ಕಾಂಗ್ರೆಸ್ ಮೊದಲ‌ ಪಟ್ಚಿಯಲ್ಲಿ ತಂದೆ-ಮಕ್ಕಳ ದರ್ಬಾರ್! ಯಾರಿಗೆಲ್ಲ ಸಿಕ್ತು ಟಿಕೆಟ್?

Published : Mar 25, 2023, 12:26 PM IST

ಬೆಂಗಳೂರು(ಮಾ.25) 2023 ರ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗುವ ಮುನ್ನವೇ ಕಾಂಗ್ರೆಸ್‌ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಳೆದ 3 - 4 ದಿನಗಳಿಂದ ಪಟ್ಟಿ ಬಿಡುಗಡೆಯಾಗಲಿದೆ ಎಂದು ಸುದ್ದಿ ಹಬ್ಬಿತ್ತು. ಇದೀಗ ಕೊನೆಗೂ ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸುವ ದಿನವೇ ಕಾಂಗ್ರೆಸ್‌ 124 ವಿಧಾನಸಭಾ ಕ್ಷೇತ್ರಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಾಂಗ್ರೆಸ್ ನ ಮೊದಲ ಪಟ್ಟಿಯಲ್ಲಿ ಎಂದಿನಂತೆ ಈ ಬಾರಿ ಕೂಡ ತಂದೆ ಮಕ್ಕಳಿಗೆ ಟಿಕೆಟ್ ನೀಡಲಾಗಿದೆ. ಯಾರಿಗೆಲ್ಲ ಯಾವ ಕ್ಷೇತ್ರದಿಂದ ಟಿಕೆಟ್ ಸಿಕ್ಕಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

PREV
14
ಕಾಂಗ್ರೆಸ್ ಮೊದಲ‌ ಪಟ್ಚಿಯಲ್ಲಿ ತಂದೆ-ಮಕ್ಕಳ ದರ್ಬಾರ್! ಯಾರಿಗೆಲ್ಲ ಸಿಕ್ತು ಟಿಕೆಟ್?

ಎಂ ಕೃಷ್ಣಪ್ಪ ಮತ್ತು  ಪ್ರಿಯಾಕೃಷ್ಣ : ಕಾಂಗ್ರೆಸ್ ನ ಮೊದಲ ಪಟ್ಟಿಯಲ್ಲಿ ವಿಜಯನಗರ ಕ್ಷೇತ್ರದ ಹಾಲಿ ಶಾಸಕ ಎಂ. ಕೃಷ್ಣಪ್ಪ ಮತ್ತು ಅವರ ಪುತ್ರ ಪ್ರಿಯಾ ಕೃಷ್ಣ ಅವರಿಗೆ  ಟಿಕೆಟ್ ಲಭಿಸಿದೆ. 2018 ರ ಚುನಾವಣೆಯಲ್ಲಿ ಗೋವಿಂದರಾಜನಗರ ಕ್ಷೇತ್ರದಿಂದ ನಿಂತಿದ್ದ ಪ್ರಿಯಾ ಕೃಷ್ಣ ಅವರು ವಿ. ಸೋಮಣ್ಣ ಅವರ ವಿರುದ್ಧ ಸೋಲು ಕಂಡಿದ್ದರು. ಈ ಬಾರಿ ಕೂಡ  ಗೋವಿಂದರಾಜನಗರ ಕ್ಷೇತ್ರದಿಂದಲೇ ಪ್ರಿಯಾ ಕೃಷ್ಣ ಅವರಿಗೆ ಟಿಕೆಟ್ ಲಭಿಸಿದೆ. ಕೃಷ್ಣಪ್ಪ ಅವರಿಗೆ  ವಿಜಯನಗರ ಕ್ಷೇತ್ರದಿಂದಲೇ ಟಿಕೆಟ್ ನೀಡಲಾಗಿದೆ.

24

ಕೆ.ಹೆಚ್.ಮುನಿಯಪ್ಪ ಮತ್ತು ರೂಪ ಶಶಿಧರ್: 
ಕರ್ನಾಟಕ ರಾಜಕೀಯ ರಂಗದ ಅತ್ಯಂತ ಹಿರಿಯ ರಾಜಕಾರಣಿಗಳಲ್ಲೊಬ್ಬರಾಗಿರುವ ಮುನಿಯಪ್ಪ ಅವರಿಗೆ ಈ ಬಾರಿ ದೇವನಹಳ್ಳಿ ಕ್ಷೇತ್ರದ ಟಿಕೆಟ್ ನೀಡಲಾಗಿದೆ.  2018ರಲ್ಲಿ ನಿಸರ್ಗ ನಾರಾಯಣಸ್ವಾಮಿ ಇಲ್ಲಿ ಜೆಡಿಎಸ್‌ನಿಂದ ಶಾಸಕರಾಗಿ ಆಯ್ಕೆಯಾಗಿದ್ದರು.  ಮುನಿಯಪ್ಪ ಅವರ ಪುತ್ರಿ ಹಾಲಿ ಕೆಜಿಎಫ್‌ ಶಾಸಕಿ ರೂಪಾ ಶಶಿಧರ್ ಅವರಿಗೆ ಈ ಬಾರಿ ಕೂಡ ಕೆಜಿಎಫ್‌  ನಿಂದಲೇ ಟಿಕೆಟ್ ಸಿಕ್ಕಿದೆ. 
 

34

ಸೌಮ್ಯರೆಡ್ಡಿ ಮತ್ತು ರಾಮಲಿಂಗಾರೆಡ್ಡಿ: ಬಿಟಿಎಂ ಕ್ಷೇತ್ರದ ಶಾಸಕರಾಗಿರುವ ರಾಮಲಿಂಗಾ ರೆಡ್ಡಿ ಅವರು  ಪ್ರಾಬಲ್ಯ ಹೊಂದಿರುವ  ಸಮರ್ಥ ಅಭ್ಯರ್ಥಿಯಾಗಲಿದ್ದಾರೆ. ಅವರ ಪುತ್ರಿ ಸೌಮ್ಯಾ ರೆಡ್ಡಿ  ಜಯನಗರ ಕ್ಷೇತ್ರದಿಂದ ಟಿಕೆಟ್ ಪಡೆದಿದ್ದಾರೆ. 2018 ರಲ್ಲಿ ಮೊದಲ ಬಾರಿಗೆ ಜಯನಗರ ಕ್ಷೇತ್ರದಿಂದ ನಿಂತು ಗೆದ್ದಿರುವ ಸೌಮ್ಯಾ ರೆಡ್ಡಿಗೆ ಈ ಬಾರಿ ಕೂಡ ಟಿಕೆಟ್ ಲಭಿಸಿದೆ. 
 

44

ಶಾಮನೂರು ಶಿವಶಂಕರಪ್ಪ ಮತ್ತು ಮಲ್ಲಿಕಾರ್ಜುನ್:  92 ವರ್ಷದ ಶಾಮನೂರು ಶಿವಶಂಕರಪ್ಪನವರು ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಹಾಲಿ ಶಾಸಕರಾಗಿದ್ದಾರೆ. ಇವರು ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕ ಜೊತೆಗೆ ಹಿರಿಯ ನಾಯಕ ಕೂಡ. ಈ ಬಾರಿ ಕೂಡ  ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಇನ್ನು ಶಾಮನೂರು ಶಿವಶಂಕರಪ್ಪ ಪುತ್ರ ಎಸ್​.ಎಸ್. ಮಲ್ಲಿಕಾರ್ಜುನ  ಅವರಿಗೆ ಕೂಡ ಈ ಬಾರಿ ದಾವಣಗೆರೆ ಉತ್ತರ ಕ್ಷೇತ್ರದಿಂದ ಈ ಬಾರಿ ಟಿಕೆಟ್ ನೀಡಲಾಗಿದೆ. ಇಲ್ಲಿ 2018 ರಲ್ಲಿ ಬಿಜೆಪಿಯ ಎಸ್ ಎ ರವೀಂದ್ರನಾಥ್ ಗೆಲುವು ಸಾಧಿಸಿದ್ದರು.  ಮಲ್ಲಿಕಾರ್ಜುನ 4071 ಮತಗಳ ಅಂತರದಿಂದ ಸೋಲು ಕಂಡಿದ್ದರು. ವಿಶೇಷವೆಂದರೆ  ಮಲ್ಲಿಕಾರ್ಜುನ ಅವರ ರೈಸ್ ಮಿಲ್ ಮತ್ತು ಫಾರ್ಮ್ ಹೌಸ್‌ನಲ್ಲಿ ವನ್ಯ‌ಜೀವಿಗಳನ್ನು ಸಾಕಿರುವ ಆರೋಪವಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories