ಸಿದ್ದರಾಮಯ್ಯ ಕುರ್ಚಿ ಹೋಗೋದು ಪಂಚ ಗ್ಯಾರಂಟಿಗಳಲ್ಲೊಂದು: ಶಾಸಕ ಬಸನಗೌಡ ಯತ್ನಾಳ

First Published | Apr 18, 2024, 8:03 AM IST

ಚುನಾವಣೆ ಮುಗಿದ 15 ದಿನಗಳಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಮುಖ್ಯಮಂತ್ರಿ ಆಗೋ ಯೋಜನೆ ಹಾಕಿಕೊಂಡಿದ್ದಾರೆ. ಆಗ ಕಾಂಗ್ರೆಸ್ ಒಡೆದು ಹೋಗುತ್ತದೆ. ಬಳಿಕ ಹೊಸ ಸರ್ಕಾರ ರಚನೆಯಾಗುತ್ತದೆ. 

ವಿಜಯಪುರ (ಏ.18): ಚುನಾವಣೆ ಮುಗಿದ 15 ದಿನಗಳಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಮುಖ್ಯಮಂತ್ರಿ ಆಗೋ ಯೋಜನೆ ಹಾಕಿಕೊಂಡಿದ್ದಾರೆ. ಆಗ ಕಾಂಗ್ರೆಸ್ ಒಡೆದು ಹೋಗುತ್ತದೆ. ಬಳಿಕ ಹೊಸ ಸರ್ಕಾರ ರಚನೆಯಾಗುತ್ತದೆ. ಪಂಚ ಗ್ಯಾರಂಟಿಗಳಲ್ಲಿ ಸಿದ್ದರಾಮಯ್ಯ ಕುರ್ಚಿ ಹೋಗೋದು ಒಂದು ಗ್ಯಾರಂಟಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹೇಳಿದ್ದಾರೆ. 

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸಲು ಹೋದರೆ ಕಾಂಗ್ರೆಸ್ ಸರ್ಕಾರ ಪತನ ಆಗಲಿದೆ. ಡಿ.ಕೆ.ಶಿವಕುಮಾರ್‌ ಈಗಲೇ ತನ್ನ ಪರವಾಗಿರುವ ಲೋಕಸಭಾ ಸದಸ್ಯರ ಆಯ್ಕೆಗೆ ಸ್ಕೆಚ್ ಹಾಕಿದ್ದು, ಚುನಾವಣೆ ಮುಗಿದ ಬಳಿಕ ಅವರು ಸಿಎಂ ಆಗುವ ಕನಸು ಕಾಣುತ್ತಿದ್ದಾರೆ. 

Tap to resize

ಇದೇ ಕಾರಣಕ್ಕೆ ಬಾಗಲಕೋಟೆಯಲ್ಲಿ ಒಕ್ಕಲಿಗರು, ಲಿಂಗಾಯತರು ಒಂದೇ ಎನ್ನುವ ಸಂದೇಶ ಕೊಟ್ಟಿದ್ದಾರೆ ಎಂದರು. ಸಿದ್ದರಾಮಯ್ಯ ಅವರು ಡಿ.ಕೆ.ಶಿವಕುಮಾರ್‌ ಪರವಾಗಿರುವ ಅಭ್ಯರ್ಥಿಗಳನ್ನು ಸೋಲಿಸದಿದ್ದರೆ ಚುನಾವಣೆ ಬಳಿಕ ಕಾಂಗ್ರೆಸ್ ಒಡೆದು ಮುಂದೆ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುತ್ತದೆ. ಸಿದ್ದರಾಮಯ್ಯ ತಮ್ಮ ಶಕ್ತಿ ಪ್ರದರ್ಶನ ಮಾಡದೇ ಹೋದರೆ ಅವರ ಕುರ್ಚಿ ಹೋಗೋದು ಗ್ಯಾರಂಟಿ ಎಂದರು.

ಸಿಎಂ ಆಗಲು ಡಿಕೆಶಿ ಪ್ಲಾನ್: ಚುನಾವಣೆ ಮುಗಿದ 15 ದಿನಗಳಲ್ಲಿ ಡಿಕೆಶಿ ಸಿಎಂ ಆಗುವ ಪ್ಲಾನ್ ಹಾಕಿದ್ದಾರೆ. ಕಾಂಗ್ರೆಸ್ ಒಡೆದು ಹೋಗುತ್ತದೆ. ಬಳಿಕ ಹೊಸ ಸರ್ಕಾರ ರಚನೆಯಾಗುತ್ತದೆ ಸಿದ್ದರಾಮಯ್ಯ ಅವರನ್ನು ಇಳಿಸೋಕೆ ಹೋದರೆ ಕಾಂಗ್ರೆಸ್ ಸರ್ಕಾರ ಪತನ ಆಗಲಿದೆ. ಡಿಕೆಶಿ ಈಗಲೇ ತನ್ನ ಪರವಾಗಿರುವ ಲೋಕಸಭಾ ಸದಸ್ಯರ ಆಯ್ಕೆಗೆ ಸ್ಕೆಚ್ ಹಾಕಿದ್ದು, ಚುನಾವಣೆ ಮುಗಿದ ಬಳಿಕ ಡಿಕೆಶಿ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ. 

ಇದೇ ಕಾರಣಕ್ಕೆ ಬಾಗಲಕೋಟೆಯಲ್ಲಿ ಒಕ್ಕಲಿಗರು, ಲಿಂಗಾಯತರು ಒಂದೇ ಎನ್ನುವ ಸಂದೇಶ ಕೊಟ್ಟಿದ್ದಾರೆ. ಸಚಿವ ಶಿವಾನಂದ ಪಾಟೀಲ್ ಮಗಳನ್ನು ಗೆಲ್ಲಿಸಿಕೊಟ್ಟರೆ ಶಿವಾನಂದ ಪಾಟೀಲ್ ನನ್ನ ಜೊತೆಗಿರ್ತಾರೆ. ನಾನು ಅವರು ಸೇರಿ ಸಿದ್ದರಾಮಯ್ಯ ಅವರನ್ನು ಇಳಿಸೋಕೆ ಕಾರ್ಯತಂತ್ರ ಮಾಡಿದ್ದೇವೆ ಎನ್ನುವ ಸಂದೇಶವನ್ನು ಡಿಕೆಶಿ ಕೊಟ್ಟಿದ್ದಾರೆ ಎಂದರು.

Latest Videos

click me!