ಸಚಿವಾಕಾಂಕ್ಷಿಗಳಾದ ಮುರುಗೇಶ್ ನಿರಾಣಿ, ಶಂಕರ್ ಪಾಟೀಲ್ ಮುನೇನಕೊಪ್ಪ, ರಾಜುಗೌಡ, ರೇಣುಕಾಚಾರ್ಯ, ಶಾಸಕ ಬೆಳ್ಳಿ ಪ್ರಕಾಶ್ ಸೇರಿದಂತೆ ಹಲವು ಸಚಿವಾಕಾಂಕ್ಷಿಗಳು ಸಭೆ ನಡೆಸಿದ್ದಾರೆ
ಸಚಿವ ಸಂಪುಟ ಪುನಾರಚನೆ ವಿಚಾರದ ಬಗ್ಗೆ ಚರ್ಚೆ ನಡೆಸಲಾಗಿದೆ. ಸಿಎಂಗೆ ಸಚಿವ ಸ್ಥಾನದ ಬೇಡಿಕೆ ಸಲ್ಲಿಸುವುದು, ಹಾಲಿ ಸಚಿವರನ್ನು ಕೈ ಬಿಟ್ಟರೆ ಮತ್ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬೆಲ್ಲ ವಿಚಾರಗಳ ಕುರಿತು ಚರ್ಚೆ ನಡೆಸಲಾಗಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.
ಸಚಿವ ಸಂಪುಟ ಕಸರತ್ತು ಸನಿಹ ಹಿನ್ನೆಲೆ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ವಿರುದ್ಧ ಶಾಸಕರು ಒಟ್ಟಾಗಿದ್ದು, ಸಿ.ಪಿ.ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡಲು ಗೆದ್ದ ಶಾಸಕರು ವಿರೋಧ ವ್ಯಕ್ತಪಡಿಸಿದ್ದಾರೆ. ಸಚಿವ ರಮೇಶ್ ಜಾರಕಿಹೊಳಿಗೂ ಶಾಸಕರ ಟೀಂ ಒತ್ತಡ ಹೇರಿದ್ದು, ಯಾವುದೇ ಕಾರಣಕ್ಕೂ ಸಿ.ಪಿ.ಯೋಗೇಶ್ವರ್ ಪರ ಬ್ಯಾಟಿಂಗ್ ನಡೆಸದಂತೆ ಸಾಹುಕಾರ್‌ಗೆ ಒತ್ತಾಯಿಸಿದ್ದಾರೆ.
ಸಿಎಂ ವಿರುದ್ಧ ಆಗಾಗ ಕೆಲವರು ಮಾತಾಡ್ತಾರೆ. ಆದರೆ ವಲಸೆ ಬಂದಿರೋರು ಸಿಎಂ ಪರ ಇದ್ದೇವೆ ಎನ್ನುವ ಸಂದೇಶ ಹೈಕಮಾಂಡ್ ಗೆ ತಲುಪಿಸಬೇಕು . ಸಿಎಂ ಜೊತೆ ವಲಸೆ ಬಂದವರೆಲ್ಲರೂ ಇದ್ದಾರೆ . ಬದಲಾವಣೆ ಬಗ್ಗೆ ಚರ್ಚೆ ಆಗದಂತೆ ನೀವು ಸಿಎಂ ಪರ ನಿಲ್ಲಬೇಕು ಎನ್ನುವ ಚರ್ಚೆ ರಮೇಶ್ ಜಾರಕಿಹೊಳಿ ನಿವಾಸದಲ್ಲಿ ನಡೆದಿದೆ
ಮುರಗೇಶ್ ನಿರಾಣಿ ಸಚಿವ ಸ್ಥಾನ ಪ್ರಮುಖ ಆಕಾಂಕ್ಷಿಯಾಗಿದ್ದು, ಇವರೂ ಸಹ ಇಂದಿನ ಸಭೆಯಲ್ಲಿ ಇದ್ದರು.
ರಾಜುಗೌಡ ನಾಯಕ ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದರು. ಈಗ ಸಹ ಸಚಿವ ಸ್ಥಾನಕ್ಕಾಗಿ ಕಸರತ್ತು ನಡೆಸಿದ್ದಾರೆ.