2024ಕ್ಕೆ ಮೋದಿ ಮಣಿಸಲು ಎಚ್‌ಡಿಕೆ, ಮಮತಾ ಚರ್ಚೆ..!

First Published | Mar 24, 2023, 8:14 PM IST

ಕೋಲ್ಕತಾ(ಮಾ.24): ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜೆಡಿಎಸ್‌ ನಾಯಕ ಹೆಚ್‌.ಡಿ.ಕುಮಾರಸ್ವಾಮಿ ಅವರು ಇಂದು(ಶುಕ್ರವಾರ) ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿದ್ದಾರೆ. 

ಈ ವೇಳೆ ಮಮತಾ ಬ್ಯಾನರ್ಜಿ ಹಾಗೂ ಹೆಚ್‌.ಡಿ.ಕುಮಾರಸ್ವಾಮಿ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ. 

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಹೊರತಾದ ಅಥವಾ ಕಾಂಗ್ರೆಸ್‌ಗೆ ನಾಯಕತ್ವ ಇರದ ಮೈತ್ರಿಕೂಟ ರಚನೆಯ ಯತ್ನದಲ್ಲಿ ದೀದಿ ತೊಡಗಿದ್ದು ಅದರ ಭಾಗವಾಗಿ ಈ ಸಭೆ ನಡೆದಿದೆ ಅಂತ ಹೇಳಲಾಗುತ್ತಿದೆ. 

Tap to resize

ಕಳೆದ ವಾರ ಎಸ್‌ಪಿ ಅಧ್ಯಕ್ಷ ಅಖಿಲೇಶ್‌ರನ್ನು ಮತ್ತು ಗುರುವಾರ ಒಡಿಸಾ ಸಿಎಂ ನವೀನ್‌ ಪಟ್ನಾಯಕ್‌ ಅವರನ್ನು  ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಭೇಟಿ ಮಾಡಿದ್ದರು. 

ಕರ್ನಾಟಕದಲ್ಲಿ ಹೆಚ್‌.ಡಿ.ಕುಮಾರಸ್ವಾಮಿ ಅವರು ಚುನಾವಣಾ ಪ್ರಚಾರದಲ್ಲೂ ಇಂದು ಬಂಗಾಳ ಮುಖ್ಯಮಂತ್ರಿ, ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿ 2024 ಲೋಕಸಭಾ ಚುನಾವಣೆಯ ಬಗ್ಗೆ ಚರ್ಚೆ ನಡೆಸಿದ್ದಾರೆ. 

Latest Videos

click me!