ಕೊರೋನಾಗೆ ಬಲಿಯಾದವರ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡು ಆದರ್ಶ ಮೆರೆದ ಡಿಕೆ ಸುರೇಶ್

First Published | Jul 19, 2020, 5:07 PM IST

ಕೋವಿಡ್ 19 ಹಾಗೂ ಸೋಂಕಿನಿಂದ ಬಲಿಯಾದವರ ಅಂತ್ಯ ಸಂಸ್ಕಾರದ ಕುರಿತು ಜನರಲ್ಲಿರುವ ಅಪನಂಬಿಕೆ ಮತ್ತು ಅಪಪ್ರಚಾರಗಳನ್ನು ತೊಡೆದು ಹಾಕಲು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸದಸ್ಯ ಡಿ.ಕೆ ಸುರೇಶ್ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ತಮ್ಮ ಕ್ಷೇತ್ರದ ವ್ಯಾಪ್ತಿಯ ಕನಕಪುರದ ನಿವಾಸಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಸುರೇಶ್ ಅವರು ಆದರ್ಶ ಮೆರೆದಿದ್ದಾರೆ. ಮೃತರ ಅಂತ್ಯಸಂಸ್ಕಾರವನ್ನು ಕನಕಪುರ ದೇಗುಲಮಠದ ಬಳಿಯಿರುವ ಸ್ಮಶಾನದಲ್ಲಿ ಎಲ್ಲಾ ವಿಧಿ-ವಿಧಾನಗಳ ಪ್ರಕಾರ ಗೌರವಯುತವಾಗಿ ನೆರವೇರಿಸಲು ಸಹಕರಿಸುವ ಮೂಲಕ ಮಾದರಿಯಾಗಿದ್ದಾರೆ.

ಇತ್ತೀಚೆಗೆ ಕೊರೋನಾ ಸೋಂಕಿತರನ್ನು ಸಮಾಜ ಕೀಳಾಗಿ ನೋಡುತ್ತಿರುವ ಹಿನ್ನೆಲೆಯಲ್ಲಿ ತಾವೇ ಖುದ್ದಾಗಿ ಆಸ್ಪತ್ರೆಗೆ ಭೇಟಿ ನೀಡಿ ಸೋಂಕಿತರ ಜತೆ ಮಾತನಾಡಿ ಸಮಾಜಕ್ಕೆ ಸಕಾರಾತ್ಮಕ ಸಂದೇಶ ರವಾನಿಸಿದ್ದ ಸುರೇಶ್ ಅವರು, ಈಗ ಸೋಂಕಿನಿಂದ ಮೃತಪಟ್ಟವರಿಗೆ ಗೌರವಯುತ ಅಂತ್ಯ ಸಂಸ್ಕಾರ ಆಗುವಂತೆ ನೋಡಿಕೊಂಡಿದ್ದಾರೆ.
ಕೊರೋನಾಗೆ ಬಲಿಯಾದ 73ವರ್ಷದ ಕನಕಪುರದ ನಿವಾಸಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಸುರೇಶ್ ಅವರು ಆದರ್ಶ ಮೆರೆದಿದ್ದಾರೆ.
Tap to resize

ಅಂತ್ಯಸಂಸ್ಕಾರವನ್ನು ಕನಕಪುರ ದೇಗುಲಮಠದ ಬಳಿಯಿರುವ ಸ್ಮಶಾನದಲ್ಲಿ ಎಲ್ಲಾ ವಿಧಿ-ವಿಧಾನಗಳ ಪ್ರಕಾರ ಗೌರವಯುತವಾಗಿ ನೆರವೇರಿಸಲು ಸಹಕರಿಸುವ ಮೂಲಕ ಮಾದರಿಯಾಗಿದ್ದಾರೆ.
ಅಂತ್ಯ ಸಂಸ್ಕಾರದಲ್ಲಿ ಪ್ರತಿಯೊಬ್ಬರೂ ಅಗತ್ಯ ಸುರಕ್ಷಾ ಪರಿಕರಗಳಾದ ಪಿಪಿಇ ಕಿಟ್ ಬಳಸಿ ಪಾಲ್ಗೊಂಡಿದ್ದರು. ವಿಧಾನ ಪರಿಷತ್ ಸದಸ್ಯ ರವಿ ಹಾಗೂ ಕನಕಪುರ ನಗರಸಭೆ ಸದಸ್ಯರು ಸಹ ಈ ಸಂದರ್ಭದಲ್ಲಿ ಹಾಜರಿದ್ದರು.
ಇತ್ತೀಚೆಗೆ ಕೊರೋನಾ ಸೋಂಕಿತರನ್ನು ಸಮಾಜ ಕೀಳಾಗಿ ನೋಡುತ್ತಿರುವ ಹಿನ್ನೆಲೆಯಲ್ಲಿ ತಾವೇ ಖುದ್ದಾಗಿ ಆಸ್ಪತ್ರೆಗೆ ಭೇಟಿ ನೀಡಿದ್ದರು.
ಸೋಂಕಿತರ ಜತೆ ಮಾತನಾಡಿ ಸಮಾಜಕ್ಕೆ ಸಕಾರಾತ್ಮಕ ಸಂದೇಶ ರವಾನಿಸಿದ್ದ ಸುರೇಶ್
ವೈರಸ್ ಬಗ್ಗೆ ಇರುವ ಭಯ, ಅವೈಜ್ಞಾನಿಕ, ತಪ್ಪು ತಿಳುವಳಿಕೆಗಳನ್ನು ಹೋಗಲಾಡಿಸಲು ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿ ಸೋಂಕಿತರ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ್ದರು.

Latest Videos

click me!