7 ಕೋಟಿ ಜನರ ಕಿವಿಗೆ ಹೂ ಇಟ್ಟ ಸಿದ್ದರಾಮಯ್ಯ ಬಜೆಟ್‌: ಎಚ್‌.ಡಿ.ಕುಮಾರಸ್ವಾಮಿ

Published : Feb 17, 2024, 04:35 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿದ ಎಚ್‌ಡಿಕೆ, ಈ ಬಜೆಟ್ ನೋಡಿದರೆ ಇದು ನಾಳೆ ಬಾ ಸರ್ಕಾರದಂತೆ ಇದೆ. ಹಿಂದಿನ ಬಿಜೆಪಿ ಸರ್ಕಾರ ಬಜೆಟ್ ಮಂಡನೆ ಮಾಡಿದ್ದಾಗ ಸದನಕ್ಕೆ ಬರುವಾಗ ಕಿವಿಗೆ ಹೂವು ಇಟ್ಟುಕೊಂಡು ಸಿದ್ದರಾಮಯ್ಯ ಬಂದಿದ್ದರು.

PREV
15
7 ಕೋಟಿ ಜನರ ಕಿವಿಗೆ ಹೂ ಇಟ್ಟ ಸಿದ್ದರಾಮಯ್ಯ ಬಜೆಟ್‌: ಎಚ್‌.ಡಿ.ಕುಮಾರಸ್ವಾಮಿ

ಬೆಂಗಳೂರು (ಫೆ.17): ‘ಸರ್ಕಾರದಿಂದ ಯಾವುದಾದರೂ ಯೋಜನೆ ಜಾರಿ ಮಾಡುವ ಮುನ್ನ ಸಮಗ್ರ ಯೋಜನಾ ವರದಿ (ಡಿಪಿಆರ್‌) ಅಂತ ಮಾಡುತ್ತಾರೆ. ಆ ಡಿಪಿಆರ್‌ ಆದ ಮೇಲೆ ಏನೆಲ್ಲ ಆಗುತ್ತದೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಷಯ. ಈ ಬಜೆಟ್ ಕೂಡ ಹಾಗೆಯೇ ಇದೆ’ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

25

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಈ ಬಜೆಟ್ ನೋಡಿದರೆ ಇದು ನಾಳೆ ಬಾ ಸರ್ಕಾರದಂತೆ ಇದೆ. ಹಿಂದಿನ ಬಿಜೆಪಿ ಸರ್ಕಾರ ಬಜೆಟ್ ಮಂಡನೆ ಮಾಡಿದ್ದಾಗ ಸದನಕ್ಕೆ ಬರುವಾಗ ಕಿವಿಗೆ ಹೂವು ಇಟ್ಟುಕೊಂಡು ಸಿದ್ದರಾಮಯ್ಯ ಬಂದಿದ್ದರು. ಈಗ ಅದೇ ಹೂವನ್ನ ಏಳು ಕೋಟಿ ಜನರ ಕಿವಿಗೆ ಇಟ್ಟಿದ್ದಾರೆ ಎಂದು ಲೇವಡಿ ಮಾಡಿದರು.

35

ಬಜೆಟ್ ಓದುವಾಗಲೇ ನನಗೆ ಅನಿಸಿದ್ದು ಅವರಲ್ಲಿ ವಿಶ್ವಾಸದ ಕೊರತೆ ಎದ್ದು ಕಾಣುತ್ತಿದೆ. ಅವರು ಗ್ಯಾರಂಟಿಯ ಗುಂಗಿನಿಂದ ಇನ್ನೂ ಹೊರಗೇ ಬಂದಿಲ್ಲ. 10 ತಿಂಗಳು ಕಳೆದರೂ ಇನ್ನೂ ಗ್ಯಾರಂಟಿಗಳ ಬಗ್ಗೆಯೇ ಕನವರಿಕೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರ 15ನೇ ಬಜೆಟ್ ಇದು. ರಾಜ್ಯದ ಇತಿಹಾಸದಲ್ಲಿ ಇಷ್ಟು ಬಜೆಟ್‌ಗಳನ್ನು ಮಂಡಿಸುವವರು ಮುಂದೆ ಬರುತ್ತಾರೋ ಇಲ್ಲವೋ ಗೊತ್ತಿಲ್ಲ. 

45

ಸಿದ್ದರಾಮಯ್ಯ ಅವರಿಗೆ ಆಡಳಿತದಲ್ಲಿ ಸಾಕಷ್ಟು ಅನುಭವ ಇದೆ. ಆದರೆ, ಬಜೆಟ್ ನೋಡಿದರೆ ಯಾವುದೇ ರೀತಿಯ ವಿಶ್ವಾಸ ಮೂಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಸರ್ಕಾರದ ಖಜಾನೆ ಖಾಲಿ ಆಗಿದೆ ಅಂತ ನಾವು ಹೇಳಲ್ಲ. ಜನರು ಸಮೃದ್ಧಿಯಾಗಿ ಖಜಾನೆ ತುಂಬಿಸಿದ್ದಾರೆ. 

55

ಈ ಬಜೆಟ್ ನೋಡಿದರೆ ಜನರು ನಾವು ಎಷ್ಟು ತಪ್ಪು ಮಾಡಿದ್ದೇವೆ ಇವರನ್ನು ಗೆಲ್ಲಿಸಿ ಎಂದು ಜನ ಅಂದುಕೊಂಡಿದ್ದಾರೆ. ಕೇಂದ್ರ ಸರ್ಕಾರ ಅಮೃತಕಾಲ ಅಂದರೆ ಸಿದ್ದರಾಮಯ್ಯ ಅವರು ವಿನಾಶಕಾಲ ಎಂದರು. ಇವತ್ತಿನ ಬಜೆಟ್ ರಾಜ್ಯದ ವಿನಾಶಕಾಲಕ್ಕೆ ಬುನಾದಿ ಹಾಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Read more Photos on
click me!

Recommended Stories