ಅಧಿಕೃತವಾಗಿ ರಾಜ್ಯ ರಾಜಕಾರಣಕ್ಕೆ ಎಂಟ್ರಿ ಕೊಟ್ರು ಪ್ರತಾಪ್ ಸಿಂಹ? ಇದುವೇ ಇವರ ವಿಧಾನಸಭಾ ಕ್ಷೇತ್ರ!

Published : Jan 05, 2026, 10:43 AM IST

ಮೈಸೂರು-ಕೊಡಗು ಕ್ಷೇತ್ರದ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ರಾಜ್ಯ ರಾಜಕಾರಣಕ್ಕೆ ಪ್ರವೇಶಿಸುವ ಸುಳಿವು ನೀಡಿದ್ದಾರೆ. ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡುವ ಮೂಲಕ, ಅವರು ಮೈಸೂರಿನ ಒಕ್ಕಲಿಗರ ಪ್ರಾಬಲ್ಯವಿರುವ ಚಾಮರಾಜ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆಯನ್ನು ಬಲಪಡಿಸಿದ್ದಾರೆ.

PREV
16
ರಾಜ್ಯ ರಾಜಕಾರಣಕ್ಕೆ ಮಾಜಿ ಸಂಸದರಾದ ಪ್ರತಾಪ್ ಸಿಂಹ ಪ್ರವೇಶ

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮಾಜಿ ಸಂಸದರಾದ ಪ್ರತಾಪ್ ಸಿಂಹ ಇದೀಗ ರಾಜ್ಯ ರಾಜಕಾರಣದತ್ತ ಮುಖ ಮಾಡಿದ್ದಾರೆ. ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡುವ ಮೂಲಕ ತಮ್ಮ ಮುಂದಿನ ರಾಜಕೀಯ ಜೀವನದ ಕರ್ತವ್ಯ ಪಥ ಯಾವುದು ಎಂಬುದರ ಮಾಹಿತಿಯನ್ನು ನೀಡಿದ್ದಾರೆ.

26
ಯಾವ ವಿಧಾನಸಭಾ ಕ್ಷೇತ್ರ?

ಕೆಲ ತಿಂಗಳ ಹಿಂದೆಯಷ್ಟೇ ಸ್ಥಳೀಯ ಪತ್ರಿಕೆಗೆ ಸಂದರ್ಶನ ನೀಡಿದ್ದ ಪ್ರತಾಪ್ ಸಿಂಹ, ರಾಜ್ಯ ರಾಜಕಾರಣಕ್ಕೆ ಬರುತ್ತಿರುವ ಮಾಹಿತಿಯನ್ನು ನೀಡಿದ್ದಾರೆ. ಮೈಸೂರು ಜಿಲ್ಲೆಯಲ್ಲಿನ ವಿಧಾನಸಭಾ ಕ್ಷೇತ್ರದಿಂದಲೇ ರಾಜ್ಯ ರಾಜಕಾರಣ ಆರಂಭಿಸುತ್ತೇನೆ ಎಂದಿದ್ದರು. ಆದ್ರೆ ಯಾವ ವಿಧಾನಸಭಾ ಕ್ಷೇತ್ರ ಎಂಬುದರ ಮಾಹಿತಿಯನ್ನು ಬಿಟ್ಟುಕೊಟ್ಟಿರಲಿಲ್ಲ. ಇದೀಗ ಆ ಕುತೂಹಲಕ್ಕೆ ಪ್ರತಾಪ್ ಸಿಂಹ ತೆರೆ ಎಳೆದಿದ್ದಾರೆ.

36
ಕ್ಯಾಲೆಂಡರ್‌ ಬಿಡುಗಡೆ

ಪ್ರತಾಪ್ ಸಿಂಹ ಸ್ನೇಹ ಬಳಗದ ಹೆಸರಿನಲ್ಲಿ ಕ್ಯಾಲೆಂಡರ್‌ ಬಿಡುಗಡೆ ಮಾಡಲಾಗಿದೆ. ಈ ಕ್ಯಾಲೆಂಡರ್‌ನಲ್ಲಿ ಪ್ರಧಾನಿ ಮೋದಿ ಫೋಟೊ ಜೊತೆಗೆ ಪ್ರತಾಪ್ ಸಿಂಹ ಅವರ ಫೋಟೋ ಮತ್ತು ಬಿಜೆಪಿ ಚಿಹ್ನೆಯನ್ನು ಬಳಸಲಾಗಿದೆ. ಕ್ಯಾಲೆಂಡರ್ ನ ಪ್ರತಿ ಹಾಳೆಯಲ್ಲಿ ಈ ಹಿಂದೆ ಮೈಸೂರು-ಕೊಡಗು ಸಂಸದರಾಗಿದ್ದಾಗ ಮಾಡಿದ ಅಭಿವೃದ್ಧಿ ಕಾರ್ಯಕ್ರಮಗಳ ಫೋಟೋ ಬಳಕೆ ಮಾಡಲಾಗಿದೆ.

46
ಒಕ್ಕಲಿಗರ ಪ್ರಾಬಲ್ಯ ಹೊಂದಿರುವ ವಿಧಾನಸಭಾ ಕ್ಷೇತ್ರ

ಮೈಸೂರು ನಗರದ ಚಾಮರಾಜ ವಿಧಾನಸಭಾ ಕ್ಷೇತ್ರವನ್ನು ಪ್ರತಾಪ್ ಸಿಂಹ ತಮ್ಮ ಕರ್ಮಭೂಮಿಯನ್ನಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಒಕ್ಕಲಿಗರ ಪ್ರಾಬಲ್ಯ ಹೊಂದಿರುವ ವಿಧಾನಸಭಾ ಕ್ಷೇತ್ರ ಇದಾಗಿದ್ದು, ಮುಂದಿನ ಚುನಾವಣೆಗೆ ಇಲ್ಲಿಂದಲೇ ಸ್ಪರ್ಧಿಸಲು ಪ್ರತಾಪ್ ಸಿಂಹ ಎಲ್ಲಾ ತಯಾರಿ ಮಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಖರ್ಗೆ ಪಿಯುಸಿ ಫೇಲಾದ ಮಗನಿಗೆ ಐಟಿ-ಬಿಟಿ ಖಾತೆ ಕೊಡಿಸಿ ಬೆಂಗಳೂರಿಗೆ ಕೆಟ್ಟ ಹೆಸರು ತಂದ್ರು; ಪ್ರತಾಪ್ ಸಿಂಹ!

56
ಚಾಮರಾಜ ಕ್ಷೇತ್ರದ ಬಿಜೆಪಿ ಮುಖಂಡರು

ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮಕ್ಕೆ ಚಾಮರಾಜ ಕ್ಷೇತ್ರದ ಬಿಜೆಪಿ ನಗರಪಾಲಿಕೆ ಮಾಜಿ ಸದಸ್ಯರು, ಮುಖಂಡರು ಹಾಗೂ ಕಾರ್ಯಕರ್ತರು ಆಗಮಿಸಿದ್ದಾರೆ. ಪ್ರತಾಪ್ ಸಿಂಹ ಎರಡು ಬಾರಿ ಸಂಸದರಾಗಿದ್ದು, ಈ ಹಿಂದಿನ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಪಡೆದುಕೊಳ್ಳುವಲ್ಲಿ ವಿಫಲರಾಗಿದ್ದರು.

ಇದನ್ನೂ ಓದಿ: 16 ಬಾರಿ ಬಜೆಟ್ ಮಂಡಿಸಿದ ವಿಶ್ವದ ಕುಖ್ಯಾತ ಅರ್ಥಶಾಸ್ತ್ರಜ್ಞ ಸಿದ್ದರಾಮಯ್ಯ, ಸತ್ತ ಸರ್ಕಾರದ ಮುಖ್ಯಮಂತ್ರಿ: ಪ್ರತಾಪ್ ಸಿಂಹ ವಾಗ್ದಾಳಿ

66
ಚಾಮರಾಜ ಕ್ಷೇತ್ರ ಯಾಕೆ?

ಚಾಮರಾಜ ಕ್ಷೇತ್ರ ಹಣದ ಪ್ಯಾಕೇಟ್ ಕೊಟ್ಟು ಗೆಲ್ಲುವ ಕ್ಷೇತ್ರ ಅಲ್ಲ. ಇಲ್ಲಿಯ ಮತದಾರರು ಕೆಲಸ ನೋಡಿ ಪ್ರೀತಿ ತೋರಿಸುವ ಜನ. ಒಕ್ಕಲಿಗೆ ಲೆಕ್ಕದಲ್ಲೇ ಈ ಕ್ಷೇತ್ರ ನೋಡುತ್ತಿಲ್ಲ. ಇಲ್ಲಿ ಎಲ್ಲ ರೀತಿಯ ವರ್ಗದ ಜನರಿದ್ದಾರೆ. ಪ್ರಜ್ಞಾವಂತ ಬುದ್ಧಿವಂತರಿದ್ದಾರೆ. ಹೀಗಾಗಿ ಸಹಜವಾಗಿ ನನ್ನ ಆಯ್ಕೆಯಾಗಿದೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories