ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹಾಗೂ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಇಂದು (ಸೋಮವಾರ) ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಮಾರ್ಚ್ 31ರಂದು ದೇವೇಗೌಡರು ತಮಗೆ ಹಾಗೂ ಪತ್ನಿ ಚನ್ನಮ್ಮ ಅವರಿಗೆ ಸೋಂಕು ತಗುಲಿರೋದು ದೃಢಪಟ್ಟಿದೆ ಎಂದು ಟ್ವೀಟ್ ಮಾಡಿ ಮಾಹಿತಿ ನೀಡಿದ್ದರು. ಬಳಿಕ ದೇವೇಗೌಡ ದಂಪತಿ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು
ಇದೀಗ ದಂಪತಿ ಚೇತರಿಸಿಕೊಂಡಿದ್ದು, ಇಬ್ಬರನ್ನೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಆಸ್ಪತ್ರೆಯ ವೈದ್ಯರು ದೇವೇಗೌಡರಿಗೆ ಹೂಗುಚ್ಛ ನೀಡಿ ಬೀಳ್ಕೊಟ್ಟಿದ್ದಾರೆ.
ಕೆಲವು ದಿನಗಳ ಕಾಲ ಮನೆಯಲ್ಲಿ ವಿಶ್ರಾಂತಿ ಪಡೆಯುವಂತೆ ದೇವೇಗೌಡ್ರಿಗೆ ವೈದ್ಯರು ಸಲಹೆ ಕೊಟ್ಟಿದ್ದಾರೆ.
ಇನ್ನು ದೇವೇಗೌಡ್ರ ಪತ್ನಿ ಚೆನ್ನಮ್ಮ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಹೆಚ್‌ಡಿಡಿ ಕೆಲವು ದಿನಗಳ ಕಾಲ ಮನೆಯಲ್ಲಿ ವಿಶ್ರಾಂತಿ ಪಡೆಯುವುದರಿಂದ ಉಪಚುನಾವಣೆ ಪ್ರಚಾರದಲ್ಲಿ ಭಾಗವಹಿಸುವುದು ಬಹುತೇಕ ಅನುಮಾನವಾಗಿದೆ.