CM ನಿವಾಸಕ್ಕೆ ಮುತ್ತಿಗೆ ಯತ್ನ: ಸಿದ್ದರಾಮಯ್ಯ ಸೇರಿ ‘ಕೈ’ ನಾಯಕರು ಪೊಲೀಸ್ ವಶಕ್ಕೆ

First Published | Feb 15, 2020, 3:36 PM IST

ಸರ್ಕಾರವು ದೇಶದ್ರೋಹದ ಕೇಸುಗಳನ್ನು ಹಾಕಿಸುವ ಮೂಲಕ ಪೊಲೀಸ್ ಇಲಾಖೆಯ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಕರ್ನಾಟಕ ಕಾಂಗ್ರೆಸ್ ಪ್ರತಿಭಟನೆ ಮಾಡಿದ್ದು, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿತು. ಆದ್ರೆ, ಪೊಲೀಸರು ಪ್ರತಿಭಟನೆಯನ್ನು ನಿಲ್ಲಿಸಿ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಸೇರಿದಂತೆ ಕಾಂಗ್ರೆಸ್‌ ನಾಯಕರನ್ನ ವಶಕ್ಕೆ ಪಡೆದುಕೊಂಡರು.

ಸರ್ಕಾರವು ದೇಶದ್ರೋಹದ ಕೇಸುಗಳನ್ನು ಹಾಕಿಸುವ ಮೂಲಕ ಪೊಲೀಸ್ ಇಲಾಖೆಯ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಕರ್ನಾಟಕ ಕಾಂಗ್ರೆಸ್ ಪ್ರತಿಭಟನೆ ಮಾಡಿತು.
undefined
ಪ್ರತಿಭಟನೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ರಾಜ್ಯ ಕಾಂಗ್ರೆಸ್ ನಾಯಕರು ಇದ್ದರು.
undefined

Latest Videos


ಮೌರ್ಯ ಸರ್ಕಲ್ ಬಳಿಯ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ನಾಯಕರುಗಳು ಪ್ರತಿಭಟನೆ ನಡೆಸಿದರು
undefined
ಬೀದರ್ ಶಾಲೆಯ ಮಕ್ಕಳು CAA ಮತ್ತು NRC ವಿರುದ್ಧ ನಾಟಕ ಆಡಿದ್ದನ್ನು ದೇಶದ್ರೋಹ ಎಂದು ಪರಿಗಣಿಸಿ ಅದರ ವಿರುದ್ಧ ಪ್ರಕರಣ ದಾಖಲಿಸುವ ಮುಖಾಂತರ ಪೊಲೀಸ್ ಇಲಾಖೆ ಪಕ್ಷಪಾತ ಮಾಡಿ ಆಡಳಿತ ಸರ್ಕಾರದ ಕೈಗೊಂಬೆಯಾಗಿ ವರ್ತಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.
undefined
ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ಅಮಾಯಕರ ವಿರುದ್ಧ ದೇಶದ್ರೊಹ ಮತ್ತಿತರ ಕೇಸುಗಳನ್ನು ಹಾಕಿಸುತ್ತಿರುವ ರಾಜ್ಯ ಸರ್ಕಾರಕ್ಕೆ ದಿಕ್ಕಾರ ಅಂತೆಲ್ಲಾ ಘೋಷಣೆಗಳು ಕೇಳಿಬಂದವು
undefined
ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ದ ಮಾತನಾಡಿದರೆ ಪೊಲೀಸರ ಮೂಲಕ ದೇಶ ದ್ರೋಹದ ಕೇಸು ದಾಖಲಿಸುವ ಕೆಲಸವನ್ನ ಬಿಜೆಪಿ ಸರ್ಕಾರ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿದರು.
undefined
ಮೌರ್ಯ ಸರ್ಕಲ್ ನಿಂದ ಹೊರಟ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಸಿಎಂ ಗೃಹ ಕಚೇರಿ ಕೃಷ್ಣಾಗೆ ಮುತ್ತಿಗೆ ಹಾಕಲು ಹೊರಟಾಗ ರೇಸ್ ವ್ಯೂ ಹೋಟೆಲ್ ಬಳಿ ಕಾಂಗ್ರೆಸ್ ರ‍್ಯಾಲಿಯನ್ನ ಪೊಲೀಸರು ತಡೆದರು.
undefined
ಬ್ಯಾರಿಕೇಡ್ ದಾಟಿ ಮುನ್ನುಗ್ಗಲು ಯತ್ನಿಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸೇರಿದಂತೆ ನೂರಾರು ಕಾರ್ಯಕರ್ತರನ್ನ ವಶಕ್ಕೆ ಪಡೆದ ಪೊಲೀಸರು ಬಸ್ಸಿನಲ್ಲಿ ಕರೆದೊಯ್ದು ಹಲಸೂರಿನ ಪರೇಡ್ ಗ್ರೌಂಡ್ ನಲ್ಲಿ ಬಿಡುಗಡೆ ಮಾಡಿದರು.
undefined
click me!