ಬೆಂಗಳೂರು(ಅ. 01) ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿಯಲ್ಲಿ ನಡೆದ ಗಲಭೆಗೆ ಸಂಬಂಧಪಟ್ಟ ಸತ್ಯಶೋಧನಾ ಸಮಿತಿ ಸಲ್ಲಿಸಿದ ವರದಿಯನ್ನು ಸಿಎಂಗೆ ಸಲ್ಲಿಕೆ ಮಾಡಲಾಗಿದೆ. ಕೋರ್ ಕಮೀಟಿ ಸಭೆಯಲ್ಲಿ ಮುಂಬರುವ ಉಪಚುನಾವಣೆ ರಣತಂತ್ರದ ಬಗ್ಗೆಯೂ ಚರ್ಚೆ ಆಗಿದೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಸಚಿ ಸಿ. ಟಿ. ರವಿಗೆ ಅಭಿನಂದನೆ ಸಲ್ಲಿಸಲಾಯಿತು ಸಿಎಂ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಅರವಿಂದ್ ಲಿಂಬಾವಳಿ ಹಾಜರಿದ್ದರು. ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಮತ್ತು ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅವರಿಗೆ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು. ಬಿಜೆಪಿ ಕೋರ್ ಕಮೀಟಿ ಸಭೆ ನಡೆದಿದ್ದು ಆರ್ ಆರ್ ನಗರ ಮತ್ತು ಶಿರಾ ಉಪಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧ ಮಾಡಿ ಹೈಕಮಾಂಡ್ ಗೆ ಕಳುಹಿಸಿಕೊಡಲಾಗಿದೆ. Karnataka ByPoll bjp corecommite meeting in Bengaluru highlights ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾದ ರವಿಗೆ ಅಭಿನಂದನೆ