ನಾಳೆ ಸಹೋದರಿ ಪ್ರಿಯಾಂಕಾ ಗಾಂಧಿ ಕೂಡ ಆಗಮಿಸಿ ಈ ಯಾತ್ರೆಯಲ್ಲಿ ಭಾಗವಹಿಸಲಿದ್ದು, ಈ ಮೂಲಕ ರಾಜ್ಯದಲ್ಲಿ ಇಡೀ ಗಾಂಧಿ ಕುಟುಂಬವೇ ಈ ಭಾರತ್ ಜೋಡೋ ಯಾತ್ರೆಗಾಗಿ ರಸ್ತೆಗಿಳಿದಂತಾಗಲಿದೆ. ಕಾಂಗ್ರೆಸ್‌ನ ರಾಷ್ಟ್ರಮಟ್ಟದ ಈ ಅಭಿಯಾನ ಸೆಪ್ಟೆಂಬರ್ 7 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಆರಂಭವಾಗಿದ್ದು, ಸೆಪ್ಟೆಂಬರ್ 30 ರಂದು ರಾಜ್ಯ ಪ್ರವೇಶಿಸಿತ್ತು. ಸೋನಿಯಾ ಗಾಂಧಿ ಈ ಸಮಾವೇಶದಲ್ಲಿ ಭಾಗವಹಿಸಿದ್ದು, ನಮ್ಮ ಹೆಮ್ಮೆ ಎಂದು ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.