ಸಿದ್ದರಾಮಯ್ಯಗೆ ಫೋಟೋ ಕೊಟ್ಟು ಜೈಕಾರ ಹಾಕಿಸಿಕೊಳ್ಳುವ ಸ್ಥಿತಿ: ವಿಜಯೇಂದ್ರ

Published : Jul 21, 2025, 06:30 AM IST

ಸಿದ್ದರಾಮಯ್ಯ ಅವರಿಗೆ ಫೋಟೋ ಕೊಟ್ಟು ಜೈಕಾರ ಹಾಕಿಸಿಕೊಳ್ಳುವ ಸ್ಥಿತಿ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ.

PREV
15

ಗಂಗಾವತಿ (ಜು.21): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಫೋಟೋ ಕೊಟ್ಟು ಜೈಕಾರ ಹಾಕಿಸಿಕೊಳ್ಳುವ ಸ್ಥಿತಿ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ. ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ಜರುಗಿದ ಬಳ್ಳಾರಿ ವಿಭಾಗ ಮಟ್ಟದ ಬಿಜೆಪಿ ಸಂಘಟನಾ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ಮೈಸೂರಲ್ಲಿ ಜರುಗಿದ ಸಾಧನಾ ಸಮಾವೇಶದಲ್ಲಿ 10 ಸಾವಿರ ಆಸನದಲ್ಲಿ 8 ಸಾವಿರ ಆಸನಗಳು ಖಾಲಿ ಇದ್ದವು.

25

ಸಿದ್ದರಾಮಯ್ಯ ತಮ್ಮ ಭಾವಚಿತ್ರವನ್ನು ಜನರಿಗೆ ಕೊಟ್ಟು ಜೈಕಾರ ಹಾಕಿಸಿಕೊಂಡಿರುವುದು ದೊಡ್ಡ ದುರಂತ. ಸಿದ್ದರಾಮಯ್ಯ ರೈತರ ಪರ ಕೆಲಸ ಮಾಡಿದ್ದರೆ ರೈತರೇ ಜೈಕಾರ ಹಾಕುತ್ತಿದ್ದರು. ಈ ಹಿಂದೆ ಬಿ.ಎಸ್‌. ಯಡಿಯೂರಪ್ಪ ಸರ್ಕಾರ ಇದ್ದ ಸಂದರ್ಭದಲ್ಲಿ ಅವರು ರೈತರ ಪರ ಕೆಲಸ ಮಾಡಿದ್ದಾರೆ. ಇದರಿಂದ ಅವರನ್ನು ರೈತ ನಾಯಕರೆಂದು ಕರೆಯುತ್ತಾರೆ ಎಂದರು. ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ತುಂಬಿದೆ. ರಾಜ್ಯದಲ್ಲಿ ಅಭಿವೃದ್ಧಿ ಎನ್ನುವುದು ಮರೆತು ಹೋಗಿದೆ ಎಂದು ಅವರು ಟೀಕಿಸಿದರು.

35

ಸಿದ್ದರಾಮಯ್ಯ ಅವರು ಅಭಿವೃದ್ಧಿ ಕುರಿತು ಸವಾಲು ಹಾಕುತ್ತಿದ್ದಾರೆ. ಆದರೆ, ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿಯವರೇ ರೈತರು ಹೊಲ ಗದ್ದೆಗಳಿಗೆ ರಸ್ತೆ ಕೇಳಿದರೆ, ಗ್ಯಾರಂಟಿ ನಿಲ್ಲಿಸುವುದಾಗಿ ಹೆದರಿಸುತ್ತಿದ್ದಾರೆ ಎಂದರು. ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ನವೆಂಬರ್‌ ಪೂರ್ವದಲ್ಲಿ ಪತನಗೊಳ್ಳಲಿದೆ. ಈಗಾಗಲೇ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮಧ್ಯೆ ಭಿನ್ನಮತ ಉದ್ಭವಿಸಿದೆ ಎಂದರು. ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ ಅವರು ಮುಖ್ಯಮಂತ್ರಿಗೆ ಲಾಟರಿ ಸಿಎಂ ಎಂದು ಹೇಳಿದ್ದಾರೆ. ಇದಕ್ಕಿಂತ ವಿರೋಧ ಪಕ್ಷದವರು ಏನು ಹೇಳುವುದೂ ಬೇಕಾಗಿಲ್ಲ ಎಂದರು.

45

ನವೆಂಬರ್‌ ಪೂರ್ವದಲ್ಲಿ ಕಾಂಗ್ರೆಸ್‌ ಸರ್ಕಾರ ಪತನ: ಮೈಸೂರಲ್ಲಿ ಜರುಗಿದ ಕಾಂಗ್ರೆಸ್‌ ಸಮಾವೇಶದಲ್ಲಿ ಸಿದ್ದರಾಮಯ್ಯನವರು ಡಿಕೆಶಿ ಹೆಸರು ಹೇಳದೆ ಇರುವುದು ಇವರ ಭಿನ್ನಮತ ಸ್ಫೋಟವಾಗಿದ್ದಕ್ಕೆ ಸಾಕ್ಷಿ. ಇದರಿಂದ ರಾಜ್ಯ ಸರ್ಕಾರ ಬಹಳ ದಿನ ಉಳಿಯುವುದಿಲ್ಲ ಎಂದರು. ಆಡಳಿತಾರೂಢ ಶಾಸಕರೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೆಳಗೆ ಇಳಿಸುವ ಹುನ್ನಾರ ನಡೆಸಿದ್ದಾರೆ. ಕುದುರೆ ವ್ಯಾಪಾರ ಪ್ರಾರಂಭಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿವೃದ್ಧಿ ಬಗ್ಗೆ ಅವರ ಪಕ್ಷದ ಶಾಸಕರೇ ಸವಾಲು ಹಾಕುತ್ತಿದ್ದಾರೆ. ಸಿದ್ದರಾಮಯ್ಯನವರು ಮೊದಲಿಗೆ ತಮ್ಮ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಮಗೆ ಸವಾಲು ಹಾಕಲಿ ಎಂದರು.

55

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ವರಿಷ್ಠರು ತೀರ್ಮಾನಿಸುತ್ತಾರೆ: ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಯಾರು ಆಗಬೇಕು ಎಂದು ವರಿಷ್ಠರು ತೀರ್ಮಾನಿಸುತ್ತಾರೆ. ಪಕ್ಷದ ಸಂಘಟನೆಗೆ ಒತ್ತು ನೀಡಿ ಕೆಲಸ ಮಾಡುವುದಷ್ಟೇ ನಮ್ಮ ಕಾಯಕ. ರಾಜ್ಯದಲ್ಲಿ ಪಕ್ಷದ ಸಂಘಟನೆಗೆ ಹೆಚ್ಚಿನ ಒತ್ತು ಕೊಟ್ಟು ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.

Read more Photos on
click me!

Recommended Stories