ರೆಸಾರ್ಟ್‌ನಲ್ಲಿ ರಾಜ್ಯ ಕಾಂಗ್ರೆಸ್ ಹಿರಿಯ ನಾಯಕರ ಮಹತ್ವದ ಸಭೆಯ ಇನ್‌ಸೈಡ್ ಡಿಟೇಲ್ಸ್

ವಿಧಾನಸಭೆ, ಲೋಕಸಭೆ ಸೇರಿದಂತೆ ಎಲ್ಲ ಚುನಾವಣೆಗಳಲ್ಲಿ ಪಕ್ಷ ಹೀನಾಯವಾಗಿ ಸೋಲುತ್ತಿರುವುದು ಹಾಗೂ ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆ ಮಾಡುವ ಕುರಿತು ಕರ್ನಾಟಕ ಕಾಂಗ್ರೆಸ್ ಹಿರಿಯ ನಾಯಕರ ಸಭೆ ನಡೆದಿದ್ದು, ಮಹತ್ವದ ವಿಷಯಗಳ ಬಗ್ಗೆ ಚರ್ಚೆಯಾಗಿವೆ. ಹಾಗಾದ್ರೆ, ಸಭೆಯ ಇನ್‌ಸೈಡ್‌ನಲ್ಲಿ ಏನೆಲ್ಲಾ ಚರ್ಚೆಗಳಾದವು ಎನ್ನುವ ಅಂಶಗಳು ಇಂತಿವೆ.

ಕರ್ನಾಟಕ ಕಾಂಗ್ರೆಸ್‌ನ ಹಿರಿಯ ಶಾಸಕರು ಮಹತ್ವದ ಸಭೆ ಮಾಡಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ಸಭೆಯು ದೇವನಹಳ್ಳಿಯ ಕ್ಲಾರ್ಕ್ಸ್ ಎಕ್ಸೋಟಿಕಾದಲ್ಲಿ ನಡೆಯಿತು,

ಕಾಂಗ್ರೆಸ್‌ನ ಹಿರಿಯ ನಾಯಕರುಗಳೆಲ್ಲ ಭಾಗವಹಿಸಿದ್ದು. ಈ ಸಭೆಯಲ್ಲಿ ಹಿಂದುತ್ವದ ಬಗ್ಗೆ ಮಹತ್ವದ ಚರ್ಚೆಗಳು ಆಗಿವೆ.
ಲವ್ ಜೀಹಾದ್ ವಿಚಾರದಲ್ಲಿ ಕಾಂಗ್ರೆಸ್ ನಿಲುವು ಏನು? ಜನರಿಗೆ ನಾವು ಏನು ಹೇಳಬೇಕು.. ಹೇಗೆ ಮನದಟ್ಟು ಮಾಡೊದು ಎನ್ನುವ ಬಗ್ಗೆ ಮಾತು
ಬಿಜೆಪಿ ಸಾವರ್ಕರ್ ಹಿಂದುತ್ವವನ್ನ ಜನರ ಮುಂದಿಟ್ಟು ರಾಜಕೀಯ ಮಾಡ್ತಿದೆ. ಹಿಂದುತ್ವದ ಬಗ್ಗೆ ಕಾಂಗ್ರೆಸ್ ಕೂಡ ಚರ್ಚಿಸುವ ಅಗತ್ಯವಿದ್ದು, ಕಾಂಗ್ರೆಸ್ ಗಾಂಧಿಜೀ ಹಿಂದುತ್ವವನ್ನ ಜನರ ಮುಂದಿಡಬೇಕು ಎನ್ನುವ ಅಭಿಪ್ರಾಯಗಳ ಸಭೆಯಲ್ಲಿ ವ್ಯಕ್ತವಾಗಿವೆ.
ಸಭೆಯಲ್ಲಿ ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ, ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಪಕ್ಷ ಬೆಂಬಲಿತ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸಿಕೊಂಡು ಬರಲು ಮಾಡಬೇಕಾದ ಕಾರ್ಯತಂತ್ರಗಳು ಹಾಗೂ ಬಸವಕಲ್ಯಾಣ, ಮಸ್ಕಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಮತ್ತು ಬೆಳಗಾವಿ ಲೋಕಸಭಾ ಉಪ ಚುನಾವಣೆ ಕಾರ್ಯತಂತ್ರಗಳ ಕುರಿತು ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಕಾರ್ಯದರ್ಶಿಗಳಾಗಿರುವ ಎಚ್.ಕೆ.ಪಾಟೀಲ್, ದಿನೇಶ್ ಗುಂಡೂರಾವ್, ಕೆಪಿಸಿಸಿ ಮಾಜಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಸೇರಿದಂತೆ ಸುಮಾರು 80 ಪಕ್ಷದ ಹಿರಿಯ ಮುಖಂಡರು ಪಾಲ್ಗೊಂಡಿದ್ದರು.

Latest Videos

click me!