ಕಾಂಗ್ರೆಸ್‌ನಿಂದ ವಿಡಂಬನಾತ್ಮಕ ಪ್ರೇಮಿಗಳ ದಿನಾಚರಣೆ: ಸಿಎಂ, ಸಚಿವರು ಮತ್ತು ಬಿಜೆಪಿ ರಾಜ್ಯಾಧ್ಯಕ್ಷರ ಟೀಕೆ
First Published | Feb 14, 2023, 5:28 PM ISTಬೆಂಗಳೂರು (ಫೆ.14): ಜಗತ್ತಿನೆಲ್ಲೆಡೆ ಪ್ರೇಮಿಗಳ ದಿನಾಚರಣೆಯ ಸಂಭ್ರಮ ಮತ್ತು ಸಡಗರವನ್ನು ಮಾಡಲಾಗುತ್ತಿದೆ. ಆದರೆ, ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ಹೆಚ್ಚಾಗಿದ್ದು, ಪ್ರೇಮಿಗಳ ದಿನಾಚರಣೆಯನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ವಿಡಂಬನಾತ್ಮಕವಾಗಿ ಆಚರಣೆ ಮಾಡುತ್ತಿದೆ. ಈ ಮೂಲಕ ಆಡಳಿತ ಪಕ್ಷದ ಸಿಎಂ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಹಲವು ಸಚಿವರು ಮತ್ತು ಶಾಸಕರನ್ನು ಒಳಗೊಂಡ ಕಾರ್ಟೂನ್ ಭಾವಚಿತ್ರಗಳನ್ನು ಹಾಕಲಾಗಿದೆ. ಅದೊಂದಿಗೆ ಕೆಲವು ಹೇಳಿಕೆಗಳನ್ನು ನೀಡಲಾಗಿದ್ದು, ಈ ಮೂಲಕ ಆಡಳಿತ ಪಕ್ಷದವರನ್ನು ಟೀಕೆ ಮಾಡಲಾಗಿದೆ.