ಕೆ.ಎಸ್.ಈಶ್ವರಪ್ಪ ಮನವೊಲಿಕೆಯಾಗಲಿದೆ: ಮಾಜಿ ಸಿಎಂ ಬೊಮ್ಮಾಯಿ ಹೇಳಿದ್ದೇನು?

First Published | Mar 18, 2024, 8:03 AM IST

ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಕೆ.ಎಸ್‌. ಈಶ್ವರಪ್ಪ ಅವರೊಂದಿಗೆ ಮಾತನಾಡುವುದಾಗಿ ಹೇಳಿದ್ದಾರೆ. ಹಾಗಾಗಿ, ಈಶ್ವರಪ್ಪ ಅವರ ಮನವೊಲಿಕೆ ಆಗುತ್ತದೆ ಎನ್ನುವ ವಿಶ್ವಾಸವಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

ಹುಬ್ಬಳ್ಳಿ (ಮಾ.18): ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಕೆ.ಎಸ್‌. ಈಶ್ವರಪ್ಪ ಅವರೊಂದಿಗೆ ಮಾತನಾಡುವುದಾಗಿ ಹೇಳಿದ್ದಾರೆ. ಹಾಗಾಗಿ, ಈಶ್ವರಪ್ಪ ಅವರ ಮನವೊಲಿಕೆ ಆಗುತ್ತದೆ ಎನ್ನುವ ವಿಶ್ವಾಸವಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಈ ಕುರಿತು ಮಾತನಾಡಿದ ಅವರು, ಪಕ್ಷದ ರಾಷ್ಟ್ರೀಯ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಸೇರಿ ಕೆ.ಎಸ್‌. ಈಶ್ವರಪ್ಪ ಅವರೊಂದಿಗೆ ಮಾತನಾಡಿ ಮನವೊಲಿಕೆ ಮಾಡಲಿದ್ದಾರೆ. ಮಾಜಿ ಸಚಿವ ರಮೇಶ ಜಾರಕಿಹೊಳಿ ಕ್ಷೇತ್ರ ಬದಲಾವಣೆ ಕುರಿತು ಕೇಳಿದ ಹೇಳಿಕೆಗೆ ಉತ್ತರಿಸಿದ ಬೊಮ್ಮಾಯಿ, ಅವರು ಏನು ಹೇಳಿದ್ದಾರೆಯೋ ನನಗೆ ಗೊತ್ತಿಲ್ಲ ಎಂದರು.

Tap to resize

ಧಾರವಾಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಸವಣೂರು ಹಾಗೂ ಶಿಗ್ಗಾಂವಿ ಪ್ರಮುಖರ ಸಭೆಯನ್ನು ಭಾನುವಾರ ಶಿಗ್ಗಾಂವಿಯಲ್ಲಿ ಕರೆಯಲಾಗಿದೆ. ಸಭೆಗೆ ಧಾರವಾಡ ಲೋಕಸಭಾ ಅಭ್ಯರ್ಥಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಗಮಿಸಲಿದ್ದಾರೆ. ಜೋಶಿ ಅವರಿಗೆ ಕಳೆದ ಬಾರಿಗಿಂತ ಸವಣೂರು, ಶಿಗ್ಗಾಂವಿಯಿಂದ ಹೆಚ್ಚು ಲೀಡ್ ದೊರೆಯುವ ನಿಟ್ಟಿನಲ್ಲಿ ತಯಾರಿ ಮಾಡಲಾಗಿದೆ‌.

ಜತೆಗೆ ಹಾವೇರಿ-ಗದಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರವಾಸ ಮಾಡುತ್ತಿದ್ದೇನೆ. ಭಾನುವಾರ ಹಾನಗಲ್ಲಿಗೆ ಭೇಟಿ‌ ನೀಡಲಿದ್ದೇನೆ, ಸೋಮವಾರ ಗದಗ ಜಿಲ್ಲೆಯ ಗದಗ, ರೋಣ, ಶಿರಹಟ್ಟಿ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಮುಖರೊಂದಿಗೆ ಚರ್ಚೆ ನಡೆಸುತ್ತೇನೆ. ಲೋಕಸಭಾ ಚುನಾವಣೆಯಲ್ಲಿ ಕಳೆದ ಬಾರಿಗಿಂತ ಹೆಚ್ಚು ಅಂತರದಲ್ಲಿ ಗೆಲುವು ಸಾಧಿಸಲಿದ್ದೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Latest Videos

click me!