Basavaraj Bommai Meets Devegowda
ನೂತನ ಮುಖ್ಯಮಂತ್ರಿಯಾಗಿರುವ ಬಸವರಾಜ ಬೊಮ್ಮಯಿ ಅವರು ತಮ್ಮ ರಾಜಕೀಯದ ಮೊದಲ ಗುರು ಭೇಟಿ ಮಾಡಿದರು.
Basavaraj Bommai Meets Devegowda
ಮುಖ್ಯಮಂತ್ರಿ ಹುದ್ದೆಗೆ ಏರಿದ ಬಳಿಕ ಮೊದಲ ಬಾರಿಗೆ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ನಿವಾಸಕ್ಕೆ ಇಂದು (ಭಾನುವಾರ) ಸೌಹಾರ್ದಯುತ ಭೇಟಿ ನೀಡಿದರು.
Basavaraj Bommai Meets Devegowda
ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಮಾಜಿ ಪ್ರಧಾನಿ ದೇವೇಗೌಡ ಮತ್ತು ಶಾಸಕ ರೇವಣ್ಣ ಸನ್ಮಾನಿಸಿ ಗೌರವಿಸಿದರು. ಇದೇ ವೇಳೆ ಗುರು ಶಿಷ್ಯ ಸ್ವಲ್ಪ ಹೊತ್ತು ಉಭಯ ಕುಶಲೋಪರಿಯ ವಿಚಾರಿಸಿಕೊಂಡರು.
Basavaraj Bommai Meets Devegowda
ಹಾಗೇ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಚಿವ ವಿ ಸೋಮಣ್ಣ ಸೇರಿ ದೇವೇಗೌಡರಿಗೆ ಹೂವಿನ ಹಾರ ಹಾಕಿ ಗೌರವಿಸಿದರು. ಇದೇ ವೇಳೆ ಬಸವರಾಜ ಬೊಮ್ಮಾಯಿ ಎಚ್ ಡಿ ದೇವೇಗೌಡರ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು.
Basavaraj Bommai Meets Devegowda
ದೇವೇಗೌಡರ ಭೇಟಿ ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, ಜನತಾಪರಿವಾರದಲ್ಲಿದ್ದಾಗಿನ ಒಡನಾಟ, ಹಳೆ ನೆನಪುಗಳನ್ನು ಮೆಲುಕು ಹಾಕಿದೆವು. ಸಿಕ್ಕಿರುವ ಅವಕಾಶ ಸಮರ್ಥವಾಗಿ ಬಳಸಿಕೊಂಡು, ರಾಜ್ಯಕ್ಕೆ ಉತ್ತಮವಾಗಿ ಆಡಳಿತ ನೀಡುವಂತೆ ಮಾರ್ಗದರ್ಶನ ನೀಡಿದರು ಎಂದು ಹೇಳಿದರು.
Bommai Meets Devegowda
ಆರಂಭದಲ್ಲಿ ಜನತಾದಳದಲ್ಲಿ ಗುರುತಿಸಿಕೊಂಡಿದ್ದ ಬೊಮ್ಮಾಯಿ 1995ರಲ್ಲಿ ಜನತಾದಳದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡರು. 1996–1997ರಲ್ಲಿ ಅಂದಿನ ಮುಖ್ಯಮಂತ್ರಿ ಜೆಎಚ್ ಪಟೇಲ್ ಅವರಿಗೆ ರಾಜಕೀಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದರು.
Bommai Meets Devegowda
ನಂತರ 1997ರಲ್ಲಿ ಮೊದಲ ಬಾರಿಗೆ ಸ್ಥಳೀಯ ಸಂಸ್ಥೆಗಳಿಂದ (ಧಾರವಾಡ) ವಿಧಾನ ಪರಿಷತ್‌ಗೆ ಆಯ್ಕೆಯಾಗಿ ವಿಧಾನಸೌಧ ಪ್ರವೇಶಿಸಿದರು. ಹಾಗೆ ವಿಧಾನಸೌಧಕ್ಕೆ ಕಾಲಿಟ್ಟವರು ಮತ್ತೆ ತಿರುಗಿ ನೋಡಿದ್ದೇ ಇಲ್ಲ. 2003ರಲ್ಲಿಯೂ ಎಂಎಲ್‌ಸಿಯಾಗಿ ಪುನರಾಯ್ಕೆಯಾದರು.
ಬಳಿಕ ಸಂಯುಕ್ತ ಜನತಾದಳ (ಜೆಡಿಯು)ನಲ್ಲಿದ್ದ ಬಸವರಾಜ್ ಬೊಮ್ಮಾಯಿ ಅವರನ್ನು 2008ರಲ್ಲಿ ಸ್ವತಃ ಯಡಿಯೂರಪ್ಪ ಮುತುವರ್ಜಿ ವಹಿಸಿ ಬಿಜೆಪಿಗೆ ಕರೆದುಕೊಂಡು ಬಂದರು. ಫೆಬ್ರವರಿ 9ರಂದು ಜೆಡಿಯು ತೊರೆದು ಕಮಲ ಪಾಳಯ ಸೇರಿದ ಬೊಮ್ಮಾಯಿ ತಮ್ಮ ಸೋದರ ಮಾವ ಮಲ್ಲಪ್ಪ ಹುರುಳಿಕೊಪ್ಪಿ 1952ರಲ್ಲಿ ಪ್ರತಿನಿಧಿಸುತ್ತಿದ್ದ ಹಾವೇರಿಯ ಶಿಗ್ಗಾಂವ್ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ಚುನಾವಣೆಗೆ ಸ್ಪರ್ಧಿಸಿ 2008ರಲ್ಲಿ ವಿಧಾನಸಭೆ ಪ್ರವೇಶಿಸಿದರು.