ಒಗ್ಗಟ್ಟ ಪ್ರದರ್ಶಿಸಲು ಮುಂದಾದ ಕಾಂಗ್ರೆಸ್, ಡಿಕೆಶಿ ಕರೆಗೆ ಒಂದಾದ ಘಟಾನುಘಟಿ ನಾಯಕರು

First Published May 11, 2020, 3:04 PM IST

ಕೊರೋನಾ ಸಂಕಷ್ಟದ ಸಮಯದಲ್ಲಿ ರಾಜ್ಯ ಕಾಂಗ್ರೆಸ್ ಒಗ್ಗಟ್ಟಿನ ಮಂತ್ರ ಜಪಿಸುತ್ತಿದೆ. ಇದಕ್ಕೆ ಪೂರಕವೆಂಬಂತೆ ಇಂದು  (ಸೋಮವಾರ) ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಹಿರಿಯ ಮುಖಂಡರ ಸಭೆ ನಡೆಯಿತು. ಮೊನ್ನೇ ಅಷ್ಟೇ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದ ಡಿಕೆಶಿ, ಬಣ ರಾಜಕೀಯಕ್ಕೆ ಬ್ರೇಕ್ ಹಾಕಲು ಮುಂದಾಗಿದ್ದಾರೆ. ಇದಕ್ಕೆ ಇಂದಿನ ಸಭೆಯೇ ಪುಷ್ಟಿ ನೀಡಿದೆ. ಹಾಗಾದ್ರೆ ಸಭೆಯಲ್ಲಿ ಏನೆಲ್ಲಾ ಚರ್ಚೆಗಳು ನಡೆದವು ಎನ್ನುವ ಮಾಹಿತಿ ಇಂತಿದೆ.

ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಮುಖಂಡರ ಮಹತ್ವದ ಸಭೆ ನಡೆಸಿದ್ದು ಹಲವು ವಿಚಾರಗಳ ಕುರಿತಾಗಿ ಚರ್ಚೆ ನಡೆಸಲಾಯಿತು.
undefined
ಕೊರೋನಾ ಲಾಕ್‌ಡೌನ್ , ಸರ್ಕಾರದ ಕ್ರಮಗಳು, ಕಾರ್ಮಿಕರ ಸಮಸ್ಯೆ ಮುಂತಾದ ವಿಚಾರಗಳನ್ನು ಮುಂದಿಟ್ಟುಕೊಂಡು ಸರ್ಕಾರ ವಿರುದ್ಧ ಹೋರಾಟ ರೂಪಿಸಲು ಕಾಂಗ್ರೆಸ್ ಮುಂದಾಗಿದೆ.
undefined
ಒಗ್ಗಟ್ಟ ಪ್ರದರ್ಶಿಸಲು ಮುಂದಾದ ಕಾಂಗ್ರೆಸ್, ಡಿಕೆಶಿ ಕರೆಗೆ ಒಂದಾದ ಘಟಾನುಘಟಿ ನಾಯಕರು
undefined
ಕೊರೋನಾ ಸಂದರ್ಭದಲ್ಲಿ ಕಾಂಗ್ರೆಸ್ ನಡೆ ಹೇಗಿರಬೇಕು, ಸಾರ್ವಜನಿಕವಾಗಿ ಏನೆಲ್ಲಾ ಕಾರ್ಯಕ್ರಮ ರೂಪಿಸಬೇಕು ಎಂಬುವುದರ ಕುರಿತಾಗಿ ಸಭೆಯಲ್ಲಿ ಮುಖಂಡರು ಚರ್ಚೆ ನಡೆಸಿದರು.
undefined
ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ವೈಫಲ್ಯಗಳು, ರೈತರು, ಕಾರ್ಮಿಕರು, ದಿನಕೂಲಿ ನೌಕರರು ಮುಂತಾದ ಜನರ ಸಮಸ್ಯೆಗಳಿಗೆ ಸರ್ಕಾರ ಯಾವ ರೀತಿಯಲ್ಲಿ ಸ್ಪಂದಿಸುತ್ತಿದೆ ಎಂಬ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಿತು.
undefined
ಈಗಾಗಲೇ ಸರ್ಕಾರಕ್ಕೆ ಒತ್ತಡ ಹೇರುವ ಕೆಲಸವನ್ನು ಕಾಂಗ್ರೆಸ್ ನಡೆಸುತ್ತಿದ್ದು ಇದನ್ನು ಮುಂದಿನ ದಿನಗಳಲ್ಲಿ ತೀವ್ರಗೊಳಿಸಲು ನಾಯಕರು ನಿರ್ಧರಿಸಿದ್ದಾರೆ ಎನ್ನಲಾಗಿದೆ
undefined
ಸರ್ಕಾರದ ತಪ್ಪುಗಳನ್ನು ಮುಂದಿಟ್ಟುಕೊಂಡ ಜನರ ಗಮನ ಸೆಳೆಯುವುದು ಹಾಗೂ ಕೈಗೊಳ್ಳಬೇಕಾಗಿರುವ ಕೆಲಸಗಳ ಕುರಿತಾಗಿ ಸರ್ಕಾರದ ಗಮನ ಸೆಳೆಯುವುದು. ಈ ಮೂಲಕ ಸರ್ಕಾರದ ವಿರುದ್ಧ ಜನಾಭಿಪ್ರಾಯ ಮೂಡಿಸಲು ಕಾಂಗ್ರೆಸ್ ನಿರ್ಧಾರ ತೆಗೆದುಕೊಂಡಿದೆ.
undefined
click me!