ಸಮಾಜದಲ್ಲಿ ಕೊರೋನಾ ವೈರಸ್ ಬಗ್ಗೆ ಇರುವ ಭಯ, ಅವೈಜ್ಞಾನಿಕ, ತಪ್ಪು ತಿಳುವಳಿಕೆಗಳನ್ನು ಹೋಗಲಾಡಿಸಲು ಸಂಸದ ಡಿಕೆ ಸುರೇಶ್ ವಿಶೇಷ ಪ್ರಯತ್ನ
ಕೊರೊನಾ ವೈರಸ್ ಸೋಂಕಿತರ ಚಿಕಿತ್ಸೆಗಾಗಿ ಆಸ್ಪತ್ರೆಯನ್ನಾಗಿ ಪರಿವರ್ತಿಸಿರುವ ರಾಮನಗರದ ಕಂದಾಯ ಭವನದ ಕೋವಿಡ್19 ರೆಫರಲ್ ಆಸ್ಪತ್ರೆಗೆ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ ಭೇಟಿ ನೀಡಿ, ಸೋಂಕಿತರ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು
ಅಲ್ಲಿರುವವರಿಗೆ ಸೂಕ್ತ ಚಿಕಿತ್ಸೆ, ಊಟೋಪಚಾರ, ಆರೈಕೆ ಸರಿಯಾಗಿ ಆಗುತ್ತಿಲ್ಲ ಎಂಬ ದೂರುಗಳ ಹಿನ್ನೆಲೆಯಲ್ಲಿ ಅದನ್ನು ಖುದ್ದು ಅರಿಯಲು ರಾಮನಗರದ ಕಂದಾಯ ಭವನದ ಕೋವಿಡ್19 ರೆಫರಲ್ ಆಸ್ಪತ್ರೆಗೆ ಭೇಟಿ ನೀಡಿದರು.
ಸೋಮವಾರ ಸಂಜೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೊರೊನಾ ವೈರಸ್ ತಡೆಗಟ್ಟುವಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಅಧಿಕಾರಿಗಳೋಂದಿಗೆ ಸಭೆ ನಡೆಸಿದ ಸಂಸದ ಡಿ.ಕೆ ಸುರೇಶ್ ನಂತರ ಪಿಪಿಇ ಕಿಟ್ ಧರಿಸಿ ಕೋವಿಡ್-19 ಆಸ್ಪತ್ರೆಯಲ್ಲಿ ಸೋಂಕಿತರ ವಾರ್ಡ್ ಗಳಿಗೆ ಭೇಟಿ ಕೊಟ್ಟು ಅವರಲ್ಲಿ ಆತ್ಮ ಸ್ಥೈರ್ಯ ತುಂಬಿದ್ದಾರೆ.
ಆಸ್ಪತ್ರೆಗೆ ಭೇಟಿ ನೀಡಿದ ಸಂಸದ ಡಿ.ಕೆ ಸುರೇಶ ಅವರೊಂದಿಗೆ ಶೌಚಾಲಯದ ಸಮಸ್ಯೆ, ಸ್ವಚ್ಛತೆ ಇಲ್ಲದಿರುವುದು ಹಾಗೂ ಕುಡಿಯುವ ನೀರಿನ ಸಮಸ್ಯೆಗಳ ಬಗ್ಗೆ ಸೋಂಕಿತರು ಸಂಸದರ ಗಮನ ಸೆಳೆದಿದ್ದಾರೆ.
Covid ವಾರ್ಡ್ ಗಳಲ್ಲಿ ಇರುವ 131 ಸೋಂಕಿತರ ಜೊತೆ ಕೆಲ ಕಾಲ ಕಳೆದು, ಅವರ ಆರೋಗ್ಯ, ಅಲ್ಲಿನ ವ್ಯವಸ್ಥೆಗಳ ಪರಿಶೀಲನೆ ನಡೆಸಿದೆ. ಅವರಲ್ಲಿ ಆತ್ಮಸ್ಥೈರ್ಯ ತುಂಬಲು ಮತ್ತು ಸೋಂಕಿತರ ಮನಸ್ಸಿನ ಒಳಗಿರುವ ಭಯ ಮತ್ತು ಕೊರೋನಾ ವೈರಸ್ ಬಗೆಗಿನ ತಪ್ಪು ಗ್ರಹಿಕೆ ಹೊರಹಾಕುವ ಪ್ರಯತ್ನ ಈ ಭೇಟಿ ಹಿಂದಿನ ಉದ್ದೇಶವಾಗಿತ್ತು ಎಂದು ಡಿಕೆ ಸುರೇಶ್ ಎಂದಿದ್ದಾರೆ.
ಸೋಂಕಿತರ ಜತೆಗೆ ಕೊರೋನಾ ವಾರಿಯರ್ಸ್ ಗಳಾದ ವೈದ್ಯರು, ನರ್ಸ್ಗಳು, ಸಿಬ್ಬಂದಿ ಜತೆಗೆ ಸ್ವಯಂ ಸೇವಕರಾಗಿ ಸೇವೆ ಸಲ್ಲಿಸುತ್ತಿರುವವರೊಂದಿಗೂ ಮಾತುಕತೆ ನಡೆಸಿದರು.