ಜೆಡಿಎಸ್ ನಾಯಕರು ನನ್ನನ್ನು ಲೋಕಸಭೆ ಪ್ರಚಾರಕ್ಕೆ ಆಹ್ವಾನಿಸಿಲ್ಲ: ಸುಮಲತಾ ಅಂಬರೀಶ್

First Published Apr 27, 2024, 5:03 AM IST

ಲೋಕಸಭೆ ಚುನಾವಣೆ ಸಂಬಂಧ ಯಾವುದೇ ಸಭೆ, ಪ್ರಚಾರಕ್ಕೆ ಬರುವಂತೆ ನನ್ನನ್ನು ಜೆಡಿಎಸ್ ನಾಯಕರು ಆಹ್ವಾನಿಸಿರಲಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು.

ಮಂಡ್ಯ (ಏ.27): ಲೋಕಸಭೆ ಚುನಾವಣೆ ಸಂಬಂಧ ಯಾವುದೇ ಸಭೆ, ಪ್ರಚಾರಕ್ಕೆ ಬರುವಂತೆ ನನ್ನನ್ನು ಜೆಡಿಎಸ್ ನಾಯಕರು ಆಹ್ವಾನಿಸಿರಲಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು.
 

ಮದ್ದೂರು ತಾಲೂಕು ದೊಡ್ಡರಸಿನಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ೧೬೪ರಲ್ಲಿ ಮತಚಲಾಯಿಸಿದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ದೇವೇಗೌಡರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಅವರು ದೊಡ್ಡವರು, ಅವರಿಗೆ ಸರಿಯಾದ ಮಾಹಿತಿ ಇಲ್ಲದೆ ಆ ರೀತಿ ಹೇಳಿದ್ದಾರೆ ಎಂದೆನಿಸುತ್ತಿದೆ. ಅವರಿಂದ ಅಂತಹ ಹೇಳಿಕೆಯನ್ನು ನಾನು ನಿರೀಕ್ಷೆ ಮಾಡಿರಲಿಲ್ಲ ಎಂದು ನುಡಿದರು.

ಮೈತ್ರಿ ಅಭ್ಯರ್ಥಿ ಪರವಾಗಿ ನಮ್ಮ ಬೆಂಬಲಿಗರು ನಿಷ್ಠೆಯಿಂದ ಕೆಲಸ ಮಾಡಿದ್ದಾರೆ. ಆದರೆ, ಜೆಡಿಎಸ್ ನಾಯಕರು ಯಾವುದೇ ಸಭೆ, ಪ್ರಚಾರಕ್ಕೆ ಆಹ್ವಾನಿಸಿಲ್ಲ. ಅವರು ಕರೆದು ನಾನು ಬರದೇ ಇದ್ದರೆ ತಪ್ಪಾಗುತ್ತೆ. ಆದರೆ, ಅವರು ನನ್ನ ಕರೆದೇ ಇಲ್ಲ ಎಂದು ನೇರವಾಗಿ ಹೇಳಿದರು.

ಸ್ವತಂತ್ರ ಸಂಸದೆಯಾಗಿ ನನ್ನ ಜವಾಬ್ದಾರಿಯನ್ನು ನಿರ್ವಹಿಸಿದ್ದೇನೆ. ಮೋದಿ ಅವರು ಪ್ರಧಾನಿಯಾಗಲೇಬೇಕೆಂಬ ಉದ್ದೇಶದಿಂದ ನಾನು ಗೆದ್ದಂತಹ ಕ್ಷೇತ್ರವನ್ನು ತ್ಯಾಗ ಮಾಡಿರುವೆ. ಈ ಹಂತದಲ್ಲಿ ಅಂಬರೀಶ್ ಅವರ ಪಡೆಯ ಶಕ್ತಿಯನ್ನು ಎನ್‌ಡಿಎ ಒಕ್ಕೂಟಕ್ಕೆ ನೀಡಿರುವುದಾಗಿ ತಿಳಿಸಿದರು.

click me!