ಬೆಳಗಾವಿಗೆ ಜಗದೀಶ್‌ ಶೆಟ್ಟರ್‌ ಹೆಸರೇ ಮುಂಚೂಣಿಯಲ್ಲಿದೆ: ಪ್ರಲ್ಹಾದ್‌ ಜೋಶಿ

Published : Mar 18, 2024, 05:23 AM IST

ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೆಸರೇ ಮುಂಚೂಣಿಯಲ್ಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದರು.

PREV
15
ಬೆಳಗಾವಿಗೆ ಜಗದೀಶ್‌ ಶೆಟ್ಟರ್‌ ಹೆಸರೇ ಮುಂಚೂಣಿಯಲ್ಲಿದೆ: ಪ್ರಲ್ಹಾದ್‌ ಜೋಶಿ

ಹುಬ್ಬಳ್ಳಿ (ಮಾ.18): ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೆಸರೇ ಮುಂಚೂಣಿಯಲ್ಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ಶೆಟ್ಟರ ಅವರೊಂದಿಗೆ ಚರ್ಚಿಸಿದ್ದು, ಬೆಳಗಾವಿಯಿಂದ ಸ್ಪರ್ಧಿಸಲು ಒಪ್ಪಿಗೆ ನೀಡಿದ್ದಾರೆ. 

25

ವರಿಷ್ಠರೂ ಇದನ್ನೇ ಹೇಳಿದ್ದಾರೆ. ನನಗೆ ಗೊತ್ತಿರುವಂತೆ ಶೆಟ್ಟರ ಹೆಸರೇ ಮುಂಚೂಣಿಯಲ್ಲಿದೆ. ಈ ಕುರಿತು ರಾಷ್ಟ್ರೀಯ ನಾಯಕರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.

35

ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ ಅವರ ಬಂಡಾಯ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಈಶ್ವರಪ್ಪ ಅವರಿಗೆ ಪುತ್ರನಿಗೆ ಹಾವೇರಿ ಲೋಕಸಭಾ ಟಿಕೆಟ್ ಸಿಗಲಿಲ್ಲ ಎಂಬ ಕೋಪವಿದೆ. ಚುನಾವಣೆಗೆ ಇನ್ನೂ 40 ದಿನಗಳಿವೆ. 

45

ನಾಮಪತ್ರ ಸಲ್ಲಿಸಲು 20 ದಿನ ಬಾಕಿಯಿದೆ. ಅಷ್ಟರಲ್ಲಿ ನಾವೆಲ್ಲ ಕೂಡಿ ಸರಿ ಮಾಡುತ್ತೇವೆ. ಈಶ್ವರಪ್ಪ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಿಲ್ಲ. ಸೋಮವಾರ ನಡೆಯಲಿರುವ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲೂ ಅವರು ಭಾಗವಹಿಸಬಹುದು ಎಂದರು. 

55

ಜೆಡಿಎಸ್‌ ಜೊತೆಗಿನ ಮೈತ್ರಿ ಕುರಿತು ಪ್ರತಿಕ್ರಿಯಿಸಿ, ಜೆಡಿಎಸ್ ಮೂರು ಕ್ಷೇತ್ರಗಳನ್ನು ಕೇಳುವುದು ಸಹಜ. ಈ ಬಗ್ಗೆ ಇನ್ನೂ ಯಾವುದು ಅಂತಿಮವಾಗಿಲ್ಲ. ಸದ್ಯದಲ್ಲೇ ಪಕ್ಷದ ವರಿಷ್ಠರು ಈ ಬಗ್ಗೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

Read more Photos on
click me!

Recommended Stories