ಹಠಾತ್‌ ಪ್ರತಿಭಟನೆ: ಸರ್ಕಾರಕ್ಕೆ ಬಿಸಿ ಮುಟ್ಟಿಸಿದ ಕಾಂಗ್ರೆಸ್

ಮಂಗಳವಾರ ಅಷ್ಟೇ ಮೀಟಿಂಗ್ ಮಾಡಿದ್ದ ಕಾಂಗ್ರೆಸ್ ಇಂದು (ಬುಧವಾರ) ದಿಢೀರ್ ಅಂತ ಮಾಡಿತು. ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ಇದು ಜಸ್ಟ್ ಟ್ರಯಲ್ ಮುಂದೆ ಬೃಹತ್ ಪ್ರತಿಭಟನೆಯ ಎಚ್ಚರಿಕೆ ನೀಡಿದೆ,

ಸರ್ಕಾರದ ವಿವಿಧ ಕ್ರಮಗಳನ್ನು ಖಂಡಿಸಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಟನೆ ಮಾಡಿ ಸರ್ಕಾರ ಬಿಸಿ ಮುಟ್ಟಿಸಿತು.
ಎಪಿಎಂಸಿ ಕಾಯ್ದೆ ತಿದ್ದುಪಡಿ ಹಾಗೂ ಗ್ರಾಮ ಪಂಚಾಯಿತಿಗಳಿಗೆ ನಾಮನಿರ್ದೇಶನ ಜೊತೆಗೆ ಕಾರ್ಮಿಕ ಕಾನೂನು ತಿದ್ದುಪಡಿ ವಿರೋಧಿಸಿ ಕಾಂಗ್ರೆಸ್ ಮುಖಂಡರು ಬಿಎಸ್‌ವೈ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

ಇಂದು (ಬುಧವಾರ) ವಿಧಾನಸೌಧದ ಮಹಾತ್ಮ ಗಾಂಧಿ ಪ್ರತಿಮೆಯ ಬಳಿ ನಮ್ಮ‌ ಪಕ್ಷದ ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರ ಜೊತೆಗೂಡಿ ರಾಜ್ಯ ಸರ್ಕಾರದ ವಿರುದ್ಧ ಸಾಂಕೇತಿಕ ಪ್ರತಿಭಟನೆ ನಡೆಸಿದರು.
ರಾಜ್ಯದಲ್ಲಿ ಲಾಕ್‌ಡೌನ್‌ ನಡುವೆ ವಿವಾದಿತ ಎಪಿಎಂಸಿ ಕಾಯ್ದೆಗೆ ಸರ್ಕಾರ ತಿದ್ದುಪಡಿ ಮಾಡಿದೆ. ಸರ್ಕಾರದ ಈ ನಡೆಗೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಇದನ್ನು ರೈತ ವಿರೋಧಿ ನಡೆ ಎಂದು ಕರೆದ ವಿರೋಧ ಪಕ್ಷಗಳು ತಿದ್ದುಪಡಿ ಮಾಡಬಾರದು ಎಂದು ಸರ್ಕಾರವನ್ನು ಒತ್ತಾಯಿಸಿದ್ದರು.
ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿ ಸರ್ಕಾರವನ್ನು ಎಚ್ಚರಿಸುವ ಕೆಲಸ ಮಾಡಿತು.
ಮುಂದಿನ ದಿನಗಳಲ್ಲಿ ರಾಜ್ಯಾಧ್ಯಂತ ಪ್ರತಿಭಟನೆ ಮಾಡುವುದಾಗಿ ಕಾಂಗ್ರೆಸ್ ಎಚ್ಚರಿಕೆ ಕೊಟ್ಟಿದೆ.

Latest Videos

click me!