ರಂಗೇರಿದ ಚನ್ನಪಟ್ಟಣ ಅಖಾಡ- ದೋಸ್ತಿಗೆ 'ಕೈ' ಕೊಟ್ಟ ಸೈನಿಕ? ಜೆಡಿಎಸ್-ಬಿಜೆಪಿಗೆ ಬಿಗ್ ಶಾಕ್ ಕೊಟ್ಟ ಕನಕಪುರ ಬಂಡೆ

First Published | Oct 23, 2024, 10:14 AM IST

ಚನ್ನಪಟ್ಟಣ ಉಪ ಚುನಾವಣೆ ಕದನ ರಂಗೇರಿದ್ದು, ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಇಂದು ಬೆಳ್ಳಂಬೆಳಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ನಿವಾಸದಲ್ಲಿ ಕಾಣಿಸಿಕೊಂಡಿದ್ದಾರೆ.

ಬಿಜೆಪಿ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಪಕ್ಷ ತೊರೆಯುವ ಸುಳಿವು ನೀಡಿದ್ದರು. ಆದ್ರೆ ಇದುವರೆಗೂ ಕಾಂಗ್ರೆಸ್ ಸೇರ್ಪಡೆಯ ಕುರಿತು ಅಧಿಕೃತ ಹೇಳಿಕೆಯನ್ನು ನೀಡಿಲ್ಲ.

ಸದಾಶಿವನಗರದ ಡಿಕೆ ಶಿವಕುಮಾರ್ ನಿವಾಸಕ್ಕೆ ಆಗಮಿಸಿರುವ ಯೋಗೇಶ್ವರ್ ಸುದೀರ್ಘ ಚರ್ಚೆ ನಡೆಸಿದ್ದರು. ಈ ವೇಳೆ ಮಾಜಿ ಸಂಸದ ಡಿಕೆ ಸುರೇಶ್ ಸಹ ಹಾಜರಿದ್ದರು. ರಾತ್ರಿಯೇ ಡಿಕೆ ಶಿವಕುಮಾರ್ ಭೇಟಿಗೆ ಯೋಗೇಶ್ವರ್ ಸಮಯ ಕೇಳಿದ್ದರು ಎನ್ನಲಾಗಿದೆ. ಡಿಕೆಶಿ ಭೇಟಿ ಬಳಿಕ ಸಿಎಂ ಸಿದ್ದರಾಮಯ್ಯಯವರನ್ನು ಭೇಟಿಯಾಗಲು ತೆರಳಿದ್ದಾರೆ.

Latest Videos


ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿಯೇ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಮೂಲಕ ಡಿಕೆ ಶಿವಕುಮಾರ್ ಅವರ ಆಪರೇಷನ್ ಯೋಗೇಶ್ವರ್ ಸಕ್ಸಸ್ ಆದಂತೆ ಕಂಡು ಬರುತ್ತಿದೆ.

ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾದ ಚನ್ನಪಟ್ಟಣ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾಗಿದೆ. ಜೆಡಿಎಸ್ ಚಿಹ್ನೆಯಡಿ ಸ್ಪರ್ಧೆ ಮಾಡುವಂತೆ ಕುಮಾರಸ್ವಾಮಿ ಆಫರ್ ನೀಡಿದ್ದರು. ಆದರೆ ಯೋಗೇಶ್ವರ್ ಬಿಜೆಪಿಯಿಂದ ಬಿ ಫಾರಂ ಕೇಳಿದ್ದರು. ಮೈತ್ರಿ ಭಾಗವಾಗಿ ಚನ್ನಪಟ್ಟಣ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟು ಕೊಡಲಾಗಿದೆ.

click me!