ಕಾಂಗ್ರೆಸ್ ಶಾಸಕಾಂಗ ಸಭೆ ಅಂತ್ಯ: ಸರ್ಕಾರದ ವಿರುದ್ಧ ಅಖಾಡಕ್ಕಿಳಿಯಲು ಭರ್ಜರಿ ಪ್ಲಾನ್‌

First Published Sep 16, 2020, 5:26 PM IST

ಇದೇ ಸೆಪ್ಟೆಂಬರ್ 21ರಿಂದ ವಿಧಾನಮಂಡಲ ಅಧಿವೇಶ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಪೂರ್ವ ತಯಾರಿಗಾಗಿ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಿತು. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿಂದು ಖಾಸಗಿ ಹೋಟೆಲ್‍ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಅಧಿವೇಶನದಲ್ಲಿ ಚರ್ಚಿಸಬೇಕಾದ ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು. ಈ ವೇಳೆ ಸರ್ಕಾರವನ್ನು ಕಟ್ಟಿ ಹಾಕಲು ಕೆಲ ತೀರ್ಮಾನಗಳನ್ನು ಸಹ ಕೈಗೊಳ್ಳಲಾಯ್ತು.

ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿಂದು ಖಾಸಗಿ ಹೋಟೆಲ್‍ನಲ್ಲಿ ಶಾಸಕಾಂಗ ಸಭೆ ನಡೆಯಿತು
undefined
ಸಭೆಯಲ್ಲಿ ಅಧಿವೇಶನದಲ್ಲಿ ಚರ್ಚಿಸಬೇಕಾದ ವಿಷಯಗಳ ಕುರಿತು ಸುದೀರ್ಘ ಚರ್ಚೆಗಳು ನಡೆದವು.
undefined
ವಿವಾದಿತ ಕಾಯ್ದೆಗಳ ವಿರುದ್ಧ ಹೋರಾಟಕ್ಕೆ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ನಿರ್ಧಾರ
undefined
ಕೊರೋನಾ ನಿಯಂತ್ರಣದ ಸಾಮಾಗ್ರಿಗಳ ಖರೀದಿಯಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ. ಈ ಹಗರಣವನ್ನು ತನಿಖೆಗೆ ವಹಿಸುವವರೆಗೂ ಪಟ್ಟು ಬಿಡಬಾರದು. ಹಗಲುರಾತ್ರಿ ಧರಣಿ ಸೇರಿದಂತೆ ಗಂಭೀರ ಸ್ವರೂಪದ ಹೋರಾಟಗಳನ್ನು ಕೈಗೊಳ್ಳಬೇಕೆಂದು ಸಭೆಯಲ್ಲಿ ಚರ್ಚಿಸಲಾಯಿತು.
undefined
ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಮುಂದಾಗಿರುವ ಭೂಸುಧಾರಣ, ಎಪಿಎಂಸಿ, ಕೈಗಾರಿಕೆ ಸುಧಾರಣಾ ಕಾಯ್ದೆಗಳನ್ನು ಹಿಂಪಡೆಯುವಂತೆ ಪಟ್ಟುಹಿಡಿಯಲು ಕಾಂಗ್ರೆಸ್ ಶಾಸಕಾಂಗ ಸಭೆ ನಿರ್ಧರಿಸಿದೆ.
undefined
ಕೊರೋನಾ, ಡ್ರಗ್ಸ್ ಹಾವಳಿ ಮತ್ತು ಡಿಜೆಹಳ್ಳಿ ಪ್ರಕರಣಗಳನ್ನು ನಿಲುವಳಿ ಸೂಚನೆಯಡಿ ಚರ್ಚೆಗೆ ಪ್ರಸ್ತಾವನೆ ಮಂಡಿಸಲು ನಿರ್ಧರಿಸಲಾಗಿದೆ.
undefined
ಒಟ್ಟಿನಲ್ಲಿ ಇದೇ ಸೆಪ್ಟೆಂಬರ್ 21ರಿಂದ 10ಗಳ ಕಾಲ ನಡೆಯಲಿರುವ ಅಧಿವೇಶದಲ್ಲಿ ರಾಜ್ಯ ಬಿಜೆಪಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್ ಪೂರ್ವ ಸಿದ್ಧತೆ ಮಾಡಿಕೊಂಡಿದ್ದು, ಅಧಿವೇಶನದಲ್ಲಿ ಹೇಗೆಲ್ಲಾ ವರ್ಕೌಟ್ ಆಗುತ್ತೆ ಎನ್ನುವುದನ್ನು ಕಾದುನೋಡಬೇಕಿದೆ.
undefined
click me!