ನಿಖಿಲ್ ಕುಮಾರಸ್ವಾಮಿ ಮದುವೆಯಲ್ಲಿ ಲಾಕ್‌ಡೌನ್ ಉಲ್ಲಂಘನೆ ಮಾಡಲಾಗಿದೆ ಎನ್ನುವ ಆರೋಪಕ್ಕೆ ಇದೀಗ ಸ್ವತಃ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.
ಏಪ್ರಿಲ್ 20ರ ಬಳಿಕ ರಾಜ್ಯದಲ್ಲಿ ಹೇರಲಾಗಿರುವ ಲಾಕ್ ಡೌನ್ ವೇಳೆ ಯಾವೆಲ್ಲಾ ಕ್ಷೇತ್ರದಲ್ಲಿ ವಿನಾಯಿತಿ ನೀಡಬೇಕು ಎಂಬ ವಿಚಾರದ ಕುರಿತು ಮಾಹಿತಿ ನೀಡಲು ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಮಾತನಾಡಿದರು
ಈ ವೇಳೆ ಸುದ್ದಿಗಾರರೊಬ್ಬರು ನಿಖಿಲ್ ಕುಮಾರಸ್ವಾಮಿ-ರೇವತಿ ವಿವಾಹ ವಿಚಾರ ಪ್ರಸ್ತಾಪಿಸಿ ವಿವಾಹದ ವೇಳೆ ಲಾಕ್ ಡೌನ್ ನಿಯಮ ಉಲ್ಲಂಘನೆ ಕುರಿತು ಪ್ರಶ್ನಿಸಿದ್ದಾರೆ
ಈ ವೇಳೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಕುಮಾರಸ್ವಾಮಿ ಮತ್ತು ದೇವೇಗೌಡರದ್ದು ದೊಡ್ಡ ಕುಟುಂಬ. ಆದರೂ ತುಂಬಾ ಸರಳವಾಗಿ ವಿವಾಹ ನಡೆಸಿದ್ದಾರೆ.
ವಿವಾಹದ ವೇಳೆ ಕಾನೂನು ಉಲ್ಲಂಘನೆಯಾಗಿಲ್ಲ. ಕಾನೂನಿನಡಿಯಲ್ಲೇ ವಿವಾಹ ಜರುಗಿದ್ದು, ಈ ಬಗ್ಗೆ ಅನಗತ್ಯ ಚರ್ಚೆ ಬೇಡ. ನೂತನ ವಧು-ವರರಿಗೆ ನಾನು ಶುಭಾಶಯ ಕೋರುತ್ತೇನೆ ಎಂದು ಹೇಳಿದರು.
ಈ ಮೂಲಕ ಲಾಕ್‌ಡೌನ್ ಉಲ್ಲಂಘನೆಯಾಗಿದೆ ಎನ್ನುವವರ ಬಾಯಿಗೆ ಬೀಗ ಹಾಕಿದರು
ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ ಅವರೇ ಲಾಕ್‌ಡೌನ್ ಉಲ್ಲಂಘನೆ ಬಗ್ಗೆ ಡಿಸಿಗೆ ವರದಿ ಕೇಳಿದ್ದರು.
ಕುಮಾರಸ್ವಾಮಿ ಮಗನ ಮದುವೆಯಲ್ಲಿ ಕಾನೂನು ಉಲ್ಲಂಘನೆ ಆಗಿದೆ ಎಂದು ಸಚಿವ ಶ್ರೀನಿವಾಸ ಪೂಜಾರಿ ಆರೋಪ ಮಾಡಿದ್ದಾರೆ.
ಆದ್ರೆ, ಇದೀಗ ಸ್ವತಃ ಯಡಿಯೂರಪ್ಪ ಎಲ್ಲಾ ಸರಿಯಾಗಿದೆ ಎಂದು ಹೇಳುವ ಮೂಲಕಎಲ್ಲಾ ಆರೋಪಗಳಿಗೆ ಉತ್ತರಿಸಿದರು
ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಶುಕ್ರವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಕೊರೋನಾ ಲಾಕ್‌ಡೌನ್ ನಡುವೆಯೂ ರಾಮನಗರ ಜಿಲ್ಲೆಯ ಕೇತಗಾನಹಳ್ಳಿಯಲ್ಲಿರುವ ಫಾರ್ಮ್‌ಹೌಸ್‌ನಲ್ಲಿ ಮದುವೆ ನೆರವೇರಿತು. ಆದರೆ ಮದುವೆ ಸಮಾರಂಭದಲ್ಲಿ ಕೊರೋನಾ ಲಾಕ್‌ಡೌನ್ ಮಾರ್ಗಸೂಚಿಯನ್ನು ಉಲ್ಲಂಘನೆ ಮಾಡಿರುವ ಆರೋಪ ಕೇಳಿಬಂದಿದ್ದವು,