ಭಾರತದ ಮೊಟ್ಟಮೊದಲ ಆದಿವಾಸಿ ರಾಷ್ಟ್ರಪತಿ ಪದಗ್ರಹಣದ ಆಕರ್ಷಕ ಚಿತ್ರಗಳು

Published : Jul 25, 2022, 12:03 PM ISTUpdated : Jul 25, 2022, 12:04 PM IST

ದ್ರೌಪದಿ ಮುರ್ಮು ಅವರು ದೇಶದ 15ನೇ ರಾಷ್ಟ್ರಪತಿಯಾಗಿ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಅವರಿಂದ ಪ್ರಮಾಣ ವಚನ ಸ್ವೀಕರಿಸಿದರು. ಅವರು ದೇಶದ ಮೊದಲ ಬುಡಕಟ್ಟು ಮಹಿಳಾ ಅಧ್ಯಕ್ಷರಾಗಿದ್ದಾರೆ. ದ್ರೌಪದಿ ಮುರ್ಮು ಅವರು ಬೆಳಗ್ಗೆ 10.15ಕ್ಕೆ ಸಂಸತ್ ಭವನದ ಸೆಂಟ್ರಲ್ ಹಾಲ್ ತಲುಪಿ ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಪ್ರಮಾಣ ವಚನ ಸ್ವೀಕರಿಸಿದರು. ಅವರಿಗೆ 21 ಗನ್ ಸೆಲ್ಯೂಟ್ ನೀಡಲಾಯಿತು.  

PREV
110
ಭಾರತದ ಮೊಟ್ಟಮೊದಲ ಆದಿವಾಸಿ ರಾಷ್ಟ್ರಪತಿ ಪದಗ್ರಹಣದ ಆಕರ್ಷಕ ಚಿತ್ರಗಳು

ದ್ರೌಪದಿ ಮುರ್ಮು ಅವರಿಗೆ ದೇಶದ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಎನ್‌ ವಿ ರಮಣ ಪ್ರಮಾಣವಚನ ಬೋಧನೆ ಮಾಡಿದರು.

210

ಅಧ್ಯಕ್ಷೆ ದ್ರೌಪದಿ ಮುರ್ಮು ಅವರಿಗೆ ರಾಷ್ಟ್ರಪತಿ ಭವನದ ವತಿಯಿಂದ ಗೌರವ ರಕ್ಷೆ ನೀಡಲಾಯಿತು. ಅವರ ಜೊತೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕೂಡ ಇದ್ದರು.
 

310


ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಬಳಿಕ ದೇಶವನ್ನುದ್ದೇಶಿ ಭಾಷಣ ಮಾಡಿದ ದ್ರೌಪದಿ ಮುರ್ಮು, ಹಲವಾರು ವಿಚಾರಗಳನ್ನು ಪ್ರಸ್ತಾಪ ಮಾಡಿದರು.

410

ಪ್ರಮಾಣವಚನ ಸ್ವೀಕರಿಸಿದ ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ ಅಧ್ಯಕ್ಷೆ ಹಾಗೂ ಸಂಸದೆ ಸೋನಿಯಾ ಗಾಂಧಿ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಅಮಿತ್‌ ಶಾ, ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಭೇಟಿ ಮಾಡಿದರು. ಈ ವೇಳೆ ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಕೂಡ ಇದ್ದರು.
 

510


ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ರಾಜ್‌ಘಾಟ್‌ಗೆ ತೆರಳಿದ ದ್ರೌಪದಿ ಮುರ್ಮು ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ಸಲ್ಲಿಸಿದರು. ಆ ಬಳಿಕ ರಾಷ್ಟ್ರಪತಿ ಭವನಕ್ಕೆ ತೆರಳಿದ ಅವರನ್ನು ರಾಷ್ಟ್ರಪತಿ ಆಗಿದ್ದ ರಾಮನಾಥ್‌ ಕೋವಿಂದ್‌ ಹಾಗೂ ಅವರ ಪತ್ನಿ ಹೂಗುಚ್ಛ ನೀಡಿ ಸ್ವಾಗತಿಸಿದರು.

610

ಆ ಬಳಿಕ ರಾಷ್ಟ್ರಪತಿ ಕಾರಿನಲ್ಲಿಯೇ, ಬೆಂಗಾವಲು ಅಶ್ವದಳದೊಂದಿಗೆ ಸಂಸತ್‌ ಭವನಕ್ಕೆ ಆಗಮಿಸಿ ದ್ರೌಪದಿ ಮುರ್ಮು ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಅವರು ಪ್ರಮಾಣ ವಚನ ಸ್ವೀಕರಿಸಿದ ತಕ್ಷಣವೇ, ರಾಮನಾಥ್‌ ಕೋವಿಂದ್ ಪಕ್ಕದ ಖುರ್ಚಿಯಲ್ಲಿ ಕುಳಿತುಕೊಂಡರೆ, ದ್ರೌಪದಿ ಮುರ್ಮು ರಾಷ್ಟ್ರಪತಿ ಆಸನದಲ್ಲಿ ಕುಳಿತುಕೊಂಡರು.
 

710

ಅಧ್ಯಕ್ಷೆ ದ್ರೌಪದಿ ಮುರ್ಮು ಅವರಿಗೆ ರಾಷ್ಟ್ರಪತಿ ಭವನದ ವತಿಯಿಂದಲೂ ಗೌರವ ರಕ್ಷೆ ನೀಡಲಾಯಿತು. ಅವರ ಜೊತೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕೂಡ ಇದ್ದರು. ರಾಷ್ಟ್ರಪತಿ ದೇಶದ ಸಂವಿಧಾನದ ರಕ್ಷಕರಾಗಿರುವ ಕಾರಣ, ಅವರ ಪ್ರಮಾಣ ವಚನ ಸಮಾರಂಭ ಸಂಸತ್‌ ಭವನದಲ್ಲಿಯೇ ನಡೆಯುವುದು ಸಂಪ್ರದಾಯ

810

ಇಡೀ ಕಾರ್ಯಕ್ರಮ ಪ್ರಜಾಪ್ರಭುತ್ವ ರಾಷ್ಟ್ರವೊಂದರಲ್ಲಿ ಉನ್ನತ ಸಾಂವಿಧಾನಿಕ ಹುದ್ದೆಯಲ್ಲಿ ಅಧಿಕಾರ ಹಸ್ತಾಂತರ ಯಾವ ರೀತಿ ಶಿಸ್ತುಬದ್ಧವಾಗಿ ನಡೆಯುತ್ತದೆ ಎನ್ನುವುದನ್ನು ಸಾಕ್ಷೀಕರಿಸುವಂತಿತ್ತು.
 

910

ಸಾಂಪ್ರದಾಯಿಕ ಸೀರೆಯಲ್ಲಿ ಪ್ರಮಾಣವಚನ ಸಮಾರಂಭಕ್ಕೆ ದ್ರೌಪದಿ ಮುರ್ಮು ಬಂದಿದ್ದರು. ರಾಷ್ಟ್ರಪತಿಯವರ ವೇಷಭೂಷಣ ಯಾವ ರೀತಿ ಇರಬೇಕು ಎನ್ನುವುದನ್ನು ಸ್ವತಃ ರಾಷ್ಟ್ರಪತಿ ಭವನವೇ ತೀರ್ಮಾನ ಮಾಡುತ್ತದೆ.

1010

ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ಖುರ್ಚಿಯ ಮೇಲೆ ದ್ರೌಪದಿ ಮುರ್ಮು ಕುಳಿತಿರುವ ಅದರ ಪಕ್ಕದಲ್ಲಿ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್‌ ನಿಂತಿರುವ ಚಿತ್ರಗಳು ವೈರಲ್ ಆಗಿವೆ.

Read more Photos on
click me!

Recommended Stories