Karnataka Assembly Elections 2023: ಆರ್.ಅಶೋಕ್, ಕಾಗೇರಿ ಸೇರಿ ಹಲವರಿಂದ ನಾಮಪತ್ರ ಸಲ್ಲಿಕೆ

First Published Apr 17, 2023, 3:58 PM IST

ಬೆಂಗಳೂರು (ಏ.17): ಕರ್ನಾಟಕ ವಿಧಾನಸಭೆ ಚುನಾವಣೆ ಕಾವು ರಂಗೇರಿದೆ. ವಿವಿಧ ಪಕ್ಷದ ನಾಯಕರು ತಮ್ಮ ತಮ್ಮ ಕ್ಷೇತ್ರದಿಂದ  ನಾಮಪತ್ರ ಸಲ್ಲಿಸಿದ್ದಾರೆ. ವಿ ಸೋಮಣ್ಣ, ಕುಮಾರಸ್ವಾಮಿ, ಡಿಕೆ ಶಿವಕುಮಾರ್ ಸೇರಿ ಹಲವು ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಇಲ್ಲಿ ಯಾರೆಲ್ಲ ನಾಯಕರು ನಾಮಪತ್ರ ಸಲ್ಲಿಸಿದ್ದಾರೆ ಎಂಬ ವಿವರ ಇಲ್ಲಿದೆ.

ಕನಕಪುರ ತಾಲ್ಲೂಕು ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಾಮಪತ್ರ ಸಲ್ಲಿಸಿದರು. ಪತ್ನಿ ಉಷಾ ಜೊತೆಗೂಡಿ ನಾಮಪತ್ರ ಸಲ್ಲಿಕೆ ಮಾಡಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ಟೆಂಪಲ್ ರನ್ ಹಾಗೂ ಬೃಹತ್ ರೋಡ್ ಶೋ ಮೂಲಕ ಶಕ್ತಿ ಪ್ರದರ್ಶನ ನಡೆಸಿ ನಾಮಪತ್ರ ಸಲ್ಲಿಸಿದರು.

ಇನ್ನು ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ ಅವರು ಚನ್ನಪಟ್ಟಣದಿಂದ ತಮ್ಮ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇವರಿಗೆ ಪುತ್ರ ನಿಖಿಲ್ ಕುಮಾಸ್ವಾಮಿ ಪತ್ನಿ ಅನಿತಾ ಸಾಥ್ ನೀಡಿದರು.

Latest Videos


ವರುಣಾದಲ್ಲಿ ಅಪಾರ ಬೆಂಬಲಗರೊಂದಿಗೆ ವಸತಿ ಸಚಿವ ವಿ ಸೋಮಣ್ಣ ನಾಮಪತ್ರ  ಸಲ್ಲಿಸಿದರು.  ಇವರಿಗೆ ಸಿಎಂ ಬೊಮ್ಮಾಯಿ ಮತ್ತು ಸಂಸದ ಪ್ರತಾಪ್ ಸಿಂಹ ಸಾಥ್ ನೀಡಿದರು. ಸೋಮಣ್ಣ ಚಾಮರಾಜನಗರದಿಂದ ಕೂಡ ಸ್ಪರ್ಧಿಸುತ್ತಿದ್ದಾರೆ.

ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಸಿ.ಟಿ.ರವಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಸಾವಿರಾರು ಕಾರ್ಯಕರ್ತರ ಜೊತೆ ಬಂದು ನಾಮಪತ್ರ ಸಲ್ಲಿಸಿದರು.  ಸಿ.ಟಿ. ರವಿಗೆ ಪತ್ನಿ ಪಲ್ಲವಿ, ಸಫಾಯಿ ಕರ್ಮಚಾರಿ ನಿಗಮ ಮಂಡಳಿ ಅಧ್ಯಕ್ಷ ವೆಂಕಟೇಶ್  ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಮುರುಡಪ್ಪ, ತಾಪಂ ಮಾಜಿ‌ ಅಧ್ಯಕ್ಷ ಈಶ್ವರಹಳ್ಳಿ ಮಹೇಶ್ ಜೊತೆಯಾದರು.

ಶ್ರೀರಂಗಪಟ್ಟಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚ್ಚಿದಾನಂದ ನಾಮಪತ್ರ ಸಲ್ಲಿಸಿದ್ದಾರೆ. ಶ್ರೀರಂಗಪಟ್ಟಣ ತಾಲೂಕು ಕಚೇರಿಯಲ್ಲಿ ಸಂಸದೆ ಸುಮಲತಾ ಜೊತೆಗೂಡಿ ನಾಮಪತ್ರ ಸಲ್ಲಿಸಿದರು. ಇದಕ್ಕೂ ಮುನ್ನ ಶ್ರೀರಂಗಪಟ್ಟಣದಲ್ಲಿ ರ್‍ಯಾಲಿ ನಡೆಸಿದರು.

ಕಾನೂನು ತೊಡಕಿನ ಹಿನ್ನೆಲೆಯಲ್ಲಿ ಧಾರವಾಡ ಕ್ಷೇತ್ರಕ್ಕೆ ವಿನಯ ಕುಲಕರ್ಣಿ ಅವರ ಅನುಪಸ್ಥಿತಿಯಲ್ಲಿ ಅವರ ಪತ್ನಿ ಅಭ್ಯರ್ಥಿ ಪರ ಏಜೆಂಟ್ ರಾಗಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು.

ಶಾಮನೂರು

ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ದಕ್ಷಿಣ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿದರೆ ಹಾಗೂ ಉತ್ತರ ಕ್ಷೇತ್ರಕ್ಕೆ ಅವರ ಪುತ್ರ ಎಸ್‌ಎಸ್‌ ಮಲ್ಲಿಕಾರ್ಜುನ   ಕಾಂಗ್ರೆಸ್ ಕ್ಷೇತ್ರದಿಂದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.

ರಾಜರಾಜೇಶ್ವರಿ ನಗರ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ದಿವಂಗತ ಡಿಕೆ ರವಿ ಪತ್ನಿ ಕುಸುಮಾ ಅವರು ನಾಮಪತ್ರ ಸಲ್ಲಿಸಿದ್ದಾರೆ. ಕುಸುಮಾ ಹನುಮಂತರಾಯಪ್ಪ ಚರಾಸ್ತಿಯ ಒಟ್ಟು ಮೌಲ್ಯ - 2 ಕೋಟಿ 80 ಲಕ್ಷ  ಆಗಿದೆ. 1 ಕೋಟಿ 97 ಲಕ್ಷ ಸ್ಥಿರಾಸ್ತಿ ಹೊಂದಿರುವ ಕುಸುಮಾ 55 ಲಕ್ಷ ಮೌಲ್ಯದ 1 ಕೆಜಿ 100 ಗ್ರಾಂ ಚಿನ್ನ ಆಭರಣ ಹೊಂದಿದ್ದಾರೆ.  1 ಕೋಟಿ 22 ಲಕ್ಷ ಸಾಲ ಇದೆ. ಮೂರು ಕ್ರಿಮಿನಲ್ ಕೇಸ್ ಗಳು ಇವರ ವಿರುದ್ಧ ಇದೆ.

kageri

ವಿಶ್ವೇಶ್ವರ ಹೆಗಡೆ ಕಾಗೇರಿ ಶಿರಸಿ ವಿಧಾನಸಭಾ ಕ್ಷೇತ್ರಕ್ಕೆ “ಭಾರತೀಯ ಜನತಾ ಪಕ್ಷದ” ಪಕ್ಷದ  ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ.

ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿ ಪಕ್ಷದ ಅಭ್ಯರ್ಥಿಯಾಗಿ ಅರಬೈಲ  ಶಿವರಾಮ ಹೆಬ್ಬಾರ್ ನಾಮಪತ್ರ ಸಲ್ಲಿಕೆ.

ಅಶೋಕ

ಕನಕಪುರ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಯಾಗಿ ಕಂದಾಯ ಸಚಿವ ಆರ್.ಅಶೋಕ್ ನಾಮಪತ್ರ ಸಲ್ಲಿಸಿದರು. ಸಚಿವ ಅಶ್ವಥ್ ನಾರಾಯಣ ಸಾಥ್ ನೀಡಿದರು.

click me!