ಕೊರೋನಾ ವೈರಸ್‌ಗೆ ತುತ್ತಾದ ಕರ್ನಾಟಕದ ಪ್ರಮುಖ ರಾಜಕಾರಣಿಗಳಿವರು....

First Published | Jul 8, 2020, 7:39 PM IST

ಕೊರೋನಾ ಎಂಬ ಮಹಾಮಾರಿ ಯಾರನ್ನೂ ಬಿಡುತ್ತಿಲ್ಲ. ಹಲವರು ಕಿಲ್ಲರ್ ವೈರಸ್‌ಗೆ ಉಸಿರು ಚೆಲ್ಲಿದರೆ, ಇನ್ನು ಹಲವಾರ ಮಂದಿ ಆಸ್ಪ್ರತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಇಷ್ಟು ದಿನ ಜನ ಸಮಾನ್ಯರನ್ನ ಕಾಡುತ್ತಿದ್ದ ಕಿಲ್ಲರ್ ವೈರಸ್ ಇದೀಗ ಕರ್ನಾಟಕದ ರಾಜಕೀಯ ನಾಯಕರನ್ನು ಕಟ್ಟಿ ಕಾಡುತ್ತಿದೆ. ಹೌದು ಒಬ್ಬೊಬ್ಬ ರಾಜಕೀಯ ರಾಜಕೀಯ ನಾಯಕನಿಗೂ ಕೊರೋನಾ ವಕ್ಕರಿಸುತ್ತಿದೆ. ಹಾಗಾದ್ರೆ ಯಾವೆಲ್ಲಾ ನಾಯಕರಿಗೆ ವೈರಸ್ ಅಟ್ಯಾಕ್ ಆಗಿದೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ.

ಮೊದಲಿಗೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಡಾ. ಭರತ್‌ ಶೆಟ್ಟಿಗೆ ಕೊರೋನಾ ಪಾಸಿಟಿವ್‌ ದೃಢಪಟ್ಟಿದೆ. ಈ ಬಗ್ಗೆ ಅವರೇ ಖುದ್ದಾಗಿ ಸಾಮಾಜಿ ಜಾಲತಾಣಗಳ ಮೂಲಕ ಮಾಹಿತಿ ನೀಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಾಂಗ್ರೆಸ್‌ನ ಹಿರಿಯ ನಾಯಕರ, ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಹಾಗೂ ಅವರ ಪತ್ನಿಗೂಕೊರೋನಾ ವೈರಸ್‌ ತಗುಲಿದೆ. ಸದ್ಯ ಮಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Tap to resize

ತುಮಕೂರು ಜಿಲ್ಲೆಯ ಕುಣಿಗಲ್ ಕ್ಷೇತ್ರದ ಶಾಸಕ ಡಾ.ರಂಗನಾಥ್‌ಗೆ ಕೊರೋನಾ ಸೋಂಕು ದೃಢಪಟ್ಟಿದೆ. ಕಳೆದ ಜು.5ರಂದು ರಂಗನಾಥ್‌ ಕೊರೋನಾ ಪರೀಕ್ಷೆ ಮಾಡಿಸಿಕೊಂಡಿದ್ದರು. ಜು.6ರ ಸೋಮವಾರ ಅವರ ವರದಿ ಬಂದಿದ್ದು, ಸೋಂಕು ತಗಲಿರುವುದು ದೃಢಪಟ್ಟಿದೆ.
ಬಿಜೆಪಿ ವಿಧಾನ ಪರಿಷತ್ ಸದಸ್ಯರಾದ ಪ್ರಾಣೇಶ್ ಎಂಕೆ ಮತ್ತು ಅವರ ಪತ್ನಿಗೆ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಪ್ರಾಣೇಶ್ ತಮ್ಮ ಫೇಸ್‍ಬುಕ್ ನಲ್ಲಿ ಹಂಚಿಕೊಂಡಿದ್ದು, ಶೀಘ್ರದಲ್ಲೆ ನಾವು ಗುಣಮುಖರಾಗಿ ಬರುತ್ತೇವೆ ಎಂದಿದ್ದಾರೆ.
ಜೆಡಿಎಸ್‌ ವಿಧಾನ ಪರಿಷತ್ ಸದಸ್ಯ ಬೋಜೇಗೌಡರಿಗೆ ಕೊರೋನಾ ಸೋಂಕು ತಗುಲಿದ್ದು, ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರಿಗೂ ಕೊರೋನಾ ಅಟ್ಯಾಕ್ ಆಗಿದೆ. ಕ್ಷೇತ್ರದಲ್ಲಿರುವ ಕೊರೋನಾ ಪೀಡಿತ ಸ್ಥಳಗಳಿಗೆ ಭೇಟಿ ನೀಡಿದ ನಂತರ ಕಳೆದ ಜುಲೈ 4ರಂದು ತಲೆನೋವು, ಗಂಟಲು ನೋವು ಕಾಣಿಸಿಕೊಂಡಿತು. ಈ ಹಿನ್ನೆಲೆಯಲ್ಲಿ ಕೋವಿಡ್‌ ಪರೀಕ್ಷೆಗೆ ಒಳಪಟ್ಟರು. ಇದರ ಫಲಿತಾಂಶ ಬಂದಿದ್ದು, ಪಾಸಿಟಿವ್‌ ಎಂದು ಬಂದಿದೆ. ವೈದ್ಯರ ಸಲಹೆ ಪಡೆದು ಮನೆಯಲ್ಲಿಯೇ ಕ್ವಾರಂಟೈನ್‌ ಆಗಿದ್ದೇನೆ ಎಂದು ಸುಮಲತಾ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.
ಬಿಜೆಪಿಸಂಸದ ಬಿಎನ್ ಬಚ್ಚೇಗೌಡ ಅವರ ಪುತ್ರ, ಹೊಸಕೋಟೆಯ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರಿಗೂ ಕೊರೋನಾ ಸೋಂಕು ತಗುಲಿರುವವುದು ದೃಢಪಟ್ಟಿದೆ. ಶರತ್ ಬಚ್ಚೇಗೌಡ ಮತ್ತು ಅವರ ಪತ್ನ ಇಬ್ಬರು ಕೊರೋನಾ ಪರೀಕ್ಷೆಗೆ ಒಳಗಾಗಿದ್ದರು. ಅದರ ವರದಿ ಇಂದು (ಬುಧವಾರ) ಸಂಜೆ ಬಂದಿದ್ದು, ಶರತ್ ಮತ್ತು ಅವರ ಹೆಂಡತಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.ಹೀಗಾಗಿ ಅವರು ಮನೆಯಲ್ಲಿಯೇ ಕ್ವಾರಂಟೈನ್‌ ಆಗಿದ್ದಾರೆ.
ಮಾಜಿ ವಿಧಾನಪರಿಷತ್ ಸದಸ್ಯ ಪುಟ್ಟಣ್ಣಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಇದನ್ನು ಸ್ಪತಃ ಪುಟ್ಟಣ್ಣನವರೇ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Latest Videos

click me!