ರಾಜ್ಯದ ಮೊದಲ RO-RO ರೈಲಿಗೆ ಚಾಲನೆ: ಇದರ ಉಪಯೋಗ ತಿಳ್ಕೊಳ್ಳಿ..!

Published : Aug 30, 2020, 02:47 PM IST

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಕೇಂದ್ರ ರಾಜ್ಯ ರೈಲ್ವೆ ಸಚಿವ ಸುರೇಶ್ ಅಂಗಡಿ ಅವರು ಇಮದು (ಭಾನುವಾರ) ರಾಜ್ಯದ ಮೊದಲ ರೋ-ರೋ( Roll on-Roll off) ರೈಲು ಸೇವೆಗೆ ಚಾಲನೆ ನೀಡಿದರು. ಈ ರೈಲಿನ ವಿಶೇಷ ಏನು ಎನ್ನುವ ಮಾಹಿತಿ ಈ ಕೆಳಗಿನಂತಿದೆ ನೋಡಿ.

PREV
17
ರಾಜ್ಯದ ಮೊದಲ RO-RO ರೈಲಿಗೆ ಚಾಲನೆ: ಇದರ ಉಪಯೋಗ ತಿಳ್ಕೊಳ್ಳಿ..!

ನೆಲಮಂಗಲ ರೈಲ್ವೆ ನಿಲ್ದಾಣದಿಂದ ಸೋಲಾಪುರದ ಬಾಲೆ ರೈಲ್ವೆ ನಿಲ್ದಾಣದ ನಡುವೆ ಸಂಚರಿಸಲಿರುವ ರೋ-ರೋ( Roll on-Roll off) ರೈಲು ಸಂಚರಿಸಲಿದೆ.

27

ಬಳಿಕ ಮಾತನಾಡಿದ ಸಿ‌ಎಂ.ಯಡಿಯೂರಪ್ಪ  ಅವರು,ಈ ರೈಲಿನಿಂದಾಗಿ ನೆಲಮಂಗಲದ ಹತ್ತಿರ ಇರುವ ಎ.ಪಿ.ಎಂ.ಸಿ ಮಾರುಕಟ್ಟೆ, ಪೀಣ್ಯ ಹಾಗೂ ನೆಲಮಂಗಲ ಭಾಗದಲ್ಲಿರುವ ಅನೇಕ ಕೈಗಾರಿಕೆಗಳು ಹಾಗೂ ಸಾರಿಗೆ ಸಂಸ್ಥೆಗಳು ಇದರಿಂದ ಅನುಕೂಲ ಹೊಂದಲಿವೆ ಎಂದು ಅಭಿಪ್ರಾಯಪಟ್ಟರು.

37

ಸರಕು ಸಾಮಾನು ಸಹಿತವಾದ ಅಥವಾ ಖಾಲಿ ಇರುವ 42 ಟ್ರಕ್‍ಗಳನ್ನು ಈ ರೊ-ರೊ ರೈಲಿನ ಮೇಲೆ ಲೋಡ್ ಮಾಡಿ ಸಾಗಿಸಬಹುದಾಗಿದೆ.

47

 ನೆಲಮಂಗಲ ಹಾಗೂ ಬಾಲೆಯಲ್ಲಿ ಈ ಟ್ರಕ್‍ಗಳನ್ನು ರೈಲಿಗೆ ಹತ್ತಿಸುವ ಹಾಗೂ ರೈಲಿಗೆ ಇಳಿಸುವಂತಹ ಕಾರ್ಯ ನಡೆಯಲಿದ್ದು, ರಸ್ತೆ ಮೂಲಕ ಸಂಚರಿಸುವ ಟ್ರಕ್‍ಗಳನ್ನು ರೈಲಿನ ಮೂಲಕ ಸಾಗಿಸುವ ಮೂಲಕ ಕ್ಷಿಪ್ರವಾಗಿ ಟ್ರಕ್‍ಗಳನ್ನು ಹಾಗೂ ಸರಕು ಸಾಮಗ್ರಿಗಳನ್ನು ಈ 2 ನಗರಗಳ ನಡುವೆ ಸಾಗಾಣಿಕೆ ಮಾಡಬಹುದಾಗಿದೆ.

57

ಗೋದಾಮುಗಳಿಂದ ಅಥವಾ ಮಾರುಕಟ್ಟೆಯಿಂದ ಲೋಡ್ ಆದಂತಹ ಟ್ರಕ್‍ಗಳು ರೈಲ್ವೆ ನಿಲ್ದಾಣದಲ್ಲಿ ಬಂದು ರೈಲಿನಲ್ಲಿ ಲೋಡ್ ಆಗುತ್ತವೆ.ರೈಲುಗಳ ಮೂಲಕ ಈ ಟ್ರಕ್‍ಗಳು ಮತ್ತೊಂದು ನಗರಕ್ಕೆ ಬಂದು ಸಾಮಾನು ಸರಂಜಾಮುಗಳೊಂದಿಗೆ ಗೋದಾಮು ಅಥವಾ ಮಾರುಕಟ್ಟೆಗೆ ಹೋಗಿ ಹೊತ್ತು ತಂದ ಸಾಮಾನುಗಳನ್ನು ಅನ್‍ಲೋಡ್ ಮಾಡಲು ಈ ವ್ಯವಸ್ಥೆಯಿಂದ ಸಹಕಾರಿಯಾಗುತ್ತದೆ

67

ಬೆಂಗಳೂರಿನಿಂದ ತರಕಾರಿ, ತೆಂಗಿನ ಕಾಯಿ ಅಡಿಕೆ ತೋಟಗಾರಿಕೆ ಉತ್ಪನ್ನಗಳು ಕೈಗಾರಿಕಾ ಉತ್ಪನ್ನಗಳನ್ನು ಸೋಲಾಪುರಕ್ಕೆ ಸಾಗಿಸಲು ಹಾಗೂ ಸೋಲಾಪುರದಿಂದ ಈರುಳ್ಳಿ, ಬೇಳೆ ಕಾಳುಗಳು ಮುಂತಾದ ಸರಕುಗಳನ್ನು ಬೆಂಗಳೂರಿಗೆ ಸಾಗಿಸಲು ಇದರಿಂದ ನೆರವಾಗಲಿದೆ ಎಂದರು.

77

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವಿವಿಧ ಸಾರಿಗೆ ಪ್ರಕಾರಗಳನ್ನು ಒಗ್ಗೂಡಿಸುವ Multi model Transport system ನ್ನು ನಿರಂತರವಾಗಿ ಪ್ರತಿಪಾದಿಸಿದ್ದಾರೆ. ಅವರ ಆಶಯದ ಫಲವಾಗಿ ಈ ರೊ-ರೊ ಸೇವೆ ಆರಂಭಗೊಳ್ಳುತ್ತಿದೆ.

click me!

Recommended Stories