ಅಪಘಾತಗೊಂಡು ಆಸ್ಪತ್ರೆ ಸೇರಿದರೂ, ಆಂಬುಲೆನ್ಸ್‌ನಲ್ಲಿ ಬಂದು ಪ್ರಚಾರ ಮಾಡಿದ ಬಾಬುರಾವ್ ಚಿಂಚನಸೂರು!

Published : May 04, 2023, 07:15 PM ISTUpdated : May 04, 2023, 07:35 PM IST

ಯಾದಗಿರಿ (ಏ.14): ಇತ್ತೀಚೆಗೆ ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಗುರುಮಠಕಲ್‌ ಕಾಂಗ್ರೆಸ್‌ ಅಭ್ಯರ್ಥಿ ಆಂಬುಲೆನ್ಸ್‌ನಲ್ಲಿಯೇ ಬಂದು ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡರು. ಚುನಾವಣೆಯ ನಾಮಪತ್ರ ಸಲ್ಲಿಕೆ ದಿನಾಂಕಕ್ಕೂ ಮೊದಲು ಕಾರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು, ಇದೀಗ ಗುಣಮುಖರಾಗುತ್ತಿರುವ ಯಾದಗಿರಿ ಜಿಲ್ಲೆಯ ಗುರುಮಠಕಲ್ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ,  ಬಾಬುರಾವ್ ಚಿಂಚನಸೂರು  ಅವರು ಆಸ್ಪತ್ರೆಯಿಂದ ಆಂಬುಲೆನ್ಸ್‌ನಲ್ಲಿಯೇ ಬಂದು ಸ್ಟ್ರೆಚರ್‌ನಲ್ಲಿ ಮಲಗಿ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿದರು.

PREV
18
ಅಪಘಾತಗೊಂಡು ಆಸ್ಪತ್ರೆ ಸೇರಿದರೂ, ಆಂಬುಲೆನ್ಸ್‌ನಲ್ಲಿ ಬಂದು ಪ್ರಚಾರ ಮಾಡಿದ ಬಾಬುರಾವ್ ಚಿಂಚನಸೂರು!

ಇತ್ತೀಚೆಗೆ ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಬಾಬುರಾವ್‌ ಚಿಂಚನಸೂರು ಆಂಬುಲೆನ್ಸ್‌ನಲ್ಲಿಯೇ ಬಂದು ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡರು.

28

ಚುನಾವಣೆಗೂ ಮುನ್ನ ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಗುರುಮಠಕಲ್‌ ಕಾಂಗ್ರೆಸ್‌ ಅಭ್ಯರ್ಥಿ ಬಾಬುರಾವ್‌ ಚಿಂಚನಸೂರು ಅವರು ಸ್ಟ್ರೆಚರ್‌ನಲ್ಲಿಯೇ ಕುಳಿತು ಮತದಾರರ ಬಳಿ ಮತಯಾಚನೆ ಮಾಡಿದರು. 

38

ಬಾಬುರಾವ್‌ ಚಿಂಚನಸೂರು ಅವರು ಯಾದಗಿರಿ ಜಿಲ್ಲೆಯ ಗುರುಮಠಕಲ್‌ ವಿಧಾನಸಭಾ ಕ್ಷೇತ್ರದಕ್ಕೆ ಆಂಬುಲೆನ್ಸ್‌ನಲ್ಲಿ ಆಗಮಿಸಿದರು.

48

ಗುರುಮಠಕಲ್‌ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್‌ ಚುನಾವಣಾ ಪ್ರಚಾರಕ್ಕೆ ಸ್ಟ್ರೆಚರ್‌ನಲ್ಲಿ ಮಲಗಿಸಿ ವೇದಿಕೆ ಮೇಲೆ ಕರೆದೊಯ್ಯಲಾಯಿತು.

58

ಕಾಂಗ್ರೆಸ್‌ ಸಮಾವೇಶಕ್ಕೆ ಆಂಬುಲೆನ್ಸ್‌ನಲ್ಲಿ ಆಗಮಿಸಿದ ಬಾಬುರಾವ್‌ ಚಿಂಚನಸೂರು ಸ್ಟ್ರೆಷರ್‌ನಲ್ಲಿಯೇ ತಮ್ಮ ಆಪ್ತರಿಗೆ ನಮಸ್ಕರಿಸಿದರು. 

68

ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್‌ ಅಭ್ಯರ್ಥಿ ಬಾಬುರಾವ್‌ ಚಿಂಚನಸೂರು ಅವರನ್ನು ಆಪ್ತರು ಆರೋಗ್ಯ ವಿಚಾರಿಸಿದರು.

78

ಕಾರು ಅಪಘಾತದಲ್ಲಿ ಗಾಯಗೊಂಡ ಕಾಂಗ್ರೆಸ್‌ ಅಭ್ಯರ್ಥಿ ಬಾಬುರಾವ್‌ ಚಿಂಚನಸೂರು ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದು. 

88

ಗುರುಮಠಕಲ್ ಕಾಂಗ್ರೆಸ್‌ ಅಭ್ಯರ್ಥಿ ಬಾಬುರಾವ್‌ ಚಿಂಚನಸೂರು ಅವರು ಅಪಘಾತಕ್ಕೂ ಮುನ್ನ ಕ್ಷೇತ್ರದಲ್ಲಿನ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. 

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories