ಕರ್ನಾಟಕದ ನೂತನ ಸಿಎಂ: ಸಿದ್ದು ಫೋಟೋಗೆ ಕ್ಷೀರಾಭಿಷೇಕ, ಅಭಿಮಾನಿಗಳ ಸಂಭ್ರಮಾಚರಣೆ..!

Published : May 18, 2023, 12:20 PM IST

ಚಿತ್ರಕೃಪೆ: ವೀರಮಣಿ, ಕನ್ನಡಪ್ರಭ ಬೆಂಗಳೂರು(ಮೇ.18):  ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಆಯ್ಕೆಯಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಹೊಸ ಸಿಎಂ ಆಯ್ಕೆಗಾಗಿ ಭಾರೀ ಕಸರತ್ತು ನಡೆದಿತ್ತು. ಆದರೆ, ಹೈಕಮಾಂಡ್‌ ಕೊನೆಗೂ ಸಿದ್ದರಾಮಯ್ಯ ಅವರನ್ನ ಸಿಎಂ ಆಗಿ ಘೋಷಿಸಿದೆ. ಹೀಗಾಗಿ ಸಿದ್ದು ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.   

PREV
15
ಕರ್ನಾಟಕದ ನೂತನ ಸಿಎಂ: ಸಿದ್ದು ಫೋಟೋಗೆ ಕ್ಷೀರಾಭಿಷೇಕ, ಅಭಿಮಾನಿಗಳ ಸಂಭ್ರಮಾಚರಣೆ..!

ಬೆಂಗಳೂರಿನಲ್ಲಿರುವ ಸಿದ್ದರಾಮಯ್ಯ ಅವರ ನಿವಾಸ ಎದುರು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿ, ನೆಚ್ಚಿನ ನಾಯಕನ ಫೋಟೋಗೆ ಹಾಲಿನ ಅಭಿಷೇಕ ಮಾಡುವ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ. 

25

ಸಿದ್ದರಾಮಯ್ಯ ಅವರ ನಿವಾಸದ ಎದುರು ಪಟಾಟಿ ಸಿಡಿಸಿ ಕುಣಿದು ಕುಪ್ಪಳಿಸಿದ್ದಾರೆ. ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಹೀಗಾಗಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸಿದ್ದು ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ. 

35

ನೆರೆದ ಅಭಿಮಾನಿಗಳು ಪರಸ್ಪರ ಸಿಹಿ ಹಂಚುವ ಮೂಲಕ ಸಿದ್ದರಾಮಯ್ಯ ಪರ ಘೋಷಣೆಗಳನ್ನ ಕೂಗಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಸಿದ್ದು ನಿವಾಸದ ಸುತ್ತ ಭಾರೀ ಬಿಗಿ ಪೊಲೀಸ್‌ ಬಂದೋಬಸ್ತ್‌ ಕಲ್ಪಿಸಲಾಗಿದೆ. 

45

ಸಿದ್ದು ಅವರ ಫೋಟೋಗಳನ್ನ ಹಿಡಿದ ಅಭಿಮಾನಿಗಳು ಸಿದ್ದು ಪರ ಘೋಷಣೆಗಳನ್ನ ಕೂಗುತ್ತಿದ್ದಾರೆ. ಕಳೆದ ನಾಲ್ಕೈದು ದಿನಗಳಿಂದ ನಡೆಸಿ ಸಿಎಂ ಕುರ್ಚಿಗಾಗಿ ನಡೆದ ಪ್ರಹಸನದಲ್ಲಿ ಸಿಎಂ ಗಾದಿ ಏರುವಲ್ಲಿ ಸಿದ್ದರಾಮಯ್ಯ ಅವರು ಸಫಲರಾಗಿದ್ದಾರೆ. 

55

ಮೇ.20 ರಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ, ಡಿ.ಕೆ.ಶಿವಕುಮಾರ್ ಅವರು ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. 

Read more Photos on
click me!

Recommended Stories