ಮಾಜಿ ಸಿಎಂ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇಂದು (ಮಂಗಳವಾರ) ನವದೆಹಲಿಯಲ್ಲಿ ರಾಹುಲ್ ಗಾಂಧಿ ಅವರನ್ನ ಭೇಟಿ ಮಾಡಿದರು.
undefined
ಈ ವೇಳೆ ಅಹಿಂದ ಸಮಾವೇಶಕ್ಕೆ ಕರ್ನಾಟಕ ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಕಾಂಗ್ರೆಸ್ ಹೈಕಮಾಂಡ್ನಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ.
undefined
ಕುರುಬ ಸಮುದಾಯ ಎತ್ತಿಕಟ್ಟುವ ತಂತ್ರ BJP ಮಾಡ್ತಿದೆ. ಮೀಸಲಾತಿ ವಿಚಾರದಲ್ಲಿ ನನ್ನ ವಿರುದ್ಧ ಎತ್ತಿಕಟ್ಟುವ ತಂತ್ರ ನಡೆಯುತ್ತಿದೆ. ಕುರುಬರ ಮತ ಒಡೆಯಲು BJP ಮೀಸಲಾತಿ ಅಸ್ತ್ರ ಬಿಟ್ಟಿದೆ. ಅದಕ್ಕೆ, ಪ್ರತಿತಂತ್ರವಾಗಿ ಅಹಿಂದ ಸಮುದಾಯ ಒಗ್ಗೂಡಿಸಬೇಕು ಎಂದು ರಾಹುಲ್ ಗಾಂಧಿ ಮುಂದೆ ಸಿದ್ದರಾಮಯ್ಯ ಪ್ರಸ್ತಾಪ ಇಟ್ಟಿದ್ದಾರೆ.
undefined
ಇದಕ್ಕೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ ಪಕ್ಷಕ್ಕೆ ಒಳಿತಾಗುವ ಯಾವುದೇ ರೀತಿ ಸಮಾವೇಶ ಮಾಡಿ ಎಂದು ಹೇಳಿದ್ದಾರೆ. ಜೊತೆಗೆ, ಅಹಿಂದ ಸಮಾವೇಶಕ್ಕೆ ಒಪ್ಪಿಗೆ ನೀಡಿದ್ದಾರೆ.
undefined
ಇದೇ ವೇಳೆ ನವದೆಹಲಿಯಲ್ಲಿಹಿರಿಯ ಕಾಂಗ್ರೆಸ್ ನಾಯಕ ಎ.ಕೆ. ಆಂಟನಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
undefined
ಕಾಂಗ್ರೆಸ್ ಜನರಲ್ ಸೆಕ್ರೆಟರಿ ಕೆ.ಸಿ.ವೇಣುಗೋಪಾಲ್ ಅವರನ್ನು ಸಹ ಭೇಟಿ ಪ್ರಸಕ್ತ ವಿದ್ಯಾಮಾನಗಳ ಬಗ್ಗೆ ಚರ್ಚೆ ನಡೆಸಿದರು.
undefined