ರಾಹುಲ್ ಭೇಟಿ ಮಾಡಿದ ಮಧು ಬಂಗಾರಪ್ಪ.. ಹೊಸ ವಿಚಾರ!

Published : Sep 09, 2021, 11:31 PM IST

ನವದೆಹಲಿ( ಸೆ. 09)  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಮಧು ಬಂಗಾರಪ್ಪ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಮಧು ಬಂಗಾರಪ್ಪ ತಮ್ಮ ಸೋಶಿಯಲ್ ಮೀಡಿಯಾ ಪೇಜ್ ನಲ್ಲಿ ಪೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ.

PREV
14
ರಾಹುಲ್ ಭೇಟಿ ಮಾಡಿದ ಮಧು ಬಂಗಾರಪ್ಪ.. ಹೊಸ ವಿಚಾರ!

ಇಂದು ನವದೆಹಲಿಯಲ್ಲಿ ಏಐಸಿಸಿ ಉಪಾಧ್ಯಕ್ಷರಾದ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದೆನು. ಈ ಸಂಧರ್ಭದಲ್ಲಿ  ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಹರ್ಷ ವ್ಯಕ್ತಪಡಿಸಿ ಸ್ವಾಗತಿಸಿದರು ಎಂದು ಮಧು ಬಂಗಾರಪ್ಪ ಬರೆದುಕೊಂಡಿದ್ದಾರೆ.

24

ಮಾಜಿ ಸಿಎಂ ಬಂಗಾರಪ್ಪ ಅವರು ಹಾಗೂ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಓಡನಾಟವನ್ನು ಹಂಚಿಕೊಂಡರು. ಬಂಗಾರಪ್ಪ ನವರು ಮುಖ್ಯಮಂತ್ರಿಯಾಗಿ ನೀಡಿದ್ದ ಜನಪ್ರಿಯ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಪಕ್ಷ ಬಲವರ್ಧನೆ ಹಾಗೂ ಇನ್ನಿತರ ರಾಜಕೀಯ ವಿದ್ಯಮಾನಗಳ ಬಗ್ಗೆ ಸಲಹೆ ನೀಡಿ ಮುಂದಿನ ರಾಜಕೀಯಕ್ಕೆ ಶುಭ ಹಾರೈಸಿದರು ಎಂದು ಮಧು ತಿಳಿಸಿದ್ದಾರೆ.

34

 ಈ ಸಂಧರ್ಭದಲ್ಲಿ  ಕರ್ನಾಟಕ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀ ರಣದೀಪ್ ಸಿಂಗ್ ಸುರ್ಜೆವಾಲ ರವರು ಉಪಸ್ಥಿತರಿದ್ದರು ಎಂದಿರುವ ಮಧು ಕೆಲ ಸಮಯ ಮಾತುಕತೆ ನಡೆಸಿದ್ದಾರೆ.

44

ಜೆಡಿಎಸ್ ನಿಂದ  ಸೊರಬದ ಶಾಸಕರಾಗಿ ಆಯ್ಕೆಯಾಗಿದ್ದ ಮಧು ಬಂಗಾರಪ್ಪ  ನಂತರ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧೆ ಮಾಡಿದ್ದರು. ಜೆಡಿಎಸ್ ನಲ್ಲಿ ಅನೇಕ ಬದಲಾವಣೆಗಳ ನಂತರ  ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. 

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories