ಹುಬ್ಬಳ್ಳಿ (ಫೆ.20): ಶಾಲೆ, ಹಾಸ್ಟೆಲ್ ಗಳಲ್ಲಿ ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ ಎಂಬುದನ್ನು ಬರೆಸುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮುಠ್ಠಾಳತನ ತೋರಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುವೆಂಪು ಅವರ ಘೋಷವಾಕ್ಯ ಇತ್ತು. ಅದನ್ನು ತಿದ್ದುಪಡಿ ಮಾಡಿರುವುದು ಕಾಂಗ್ರೆಸ್ ನ ತುಷ್ಟೀಕರಣದ ಪರಮಾವಧಿ. ಜತೆಗೆ ಕುವೆಂಪು ಅವರನ್ನು ಅವಮಾನ ಮಾಡಿದೆ ಎಂದು ಕಿಡಿಕಾರಿದರು. ಕುವೆಂಪು ಅವರ ಘೋಷ ವಾಕ್ಯವನ್ನೇ ಬದಲಾಯಿಸಿದೆ. ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷದ ದೃಷ್ಟಿಯಲ್ಲಿ ಕುವೆಂಪು ಜಾತ್ಯತೀತರಲ್ಲವೇ? ಎಂದು ಪ್ರಶ್ನಿಸಿದರು.