ಮತದಾನಕ್ಕೆ ಒಂದು ದಿನ ಇರುವಾಗಲೇ ನಾಡ ದೇವತೆಗೆ ಕಾಂಗ್ರೆಸ್ ಜೋಡೆತ್ತುಗಳ ವಿಶೇಷ ಪ್ರಾರ್ಥನೆ
First Published | May 9, 2023, 9:33 PM ISTಮೈಸೂರು (ಮೇ.9): ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಾಡದೇವತೆ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಒಂದೇ ಕಾರಿನಲ್ಲಿ ಜೊತೆಗೆ ಆಗಮಿಸಿದ ಕಾಂಗ್ರೆಸ್ ನಾಯಕರಿಗೆ ಮಾಜಿ ಸಚಿವ ಕೆ.ಜಿ.ಜಾರ್ಜ್, ಶಾಸಕ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಸ್ಥಳೀಯ ಮುಖಂಡರು ಸಾಥ್ ನೀಡಿದರು.