ಆಮ್ಲಜನಕದ ಕೊರತೆ ನೀಗಿಸಲು ಆಕ್ಸಿಜನ್ ಪ್ಲಾಂಟ್‌ಗೆ ಸತೀಶ್ ಜಾರಕಿಹೊಳಿ ಭೇಟಿ

First Published | Apr 24, 2021, 3:52 PM IST

ಕೊರೋನಾ ವೈರಸ್ ಬಿಕ್ಕಟ್ಟಿನ ಮಧ್ಯೆ, ದೇಶದಲ್ಲಿ ಆಮ್ಲಜನಕದ ಕೊರತೆಯನ್ನು ನೀಗಿಸಲು ಯುದ್ಧದ ಹಾದಿಯಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆಇನ್ನೂ ಕರ್ನಾಟಕದಲ್ಲೂ ಸಹ ಮಹಾಮಾರಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಬೆನ್ನಲ್ಲೇ ಆಕ್ಸಿಜನ್ ಅಭಾವ ಎದುರಾಗಿದೆ. ಈ ಹಿನ್ನೆಲೆಯಲ್ಲಿ  ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರು ಕಾಕತಿಯಲ್ಲಿರುವ ಬೆಳಗಾವಿ ಆಕ್ಸಿಜನ್ ಪ್ಲಾಂಟ್‌ಗೆ ಭೇಟಿ ನೀಡಿ ಮಾಹಿತಿ ಪಡೆದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರು ಕಾಕತಿಯಲ್ಲಿರುವ ಬೆಳಗಾವಿ ಆಕ್ಸಿಜನ್ ಪ್ಲಾಂಟ್‌’ ಗೆ ಭೇಟಿ ನೀಡಿ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಪ್ಲಾಂಟ್ ನಲ್ಲಿನ ಆಕ್ಸಿಜನ್ ಸಿಲಿಂಡರ್ ಗಳ ಸಂಗ್ರಹಣೆ ಹಾಗೂ ಸಾಮರ್ಥ್ಯದ ಬಗ್ಗೆ ಪರಿಶೀಲನೆ ನಡೆಸಿ ಪ್ಲಾಂಟ್ ಗೆ ಆಕ್ಸಿಜನ್ ಸರಬರಾಜು ಮಾಡುವ ಮೂಲಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
Tap to resize

ಸಹಾಯಕ ಔಷಧ ನಿಯಂತ್ರಕ ರಘುರಾಮ್ ಅವರೊಂದಿಗೆ ಚರ್ಚೆ ನಡೆಸಿದ ಅವರು ಕಾರ್ಖಾನೆಯಲ್ಲಿ ಅಗತ್ಯ ಪ್ರಮಾಣದ ಆಕ್ಸಿಜನ್ ಸಿಲಿಂಡರ್ ಸಂಗ್ರಹಣೆ ಮಾಡಿ, ಹಂಚಿಕೆ ಮಾಡುವಂತೆ ಸೂಚಿಸಿದರು.
ಆಕ್ಸಿಜನ್ ಪೂರೈಕೆ ಮಾಡುವ ಸಂದರ್ಭದಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮವಹಿಸಲು ಕೂಡ ತಿಳಿಸಿದರು.
ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಆಕ್ಸಿಜನ್ ಬೇಕಾಗಿರುವುದರಿಂದ ಯಾವೊಬ್ಬ ಸಚಿವರುಗಳು ಸಹ ಇದುವರೆಗೂ ಈ ಆಕ್ಸಿಜನ್ ಪ್ಲಾಂಟ್ ಭೇಟಿ ಕೊಟ್ಟೇ ಇಲ್ಲ. ಈಗ ಸತೀಶ್ ಜಾರಕಿಹೊಳಿ ಭೇಟಿ ಮಾಡಿ ಚರ್ಚಿಸಿರುವುದು ವಿಶೇಷ

Latest Videos

click me!