ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರ ರಣತಂತ್ರಕ್ಕೆ ಕಾಂಗ್ರೆಸ್ ಭಾರೀ ಹಿನ್ನಡೆಯಾಗಿದ್ದು, ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಗೆಲುವು ಸಾಧಿಸಿದೆ
ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಜಯ ಸಾಧಿಸಿದೆ.
ತೀವ್ರ ಕುತೂಹಲ ಕೆರಳಿಸಿದ ಚಿಕ್ಕಬಳ್ಳಾಪುರ ನಗರಸಭೆಯ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಪಕ್ಷೇತರ ಸದಸ್ಯ ಡಿ.ಎಸ್. ಆನಂದ್‍ರೆಡ್ಡಿ ಹಾಗೂ ಉಪಾಧ್ಯಕ್ಷರಾಗಿ ಜೆಡಿಎಸ್‍ನ ವೀಣಾ ರಾಮು ಆಯ್ಕೆಯಾಗಿದ್ದಾರೆ.
ಒಟ್ಟು 31 ಸದಸ್ಯರನ್ನು ಹೊಂದಿರುವ ನಗರಸಭೆಯಲ್ಲಿ ಕಾಂಗ್ರೆಸ್ 16, ಬಿಜೆಪಿ 9, ಜೆಡಿಎಸ್ 2 ಹಾಗೂ ಪಕ್ಷೇತರ 4 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಸಚಿವ ಸುಧಾಕರ್ ಅವರ ರಣತಂತ್ರದಿಂದಾಗಿ ಕಾಂಗ್ರೆಸ್ ಬಹುಮತವಿದ್ದರೂ ಅಧಿಕಾರ ಬಿಜೆಪಿ ಒಲಿದಿದೆ.
ತೀವ್ರ ಜಿದ್ದಾ ಜಿದ್ದಿನ ಕಣವಾಗಿದ್ದ ಚಿಕ್ಕಬಳ್ಳಾಪುರ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಹೈಡ್ರಾಮಾಗಳು ನಡೆದಿದ್ದು ಕಾಂಗ್ರೆಸ್ ಪಕ್ಷದ ಹಿರಿಯ ಸದಸ್ಯರು ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಪಕ್ಷೇತರ ಸದಸ್ಯ ಡಿ.ಎಸ್.ಆನಂದ್‍ರೆಡ್ಡಿ ಅವರ ಪರವಾಗಿ ಮತದಾನ ಮಾಡುವ ಮಾಡುವ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಠಿಸಿದರು
ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಜಯ ಸಾಧಿಸಿದರಿಂದ ಸಚಿವ ಡಾ.ಕೆ. ಸುಧಾಕರ್ ಅವರು ಸಂಭ್ರಮಾಚರಣೆ ಆಚರಿಸಿದರು.