ಹೊಸ ಬಾಂಬ್ ಸಿಡಿಸಿದ ಡಿಕೆಶಿ, ಅನಿಲ್ ಲಾಡ್: ರಾಜ್ಯ ರಾಜಕಾರಣದಲ್ಲಿ ಸಂಚಲನ

First Published | Nov 22, 2020, 8:51 PM IST

ಶಿರಾ ಹಾಗೂ ಆರ್‌ಆರ್‌ ನಗರ ಬೈ ಎಲೆಕ್ಷನ್‌ನಲ್ಲಿ ಸೋತು ಮುಖಂಭಗ ಅನುಭವಿಸಿರುವ ಕಾಂಗ್ರೆಸ್‌ ಇದೀಗ ಪುಟಿದೇಳುವ ತವಕದಲ್ಲಿದೆ. ಈ ಹಿನ್ನೆಲೆಯಲ್ಲಿ ಮುಂಬರುವ ಮಸ್ಕಿ, ಬಸವಕಲ್ಯಾಣ ಹಾಗೂ ಬೆಳಗಾವಿ ಉಪಚುನಾವಣೆಗೆ ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸಿದ್ದು, ಇದಕ್ಕೆ ಪೂಕರವೆಂಬತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಉತ್ತರ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ಇದೇ ವೇಳೆ ಬಳ್ಳಾರಿಯ ಕಾರ್ಯಕರ್ತರ ಸಭೆಯಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ.

ಮಸ್ಕಿ, ಬಸವಕಲ್ಯಾಣ ಹಾಗೂ ಬೆಳಗಾವಿ ಉಪಚುನಾವಣೆಗೆ ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸಿದ್ದು, ಇದಕ್ಕೆ ಪೂಕರವೆಂಬತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಉತ್ತರ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ.
undefined
ಮಾರ್ಗ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಚಿತ್ರದುರ್ಗದಲ್ಲಿ, ಹೊಸಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಭಾನುವಾರ ಅದ್ದೂರಿ ಸ್ವಾಗತ ಸಿಕ್ಕಿತು.
undefined

Latest Videos


ಭಾನುವಾರ ಹೊಸಪೇಟೆ ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ಹಮ್ಮಿಕೊಂಡಿದ್ದ ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವನ್ನು ಸೇರಲು ಬಿಜೆಪಿ ಸೇರಿದಂತೆ ಬೇರೆ ಪಕ್ಷದ ನಾಯಕರು ನನ್ನ ಬಳಿ ಬಂದಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದರು.
undefined
'ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದೆಲ್ಲೆಡೆ ನಾವೆಲ್ಲರೂ ಒಟ್ಟಾಗಿ ಪಕ್ಷ ಸಂಘಟನೆ ಮಾಡುವ ಮೂಲಕ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರೋಣ. ಇದಕ್ಕಾಗಿ ನಾನು ಇಲ್ಲಿಂದ ಪ್ರವಾಸ ಆರಂಭ ಮಾಡಿದ್ದು, ಇದು ಕಾಂಗ್ರೆಸ್ ಪಾಲಿಗೆ ವಿಜಯದ ನಡೆಯಾಗಲಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
undefined
ಕಾಂಗ್ರೆಸ್ ಸೇರಬಯಸುವವರಿಗೆ ಯಾವುದೇ ಷರತ್ತನ್ನು ಹಾಕುವುದಿಲ್ಲ. ನಾನು ಯಾರ ಮೇಲೂ ವೈಯಕ್ತಿಕ ದ್ವೇಷ ಮಾಡುವುದಿಲ್ಲ. ಪಕ್ಷದ ನಾಯಕರು ಬಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಕೆಲಸ ಮಾಡಿ. ಜೊತೆಗೆ ಬೇರೆ ಪಕ್ಷದ ನಾಯಕರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಹೇಳುವ ಮೂಲಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದರು.
undefined
ಇನ್ನು ಇದೇ ವೇಳೆ ಮಾಜಿ ಶಾಸಕ ಅನಿಲ್ ಲಾಡ್ ಸಹ ಮತನಾಡಿ, ಡಿಕೆ ಶಿವಕುಮಾರ್ ಅವರಿಗೆ ಕಷ್ಟ ಬಂದಿದೆ. ನಾವೆಲ್ಲ ಬೆಂಬಲವಾಗಿರ್ತೇವೆ. ಬಾಂಬ್ ಯಾವಾಗ ಸಿಡಿಸಬೇಕು ನನಗೆ ಗೊತ್ತಿದೆ. ಕಾದು ನೊಡಿ ಎಂದರು.
undefined
click me!