ಚಾಮರಾಜನಗರ (ಮಾ.13): ಸಂವಿಧಾನ ಬದಲಿಸುವುದು ಬಿಜೆಪಿ ಹಿಡನ್ ಅಜೆಂಡಾ, ಸಂಸದ ಅನಂತ ಕುಮಾರ್ ಹೆಗಡೆ ಮೂಲಕ ಹೇಳಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಚಾಮರಾಜನಗರ ತಾಲೂಕಿನ ಹೆಗ್ಗವಾಡಿಯಲ್ಲಿ ಮಾಧ್ಯಮವರೊಂದಿಗೆ ಮಾತನಾಡಿ, ಅನಂತಕುಮಾರ್ ಹೆಗ್ಡೆ ಆರ್ಡಿನರಿ ವ್ಯಕ್ತಿ ಅಲ್ಲಾ, 5 ಸಲ ಸಂಸದರಾಗಿದ್ದವರು, ಸಚಿವರಾಗಿದ್ದವರು, ಸಂವಿಧಾನ ಬದಲಿನ ವಿಚಾರ ಹೇಳಬೇಕಾದರೆ ಪಕ್ಷದ ತೀರ್ಮಾನ ಆಗಿರದೇ ಹೇಳಲು ಆಗತ್ತಾ, ಅವರ ವಿರುದ್ಧ ಏನಾದರೂ ಕ್ರಮ ತೆಗೆದುಕೊಂಡರಾ ಎಂದು ಪ್ರಶ್ನೆ ಮಾಡಿದರು.