ಫಿನಿಕ್ಸ್‌ನಂತೆ ಅಖಾಡಕ್ಕಿಳಿದ ಮಧು ಬಂಗಾರಪ್ಪ: ಕುತೂಹಲ ಮೂಡಿಸಿದ ನಡೆ..!

First Published | Nov 28, 2020, 7:33 PM IST

ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಜೆಡಿಎಸ್‌ ವರಿಷ್ಠರ ವಿರುದ್ಧ ಬಹಿರಂಗವಾಗಿಯೇ ಅಸಮಾದಾನ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಪಕ್ಷದ ಚಟುವಟಿಕೆಗಳಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಳ್ಳುತ್ತಿಲ್ಲ. ಇದರಿಂದ ಅವರು ಈಗಾಗಲೇ ಒಂದು ಕಾಲು ಪಕ್ಷದಿಂದ ಆಚೆ ಇಟ್ಟಿದ್ದಾರೆ. ಮತ್ತೊಂದೆಡೆ ಸೈಲೆಂಟ್ ಆಗಿದ್ದ ಮಧು ಬಂಗಾರಪ್ಪ ಅವರು ಕ್ಷೇತ್ರದಲ್ಲಿ ಅಖಾಡಕ್ಕಿಳಿದಿದ್ದಾರೆ. ಸಾರ್ವಜನಿಕರ ಕುಂದುಕೊರತೆಗಳನ್ನ ಆಲಿಸುತ್ತಿದ್ದು, ಅವರ ನಡೆ ಭಾರೀ ಕುತೂಹಲ ಮೂಡಿಸಿದೆ.

ಸೈಲೆಂಟ್ ಆಗಿದ್ದ ಮಧು ಬಂಗಾರಪ್ಪ ಫಿನಿಕ್ಸ್‌ ನಂತೆ ಕ್ಷೇತ್ರದಲ್ಲಿ ಅಖಾಡಕ್ಕಿಳಿದಿದ್ದಾರೆ.
ಕ್ಷೇತ್ರದಲ್ಲಿ ಕಾರ್ಯಕರ್ತರ ಮನೆಗಳಿಗೆ ತೆರಳಿ ಮಾತುಕತೆ ನಡೆಸುತ್ತಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.
Tap to resize

ಮನೆಗಳಿಗೆ ತೆರಳಿ ಕಾರ್ಯಕರ್ತರ ಜತೆ ಮಾತನಾಡುವ ಮೂಲಕ ಕಾಂಗ್ರೆಸ್ ಸೇರಲು ಅಭಿಪ್ರಾಯ ಸಂಗ್ರಹಿಸುತ್ತಿದ್ದಾರಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ
ಸೊರಬ ತಾಲ್ಲೂಕಿನ ಶಕುನವಳ್ಳಿಯಲ್ಲಿ ನೆಡೆದ ಸೊರಬ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರು ಹಾಗೂ ಮುಖಂಡರುಗಳು ಆಯೋಜಿಸಿದ ಸಭೆಯಲ್ಲಿ ಭಾಗವಹಿಸಿ ರಾಜಕೀಯ ವಿದ್ಯಮಾನ ಹಾಗೂ ಕ್ಷೇತ್ರದ ಆಗುಹೋಗುಗಳ ಬಗ್ಗೆ ಚರ್ಚಿಸಿದರು.
ಸೊರಬ ತಾಲ್ಲೂಕಿನ ಜಡೆ ಗ್ರಾಮದ ನೂರ್ ಸಾಬ್ ರವರ ಮನೆಗೆ ಬೇಟಿ ನೀಡಿ ಗ್ರಾಮದ ಸ್ಥಳೀಯರೊಂದಿಗೆ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.
ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಜತೆ ಸೇರಿಕೊಂಡು ರಂಗನ್ ವರದಿ ಕೈ ಬಿಡಲು ಒತ್ತಾಯಿಸಿ ನಡೆದ ಪ್ರತಿಭಟನೆ ಮಾಡಿದರು.
ಒಟ್ಟಿನಲ್ಲಿ ಮಧು ಬಂಗಾರಪ್ಪ ದಿಢೀರ್ ಕ್ಷೇತ್ರದಲ್ಲಿ ಸಕ್ರೀಯಾವಾಗಿ ಓಡಾಡುತ್ತಿದ್ದು, ಅವರ ಮುಂದಿನ ಚುನಾವಣೆಗೆ ಕಾಂಗ್ರೆಸ್‌ನಿಂದ ಸ್ಪರ್ಧಿಸಲು ತಯಾರಿ ನಡೆಸಿದ್ದಾರಾ ಎನ್ನುವ ಚರ್ಚೆಗಳು ಶುರುವಾಗಿವೆ.

Latest Videos

click me!