ಸಿಎಂ, ಡಿಸಿಎಂ ಪ್ರಮಾಣ ವಚನ: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ರಾಹುಲ್, ಪ್ರಿಯಾಂಕಾ ಗಾಂಧಿ ಸ್ವಾಗತಿಸಿದ ಡಿಕೆಶಿ
First Published | May 20, 2023, 12:28 PM ISTಬೆಂಗಳೂರು(ಮೇ.20): ಇಂದು(ಶನಿವಾರ) ಮಧ್ಯಾಹ್ನ 12-30 ಕ್ಕೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸಿಎಂ, ಡಿಸಿಎಂ ಸೇರಿದಂತೆ 8 ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಎಐಸಿಸಿ ವರಿಷ್ಠ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ.