ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಆರೋಗ್ಯ ಸಚಿವ ಶ್ರೀರಾಮುಲು, ಕಾಂಗ್ರೆಸ್ ಶಾಸಕ ಪರಮೇಶ್ವರ್ ನಾಯ್ಕ್ ಮತ್ತು ರಾಘವೇಂದ್ರ ರಾಜಕುಮಾರ್ ವಿರುದ್ಧ ಹಿರಿಯ ವಕೀಲ ಜಿ.ಆರ್. ಮೋಹನ್ ಅವರು ಅವರು ಕರ್ನಾಟಕ ಹೈಕೋರ್ಟ್‌ಗೆ ದೂರು ನೀಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪುತ್ರಿ ಮತ್ತು ಮಾಜಿ ಸಿಎಂ ಎಸ್.ಎಂ.ಕೃಷ್ಣ ಮೊಮ್ಮಗನ ಮದುವೆ ಪೂರ್ವ ಶಾಸ್ತ್ರ ವೇಳೆ ಯಾವುದೇ ಸಾಮಾಜಿಕ ಅಂತರ ಪಾಲಿಸಿಲ್ಲ. ಮಾಸ್ಕ್ ಧರಿಸದೆ ಮಾರ್ಗಸೂಚಿ ಉಲ್ಲಂಘನೆ ಮಾಡಿದ್ದಾರೆ ಎಂದು ಮೋಹನ್ ಅವರು ಹೈಕೋರ್ಟ್‌ಗೆ ದೂರು ನೀಡಿದ್ದಾರೆ.
ಕೊರೋನಾ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿವಾಹದಲ್ಲಿ 50ಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವಂತಿಲ್ಲ ಎಂಬ ನಿಯಮಗಳನ್ನ ಗಾಳಿಗೆ ತೂರಿ ಮಾಜಿ ಸಚಿವ, ಹಾಲಿ ಹಡಗಲಿಯ ಕಾಂಗ್ರೆಸ್ ಶಾಸಕ ಪಿ ಟಿ ಪರಮೇಶ್ವರ್ ನಾಯ್ಕ್ ಪುತ್ರನ ಮದುವೆಯನ್ನು ಅದ್ಧೂರಿಯಾಗಿ ಮಾಡಿದ್ದಾರೆ. ಈ ಮೂಲಕ ಮಾರ್ಗಸೂಚಿ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಚಳ್ಳಿಕೆರೆಯ ಪರುಶುರಾಂಪುರದಲ್ಲಿ ಆರೋಗ್ಯ ಸಚಿವ ಶ್ರೀರಾಮು ಅವರು ಹಾರ ಹಾರ ತುರಾಯಿಯೊಂದಿಗೆ ಅವರು ಜನರಿಂದ ಭರ್ಜರಿ ಸನ್ಮಾನ ಮಾಡಿಸಿಕೊಂಡಿದ್ದಾರೆ. ಅಲ್ಲದೇ ಸಾವಿರಾರು ಜನರಿಂದ ಬಹಿರಂಗ ಮೆರವಣಿ ಮಾಡಿಸಿಕೊಂಡು ಮಾರ್ಗಸೂಚಿ ಉಲ್ಲಂಘನೆ ಮಾಡಿದ್ದಾರೆ ಎಂದು ದೂರು ನೀಡಲಾಗಿದೆ.
ಇನ್ನು ನಟ, ನಿರ್ಮಾಪಕ ರಾಘವೇಂದ್ರ ರಾಜಕುಮಾರ್ ಅವರು ನಟ ಚಿರಂಜೀವಿ ಸರ್ಜಾ ಸಾವನ್ನಪ್ಪಿದ್ದರಿಂದ ಅವರ ಕುಟುಂಬಕ್ಕೆ ಸಾಂತ್ವನ ಹೇಳಲು ಹೋಗಿದ್ದಾರೆ. ಆದ್ರೆ, ಆ ವೇಳೆ ಸಾಮಾಜಿಕ ಅಂತರ ಕಾಪಾಡಿಲ್ಲ ಮತ್ತು ಮಾಸ್ಕ್ ಧರಿಸಿಲ್ಲ ಎಂದು ಹೈಕೋರ್ಟ್‌ಗೆ ದೂರು ಸಲ್ಲಿಕೆಯಾಗಿದೆ.
ಮೇಲೆ ತಿಳಿಸಲಾದ ನಾಲ್ಕು ಘಟನೆ ಸಂಬಂಧ ಹೈಕೋರ್ಟ್ ಹಿರಿಯ ವಕೀಲ ಮೋಹನ್ ಅವರು ಕೋರ್ಟ್‌ಗೆ ದೂರು ನೀಡಿದ್ದು, ಜೂನ್ 18ಕ್ಕೆ ಕೋರ್ಟ್‌ನಲ್ಲಿ ಈ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇದೆ.
ಕೊರೋನಾ ವೈರಸ್ ಹರಡುವುದನ್ನು ತಡೆಯಲು ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ಇಡೀ ಜಗತ್ತು ಹೇಳುತ್ತಿದೆ. ಆದ್ರೆ, ಕೆಲವರು ಇದಕ್ಕೆ ಕಿಮ್ಮತ್ತು ಕೊಡುತ್ತಿಲ್ಲ.