ನನಗೀಗ ಹೊಸ ಜೀವನ ಸಿಕ್ಕಿದೆ: ಹೃದಯದ ಶಸ್ತ್ರಚಿಕಿತ್ಸೆ ಬಳಿಕ ಎಚ್‌ಡಿಕೆ ಹೇಳಿದಿಷ್ಟು..

Published : Mar 25, 2024, 05:03 AM IST

ಮೂರು ದಿನಗಳ ಹಿಂದೆ ಹೃದಯದ ಶಸ್ತ್ರಚಿಕಿತ್ಸೆಗೊಳಗಾಗಿದ್ದ ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಚೆನ್ನೈ ನಗರದ ಆಸ್ಪತ್ರೆಯಿಂದ ಶನಿವಾರ ಮನೆಗೆ ಮರಳಿದರು.

PREV
15
ನನಗೀಗ ಹೊಸ ಜೀವನ ಸಿಕ್ಕಿದೆ: ಹೃದಯದ ಶಸ್ತ್ರಚಿಕಿತ್ಸೆ ಬಳಿಕ ಎಚ್‌ಡಿಕೆ ಹೇಳಿದಿಷ್ಟು..

ಬೆಂಗಳೂರು (ಮಾ.25): ಮೂರು ದಿನಗಳ ಹಿಂದೆ ಹೃದಯದ ಶಸ್ತ್ರಚಿಕಿತ್ಸೆಗೊಳಗಾಗಿದ್ದ ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಚೆನ್ನೈ ನಗರದ ಆಸ್ಪತ್ರೆಯಿಂದ ಶನಿವಾರ ಮನೆಗೆ ಮರಳಿದರು.

25

ಜೆ.ಪಿ.ನಗರದ ತಮ್ಮ ಮನೆ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ತಮಗೆ ಹೊಸ ಜೀವನ ಸಿಕ್ಕಿದೆ. ನಾನು ಸಂಪೂರ್ಣವಾಗಿ ಆರೋಗ್ಯವಾಗಿದ್ದೇನೆ ಎಂದರು.

35

ನಾನು ಆಪರೇಷನ್‌ಗೆ ತೆರಳಿದ ಸಂದರ್ಭದಲ್ಲಿ ರಾಜ್ಯಾದ್ಯಂತ ವಿವಿಧ ದೇವಾಲಯಗಳಲ್ಲಿ ನನ್ನ ಹಿತೈಷಿಗಳು ಮತ್ತು ಅಭಿಮಾನಿಗಳು ಪೂಜೆ ಸಲ್ಲಿಸಿದ್ದರು. ಆ ದೇವರ ಅನುಗ್ರಹ ಹಾಗೂ ಜನರ ಪೂಜೆ ಫಲಿಸಿದೆ. ನಿಮಗೆ ಸಾಯಿ ಬಾಬಾನೇ ಆಪರೇಷನ್ ಮಾಡಿದ್ದಾರೆ ಎಂದು ವೈದ್ಯ ಡಾ.ಸಾಯಿ ಸತೀಶ್‌ ಹೇಳಿದ್ದಾಗಿ ಕುಮಾರಸ್ವಾಮಿ ತಿಳಿಸಿದರು.

45

ನನ್ನ ಶಸ್ತ್ರ ಚಿಕಿತ್ಸೆಯಲ್ಲಿ ಹಂಗೇರಿ ದೇಶದ ವೈದ್ಯರು ಪಾಲ್ಗೊಂಡಿದ್ದರು. ವೈದ್ಯಕೀಯ ರಂಗದಲ್ಲಿ ಹೊಸ ಆವಿಷ್ಕಾರಗಳು ಜನರ ಪ್ರಾಣ ಉಳಿಸಲು ಅನುಕೂಲವಾಗಿವೆ ಎಂದು ನುಡಿದರು.

55

ಮೂರು ದಿನಗಳ ಹಿಂದೆ ತಮಿಳುನಾಡಿನ ಚೆನ್ನೈ ನಗರದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯಲ್ಲಿ ಕುಮಾರಸ್ವಾಮಿ ಅವರಿಗೆ ಹೃದಯದ ಶಸ್ತ್ರಚಿಕಿತ್ಸೆ ನಡೆದಿತ್ತು. ಭಾನುವಾರ ವಿಶೇಷ ವಿಮಾನದಲ್ಲಿ ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ಜೆ.ಪಿ.ನಗರ ನಿವಾಸಕ್ಕೆ ತೆರಳಿದರು.

Read more Photos on
click me!

Recommended Stories