6 ಹಡೆದವಳ ಮುಂದೆ 3 ಹಡೆದವಳು ಹೇಳಿದಂತಾಯಿತು, ಹೀಗೆಂದರೇನು ಖರ್ಗೆಯವರೇ? HDK ಪ್ರಶ್ನೆ

Published : Sep 08, 2025, 11:27 AM IST

ರೈತರೊಬ್ಬರ ದುಃಖಕ್ಕೆ ಸ್ಪಂದಿಸದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಹೆಚ್‌.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಖರ್ಗೆ ಅವರ ನಡವಳಿಕೆಯನ್ನು 'ಕಾಂಗ್ರೆಸ್‌ನ ದರ್ಪ, ಅಹಂಗೆ ಸಾಕ್ಷಿ' ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.

PREV
15

ಸನ್ಮಾನ್ಯ ಮಲ್ಲಿಕಾರ್ಜುನ ಖರ್ಗೆ ಅವರೇ, ರೈತರ ಬಗ್ಗೆ ನಿಮ್ಮ ನಡವಳಿಕೆ ಕಂಡು ಬಹಳ ಬೇಸರವಾಯಿತು. ನಿಮ್ಮಂತಹ ಹಿರಿಯರಿಂದ ಇಂಥ ವರ್ತನೆಯನ್ನು ನಾನು ಖಂಡಿತ ನಿರೀಕ್ಷೆ ಮಾಡಿರಲಿಲ್ಲ. ಕಷ್ಟದಲ್ಲಿರುವ ರೈತ ನಿಮ್ಮಂಥವರ ಬಳಿ ಬಂದು ದುಃಖ ತೋಡಿಕೊಳ್ಳದೆ ಇನ್ನು ಯಾರ ಬಳಿ ಹೋಗಿ ಹೇಳಿಕೊಳ್ಳಬೇಕು ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

25

ನೀವು ರಾಜ್ಯಸಭೆ ಪ್ರತಿಪಕ್ಷ ನಾಯಕರು ಹಾಗೂ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷರು. ಇದೆಲ್ಲವನ್ನೂ ತಾವು ಮರೆತು ಮಾತನಾಡಿದ್ದೀರಿ! ಇದು ತಮಗೆ ಭೂಷಣವಲ್ಲ. ದುಃಖ ಹೇಳಿಕೊಳ್ಳಲು ಬಂದ ರೈತನ ಮೇಲೆ ಈ ಪರಿಯ ದರ್ಪ ಅಗತ್ಯವಿರಲಿಲ್ಲ. ನೀವೂ ತೊಗರಿ ರೈತರೇ ಆಗಿರಬಹುದು. ಆದರೆ 40 ಎಕರೆಯಲ್ಲಿ ಬೆಳೆಯುವ ತಮಗೂ, ಒಂದು ಅಥವಾ ಎರಡು ಎಕರೆಯಲ್ಲಿ ಬೆಳೆಯುವ ಆ ಬಡರೈತನಿಗೂ ಹೋಲಿಕೆಯೇ? ನಷ್ಟವನ್ನು ಭರಿಸುವ ಶಕ್ತಿ ನಿಮಗಿರುತ್ತದೆ, ರೈತನಿಗೆ ಆ ಶಕ್ತಿ ಇರಬೇಕಲ್ಲವೇ ಎಂದು ಕುಮಾರಸ್ವಾಮಿ ಕೇಳಿದ್ದಾರೆ.

35

"ನಿನ್ನದು 4 ಎಕ್ರೆ ಹಾಳಾಗಿದೆ. ನನ್ನದು 40 ಎಕ್ರೆ ಹಾಳಾಗಿದೆ. ಪ್ರಚಾರಕ್ಕಾಗಿ ತೊಗರಿ ತೆಗೆದುಕೊಂಡು ಬಂದ್ದಿದ್ದೀಯ? ತೊಗರಿ ಅಷ್ಟೆ ಅಲ್ಲ; ಉದ್ದು, ಹೆಸರು ಕೂಡ ಹಾಳಾಗಿರುವುದು ನನಗೆ ಗೊತ್ತಿದೆ. ಆರು ಹಡೆದವಳ ಮುಂದೆ ಮೂರು ಹಡೆದವಳು ಹೇಳಿದಂತಾಯಿತು.." ಹೀಗೆಂದರೇನು ಖರ್ಗೆಯವರೇ? ಹಿರಿಯರು ತಾವೇ ಹೇಳಬೇಕು. ರೈತನನ್ನು ಅಪಮಾನಿಸಿದ್ದೀರಿ. ಜತೆಗೆ, ತಾಯಿಯನ್ನು ಅಪಮಾನಿಸಿದ್ದೀರಿ! ಇದು ಸರಿಯಲ್ಲ. ಕೊನೇಪಕ್ಷ ಆ ವ್ಯಕ್ತಿಗೆ ಸಾಂತ್ವನ ಹೇಳಿ, ಆತನ ಕಣ್ಣೀರು ಒರೆಸಬಹುದಿತ್ತು. ನಿಮ್ಮ ನಡವಳಿಕೆ ಕಾಂಗ್ರೆಸ್ ಪಕ್ಷದ ಪರಂಪರಾಗತ ದರ್ಪ, ಅಹಂಗೆ ಸಾಕ್ಷಿ ಎಂದು ಹೆಚ್‌ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

45

ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು?

‘ನಿನ್ನದು 4 ಎಕರೆ ಹಾಳಾಗಿರಬಹುದು, ನನ್ನದು ನಲವತ್ತು ಎಕರೆ ಹಾಳಾಗಿದೆ, ಬರೀ ತೊಗರಿ ಮಾತ್ರವಲ್ಲ, ಹೆಸರು, ಉದ್ದು, ಹತ್ತಿ, ಸೂರ್ಯಕಾಂತಿ ಬೆಳೆಗಳು ಸಹ ಹಾಳಾಗಿವೆ. ನಾನು ಯಾರಿಗೆ ಹೋಗಿ ಹೇಳಲಿ?. ಇಲ್ಲಿ ಬಂದು ಪ್ರಚಾರ ಗಿಟ್ಟಿಸಿಕೊಳ್ಳುವ ಕೆಲಸ ಮಾಡಬೇಡ. ಆರು ಹಡೆದವಳ ಮುಂದೆ ಮೂರು ಹಡೆದವಳು ಬಂದು ಹೇಳಿದಂಗಾಯ್ತು ನಿನ್ನ ಕಥೆ’.

55

ಮಲ್ಲಿಕಾರ್ಜುನ ಖರ್ಗೆಯವರು ತಮ್ಮ ನಿವಾಸದಲ್ಲಿ ಪಕ್ಷದ ಕಾರ್ಯಕರ್ತರ ಜೊತೆ ಸಮಾಲೋಚನೆ ನಡೆಸುತ್ತಿದ್ದರು. ಆಗ ಅವರ ನಿವಾಸಕ್ಕೆ ಆಗಮಿಸಿದ ಯುವಕನೊಬ್ಬ, ಅತಿವೃಷ್ಟಿಯಿಂದ ಹಾಳಾಗಿದ್ದ ತೊಗರಿ ಬೆಳೆ ತೋರಿಸಿ, ‘ನಾಲ್ಕು ಎಕರೆಯಲ್ಲಿ ಬೆಳೆದಿದ್ದ ತೊಗರಿ ಬೆಳೆ ಹಾಳಾಗಿದೆ, ಸರ್’ ಎಂದ. ಈ ವೇಳೆ ಕೋಪಗೊಂಡ ಖರ್ಗೆ, ‘ತೊಗರಿ ಬೆಳೆ ಹಾನಿಯಾಗಿದ್ದನ್ನು ನನಗೆ ತೋರಿಸಲು ಬಂದಿರುವೆಯಾ?. ನಿನ್ನ ತೊಗರಿ ಎಷ್ಟು ಹಾಳಾಗಿದೆ?’ ಎಂದು ಏರು ಧ್ವನಿಯಲ್ಲಿ ಪ್ರಶ್ನಿಸಿದರು. ‘ನಾಲ್ಕು ಎಕರೆಯಲ್ಲಿನ ಬೆಳೆ ಹಾಳಾಗಿದೆ ಸರ್’ ಎಂದು ಯುವಕ ವಿನಮ್ರನಾಗಿ ನುಡಿದ.

Read more Photos on
click me!

Recommended Stories