ರೈತರು, ಕಾರ್ಮಿಕರು ಹಾಗೂ ಅಭಿವೃದ್ಧಿ ಮುಖ್ಯವಲ್ಲ. ಅವರಿಗೆ ಕೇವಲ ಯಾರು ಸಿಎಂ ಆಗುತ್ತಾರೆ? ಯಾರು ಮಂತ್ರಿಮಂಡಲ ಸೇರಬೇಕು? ಎನ್ನುವ ಚರ್ಚೆಯಲ್ಲೇ ಮಗ್ನರಾಗಿದ್ದಾರೆ ಎಂದು ಆರೋಪಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.