ದಿಢೀರ್ ತೀರ್ಮಾನ ಬದಲು: ಕಾಂಗ್ರೆಸ್ ಸೇರ್ಪಡೆ ಬದಲಿಗೆ ಬೇರೆ ಹಾದಿ ತುಳಿದ ಶರತ್ ಬಚ್ಚೇಗೌಡ

First Published | Feb 25, 2021, 3:05 PM IST

ಹೊಸಕೋಟೆ ಕ್ಷೇತ್ರದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಇಂದು ( ಗುರುವಾರ)ಅಧಿಕೃತವಾಗಿ ಕಾಂಗ್ರೆಸ್​ನ ಸಹಸದಸ್ಯರಾಗಿ ಸೇರ್ಪಡೆಗೊಂಡಿದ್ದಾರೆ. ಸಿದ್ದರಾಮಯ್ಯರ ಸರ್ಕಾರಿ ನಿವಾಸದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಹಸದಸ್ಯರಾಗಿ ಸೇರ್ಪಡೆಯಾದರು ಇನ್ನು ಸಿದ್ದರಾಮಯ್ಯ ಅವರು ಶರತ್ ಬಚ್ಚೇಗೌಡಗೆ ಬೆನ್ನೆಲುಬಾಗಿ ನಿಲ್ಲುವ ಭರವಸೆ ನೀಡಿದ್ದಾರೆ. 

ಹೊಸಕೋಟೆ ಕ್ಷೇತ್ರದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಇಂದು ( ಗುರುವಾರ)ಅಧಿಕೃತವಾಗಿ ಕಾಂಗ್ರೆಸ್​ನ ಸಹಸದಸ್ಯರಾಗಿ ಸೇರ್ಪಡೆಗೊಂಡಿದ್ದಾರೆ.
ಸಿದ್ದರಾಮಯ್ಯರ ಸರ್ಕಾರಿ ನಿವಾಸದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ತಮ್ಮ ಬಾಹ್ಯ ಬೆಂಬಲವನ್ನ ಕಾಂಗ್ರೆಸ್​​ಗೆ ಘೋಷಣೆ ಮಾಡಿದರು.
Tap to resize

ತಮ್ಮ ಬಾಹ್ಯ ಬೆಂಬಲವನ್ನ ಕಾಂಗ್ರೆಸ್​​ಗೆ ಘೋಷಣೆ ಮಾಡಿದರು. ಇದೇ ವೇಳೆ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಶರತ್ ಬಚ್ಚೇಗೌಡರಿಗೆ ಹೂ-ಗುಚ್ಛ ನೀಡಿ ಸ್ವಾಗತಿಸಿದರು.
ಹೊಸಕೋಟೆ ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕರಾದ ಶರತ್ ಬಚ್ಚೇಗೌಡ ಅವರು ರಾಜ್ಯ ಸರ್ಕಾರದ ದುರಾಡಳಿತದ ವಿರುದ್ಧದ ತಮ್ಮ ಹೋರಾಟಗಳಿಗೆ ಕಾಂಗ್ರೆಸ್‌ನ ಬೆಂಬಲ ಕೋರಿದ್ದಾರೆ. ಮುಂದಿನ ದಿನಗಳಲ್ಲಿ ಶರತ್ ಬಚ್ಚೇಗೌಡ ಅವರು ಮತ್ತು ನಾವು ಒಟ್ಟಾಗಿ ಬಿಜೆಪಿ ಸರ್ಕಾರದ ವಿರುದ್ಧ ಜನಜಾಗ್ರತಿ ಮೂಡಿಸುವ ಕೆಲಸ ಮಾಡಲಿದ್ದೇವೆ ಎಂದು ಸಿದ್ದರಾಮಯ್ಯ ಘೋಷಣೆ ಮಾಡಿದರು.
ಸರ್ಕಾರದ ನಿಯಮಾವಳಿಗಳ ಪ್ರಕಾರ ಯಾವುದೇ ಒಂದು ವಿಧಾನಸಭಾ ಕ್ಷೇತ್ರದಲ್ಲಿ ನಡೆಯುವ ಸರ್ಕಾರಿ ಕಾರ್ಯಕ್ರಮಗಳ ಅಧ್ಯಕ್ಷತೆಯನ್ನು ಅಲ್ಲಿನ ಶಾಸಕರೇ ವಹಿಸಿಕೊಳ್ಳಬೇಕು. ಆದರೆ ಹೊಸಕೋಟೆಯಲ್ಲಿ ಇದಕ್ಕೆ ತದ್ವಿರುದ್ಧವಾಗಿ ಕಾರ್ಯಕ್ರಮಗಳನ್ನು ಆಯೋಜಿಸಿ ಶರತ್ ಬಚ್ಚೇಗೌಡ ಅವರನ್ನು ಮೂಲೆಗುಂಪು ಮಾಡುವ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ ಎಂದು ಸಿದ್ದರಾಮಯ್ಯ ಘೋಷಣೆ ಮಾಡಿದರು.
ಪಕ್ಷಾಂತರ ಕಾಯ್ದೆ ಪರಿಣಾಮ ಶರತ್ ಬಚ್ಚೇಗೌಡ ಅವರು ಕಾಂಗ್ರೆಸ್‌ಗೆ ಸೇರ್ಪಡೆಯಾಗದೇ ಕೇವಲ ತಮ್ಮ ಬಾಹ್ಯ ಬೆಂಬಲವನ್ನ ನೀಡಿದರು.

Latest Videos

click me!