Belagavi| ಈ ಬಾರಿ ವಿಧಾನಮಂಡಲದ ಕಲಾಪ ನೇರಪ್ರಸಾರ, ಸ್ಪೀಕರ್‌ ಹೊರಟ್ಟಿ

Suvarna News   | Asianet News
Published : Nov 08, 2021, 02:47 PM IST

ಬೆಳಗಾವಿ(ನ.08):  ವಿಧಾನಮಂಡಲ ಚಳಿಗಾಲದ ಅಧಿವೇಶನ 2018ರ ನಂತರ ಬೆಳಗಾವಿಯಲ್ಲಿ(Belagavi) ನಡೆದಿರಲಿಲ್ಲ. ಈ ಬಾರಿ ವಿಧಾನ ಮಂಡಲದ ಕಲಾಪಗಳ ನೇರಪ್ರಸಾರದ(Live) ವ್ಯವಸ್ಥೆಯನ್ನ ಮಾಡಲಾಗುತ್ತಿದೆ ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ(Basavaraj Horatti) ಅವರು ತಿಳಿಸಿದ್ದಾರೆ.   

PREV
14
Belagavi| ಈ ಬಾರಿ ವಿಧಾನಮಂಡಲದ ಕಲಾಪ ನೇರಪ್ರಸಾರ, ಸ್ಪೀಕರ್‌ ಹೊರಟ್ಟಿ

ಇಂದು(ಸೋಮವಾರ) ನಗರದಲ್ಲಿರುವ ಸುವರ್ಣ ವಿಧಾನಸೌಧಕ್ಕೆ(Suvarna Vidhana Soudha) ಭೇಟಿ ನೀಡಿ ಚಳಿಗಾಲದ ಅಧಿವೇಶನಕ್ಕೆ(Winter Session) ಸಂಬಂಧಿಸಿದಂತೆ ಚರ್ಚೆ ನಡೆಸಲು ಪೂರ್ವಸಿದ್ಧತೆ ಸಭೆ ನಡೆಸಲಾಯಿತು. ಇ-ಗವರ್ನನ್ಸ್, ಲೋಕೋಪಯೋಗಿ, ವಾರ್ತಾ ಇಲಾಖೆಯ ಸಂಬಂಧಿಸಿದ ಅಧಿಕಾರಿಗಳ ಸಭೆ ನಡೆಸಿ, ಸೂಕ್ತ ಸಿದ್ಧತೆ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ. 
 

24

ಈ ಬಾರಿ ಅಧಿವೇಶನದ ಕಲಾಪವನ್ನು ನೇರಪ್ರಸಾರ ಮಾಡಲು ನಿರ್ಧರಿಸಲಾಗಿದೆ. ನ.20 ರೊಳಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಅಧಿವೇಶನ ಸುಸೂತ್ರವಾಗಿ ನಡೆಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ ಸಭಾಪತಿ ಹೊರಟ್ಟಿ

34

ಡಿಸೆಂಬರ್‌ನಲ್ಲಿ ಚಳಿಗಾಲದ ಅಧಿವೇಶನ ನಡೆಯುವುದು ಖಚಿತವಾಗಿದೆ. ದಿನಾಂಕವನ್ನು ಸರ್ಕಾರ ನಿರ್ಧರಿಸಲಿದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಮಾಹಿತಿ ನೀಡಿದ್ದಾರೆ. 

44

ಶಾಸಕರ ಭವನ ನಿರ್ಮಾಣ ಬಹುಜನರ ಬೇಡಿಕೆಯಾಗಿದೆ. ಇದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರ ಜತೆ ಚರ್ಚಿಸಿ ಸರ್ಕಾರದ ಗಮನಕ್ಕೆ ತರಲಾಗುವುದು. ಈ ಬಾರಿಯ ಅಧಿವೇಶನದಲ್ಲಿ ಉತ್ತರ ಕರ್ನಾಟಕದ(North Karnataka) ಸಮಸ್ಯೆಗಳ ಬಗ್ಗೆ ಚರ್ಚಿಸಲಾಗುವುದು ಎಂದು ತಿಳಿಸಿದ ಹೊರಟ್ಟಿ

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories