DCM DK Shivakumar And Temple Visiting: ಡಿಸಿಎಂ ಡಿಕೆ ಶಿವಕುಮಾರ್ ದೇವಾಲಯಕ್ಕೆ ಖಾಸಗಿ ಭೇಟಿ ನೀಡಿದ್ದಾರೆ. ಈ ಹಿಂದೆ ಬಿಎಸ್ ಯಡಿಯೂರಪ್ಪ ಸಹ ಸಿಎಂ ಆಗುವ ಮುನ್ನ ಈ ದೇವಾಲಯಕ್ಕೆ ಭೇಟಿ ನೀಡಿದ್ದರು. ಸಿಎಂ ಬದಲಾವಣೆ ಚರ್ಚೆ ನಡುವೆ ಡಿಕೆಶಿ ಭೇಟಿ ಕುತೂಹಲ ಮೂಡಿಸಿದೆ.
ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಚರ್ಚೆಗಳು ನಡೆಯುತ್ತಲೇ ಇವೆ. ಐದು ವರ್ಷಕ್ಕೆ ನಾನೇ ಸಿಎಂ ಎಂದು ಸಿದ್ದರಾಮಯ್ಯ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿತ್ತು. ಇತ್ತ ಆಷಾಢ ಶುಕ್ರವಾರದ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದಿದ್ದ ಡಿಸಿಎಂ ಡಿಕೆ ಶಿವಕುಮಾರ್, ಪ್ರಯತ್ನಗಳಿಗಿಂತ ಪ್ರಾರ್ಥನೆಯಲ್ಲಿ ನಂಬಿಕೆ ಇಟ್ಟಿರೋದಾಗಿ ಹೇಳಿದ್ದರು.
26
ಖಾಸಗಿಯಾಗಿ ಭೇಟಿ
ಡಿಕೆ ಶಿವಕುಮಾರ್ ಅವರ ಈ ಮಾತುಗಳು ಅಸಮಾಧಾನಾ ಎಂಬ ಮಾತುಗಳು ರಾಜ್ಯ ರಾಜಕಾರಣದಲ್ಲಿ ಕೇಳಿ ಬಂದಿದ್ದವು. ಈ ಎಲ್ಲಾ ಬೆಳವಣಿಗೆ ನಡುವೆ ಇಂದು ಖಾಸಗಿ ಹಾಸನ ಜಿಲ್ಲೆಯ ದೇವಾಲಯಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಖಾಸಗಿಯಾಗಿ ಭೇಟಿ ನೀಡಿದ್ದಾರೆ.
36
ಯಾವುದು ಈ ದೇವಸ್ಥಾನ? ಎಲ್ಲಿದೆ ಈ ದೇವಸ್ಥಾನ ಗೊತ್ತಾ?
ಈ ಹಿಂದೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಪಟ್ಟಕ್ಕೇರುವ ಮುನ್ನ ಈ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು. ಇದೀಗ ಈ ದೇವಸ್ಥಾನಕ್ಕೆ ಯಾವುದೇ ಭದ್ರತೆ ಇಲ್ಲದೇ ಆಗಮಿಸಿದ್ದ ಡಿಕೆ ಶಿವಕುಮಾರ್ ದರ್ಶನ ಪಡೆದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿರೋ ಡಿಕೆ ಶಿವಕುಮಾರ್, ಅಮವಾಸ್ಯೆ ಹಿನ್ನೆಲೆ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಯಾವುದು ಈ ದೇವಸ್ಥಾನ? ಎಲ್ಲಿದೆ ಈ ದೇವಸ್ಥಾನ ಗೊತ್ತಾ?
ಹೌದು, ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ನವಿಲೆ ಗ್ರಾಮದಲ್ಲಿರುವ ನಾಗೇಶ್ವರ ದೇವಾಲಯಕ್ಕಿಂದು ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ನೀಡಿದ್ದಾರೆ. ಯಾವುದೇ ಭದ್ರತೆ ಇಲ್ಲದೆ ಖಾಸಗಿ ಕಾರಿನಲ್ಲಿ ಬಂದು ನಾಗದೇವರಿಗೆ ಪೂಜೆ ಸಲ್ಲಿಕೆ ಮಾಡಿ, ನಾಗೇಶ್ವರ ದೇವರ ಆಶೀರ್ವಾದ ಪಡೆದುಕೊಂಡಿದ್ದಾರೆ. ಸಿಎಂ ಬದಲಾವಣೆ ಚರ್ಚೆ ಸಂದರ್ಭದಲ್ಲಿ ಡಿಕೆ ಶಿವವಕುಮಾರ್ ಅವರ ಈ ದೇವಾಲಯ ಭೇಟಿ ಚರ್ಚೆಗೆ ಗ್ರಾಸವಾಗಿದೆ.
ಈ ಹಿಂದೆ ಯಡಿಯೂರಪ್ಪ ಅವರು ಸಿಎಂ ಆಗೊ ಮೊದಲು ನವಿಲೆ ನಾಗೇಶ್ವರನ ಆಶೀರ್ವಾದ ಪಡೆದುಕೊಂಡಿದ್ದರು. ಒಂದು ವಾರದ ಹಿಂದೆಯಷ್ಟೇ ದೇವಾಲಯದ ಕಾರ್ಯಕ್ರಮಕ್ಕೆ ಆಗಮಿಸುವಂತೆ ಡಿಕೆ ಶಿವಕುಮಾರ್ ಅವರಿಗೆ ಆಹ್ವಾನ ನೀಡಲಾಗಿತ್ತು.
ಕಳೆದ ಒಂದು ವರ್ಷದಿಂದ ಮುಡಾ ಪ್ರಕರಣ ಸಿಎಂ ಸಿದ್ದರಾಮಯ್ಯ ಅವರನ್ನು ತೀವ್ರ ಸಂಕಷ್ಟಕ್ಕೆ ಸಿಲುಕಿಸಿತ್ತು. ಪತ್ನಿ ಪಾರ್ವತಿ ಹೆಸರಿನಲ್ಲಿ ಅಕ್ರಮವಾಗಿ ನಿವೇಶನ ಪಡೆದುಕೊಳ್ಳಲಾಗಿದೆ ಎಂಬ ಗಂಭೀರ ಆರೋಪ ಸಿದ್ದರಾಮಯ್ಯ ವಿರುದ್ಧ ಕೇಳಿ ಬಂದಿತ್ತು. ಇದನ್ನೇ ಅಸ್ತ್ರವನ್ನಾಗಿ ಮಾಡಿಕೊಂಡಿದ್ದ ವಿಪಕ್ಷಗಳು ಸಿದ್ದರಾಮಯ್ಯರ ರಾಜೀನಾಮೆಗೆ ಆಗ್ರಹಿಸಿದ್ದವು. ಇದೀಗ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಈ ಮುಡಾ ಪ್ರಕರಣ ಮುಖ್ಯಮಂತ್ರಿ ಪಟ್ಟಕ್ಕೇನೆ ಕಂಟಕದ ಛಾಯೆ ಆವರಿಸುವಂತೆ ಮಾಡಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.