ಕರ್ನಾಟಕದ ಪ್ರಮುಖ ರಾಜಕೀಯ ನಾಯಕರನ್ನ ಬಲಿ ಪಡೆದ ಕೊರೋನಾ

First Published | Sep 24, 2020, 2:54 PM IST

ಕೊರೋನಾ ವೈರಸ್ ಸೋಂಕು ಹೇಳಿಕೊಳ್ಳುವಷ್ಟು ಸ್ಟ್ರಾಂಗ್ ಇಲ್ಲ. ಅದರಿಂದ ಗುಣಮುಖರಾಗಬಹುದು ಎಂದು ಜನರು ಯಾವುದೇ ಲೆಕ್ಕವಿಲ್ಲದೇ ಮನಸ್ಸಿ ಬಂದಂತೆ ತಿರುಗಾಡುತ್ತಿದ್ದಾರೆ. ಕೇಂದ್ರ ಸಚಿವರೂ ಸೇರಿದಂತೆ ಅನೇಕ ಗಣ್ಯರು ಕೋವಿಡ್-19ಗೆ ಬಲಿಯಾಗಿದ್ದಾರೆ. ಪ್ರಭಾವಿ ಸ್ಥಾನದಲ್ಲಿರುವ, ಅತ್ಯುನ್ನತ ದರ್ಜೆಯ ವೈದ್ಯಕೀಯ ಸೌಲಭ್ಯಗಳನ್ನು ಪಡೆಯುವ ಅವಕಾಶವಿರುವ ರಾಜಕೀಯ ಮುಖಂಡರು ಕೂಡ ಕೊರೋನಾ ವೈರಸ್‌ನಿಂದ ಸಾವನ್ನಪ್ಪಿದ್ದಾರೆ.  ಹಾಗಾದ್ರೆ ಕರ್ನಾಟಕದಲ್ಲಿ ಯಾವೆಲ್ಲ ನಾಯಕರು ಕೊರೋನಾ ಮಹಾಮಾರಿಗೆ ಬಲಿಯಾಗಿದ್ದಾರೆ ಎನ್ನುವುದನ್ನು ಒಮ್ಮೆ ನೋಡಿ.

ಭದ್ರಾವತಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಜೆಡಿಎಸ್‌ನ ಅಪ್ಪಾಜಿ ಗೌಡ (67) ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಸೆ. 2ರಂದು ಮೃತಪಟ್ಟಿದ್ದರು. ಇವರಿಗೆ ಕೊರೋನಾ ಸೋಂಕು ತಗುಲಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಚಾಮರಾಜನಗರ ಜಿಲ್ಲೆಯ ಮೊದಲ ಬಿಜೆಪಿ ಶಾಸಕರೆಂಬ ಹೆಗ್ಗಳಿಕೆ ಹೊಂದಿದ್ದ ಮಾಜಿ ಶಾಸಕ ಸಿ. ಗುರುಸ್ವಾಮಿ (68) ಆಗಸ್ಟ್ 19ರಂದು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.
Tap to resize

ಇತ್ತೀಚೆಗಷ್ಟೇ ಕರ್ನಾಟಕದಿಂದ ರಾಜ್ಯಸಭೆಗೆ ಬಿಜೆಪಿಯಿಂದ ಆಯ್ಕೆಯಾಗಿದ್ದ ಅಶೋಕ್ ಗಸ್ತಿ ಅವರು ಕೊರೋನಾ ಸೋಂಕಿನಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದರು.
ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವರಾಗಿದ್ದು ಬೆಳಗಾವಿಯ ಸಂಸದ ಸುರೇಶ್ ಅಂಗಡಿ ಅವರಿಗೂ ಸಹ ಕೊರೋನಾ ಪಾಸಿಟಿವ್ ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಅವರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಸೆ. 23ರಂದು ರಾತ್ರಿ ಸಾವನ್ನಪ್ಪಿದ್ದಾರೆ.
ಇನ್ನು ಕರ್ನಾಟದ ವಿವಿಧ ಜಿಲ್ಲೆ, ತಾಲೂಕು ಮುಖಂಡರುಗಳು ಈ ಮಹಾಮಾರಿಗೆ ಬಲಿಯಾಗಿದ್ದಾರೆ. ದೊಡ್ಡ-ದೊಡ್ಡವರೇ ಸೋಂಕಿಗೆ ಬಲಿಯಾಗಿದ್ದಾರೆ ಅಂದ್ರೆ ಅದರ ತೀವ್ರತೆ ಎಷ್ಟು ಇರಬಹುದು ಎನ್ನುವುದನ್ನು ಜನರು ಅರ್ಥ ಮಾಡಿಕೊಳ್ಳಬೇಕು.

Latest Videos

click me!