ಎಲ್ಲಾ ಚುನಾವಣೆಗಳಲ್ಲೂ ಬಿಜೆಪಿಯದ್ದೇ ಜಯ : ಸಚಿವ ಸಿ.ಟಿ.ರವಿ

First Published Oct 1, 2020, 10:30 AM IST

ಬೆಂಗಳೂರು(ಅ.01): ಘೋಷಣೆಯಾಗಿರುವ ಎಲ್ಲಾ ಚುನಾವಣೆಗಳಲ್ಲಿಯೂ ಗೆಲುವು ಸಾಧಿಸುವ ಮೂಲಕ ನಮ್ಮ ಶಕ್ತಿಯನ್ನು ಪ್ರದರ್ಶಿಸುತ್ತೇವೆ. ಅಲ್ಲದೆ, ಹಿರಿಯರ ಮಾರ್ಗದರ್ಶನ, ಕಿರಿಯರ ಬೆಂಬಲದೊಂದಿಗೆ ಪಕ್ಷ ಈಗ ನೀಡಿರುವ ಹೊಸ ಜವಾಬ್ದಾರಿ ನಿರ್ವಹಿಸುತ್ತೇನೆ ಎಂದು ಬಿಜೆಪಿಯ ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದ್ದಾರೆ.

ಪಕ್ಷದ ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಬುಧವಾರ ಪಕ್ಷದ ಕಚೇರಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
undefined
ಜವಾಬ್ದಾರಿಗಳು ಆಗಾಗ ಬದಲಾಗುತ್ತಿರುತ್ತವೆ. ಆದರೆ, ಕಾರ್ಯಕರ್ತ ಎಂಬುದು ಕೊನೆವರೆಗೆ ಇರುತ್ತದೆ. ನಾನೊಬ್ಬ ಸಾಮಾನ್ಯ ಕಾರ್ಯಕರ್ತ. 1988ರಲ್ಲಿ ಮೊದಲ ಬಾರಿಗೆ ಪ್ರಾಥಮಿಕ ಸದಸ್ಯತ್ವ ಸ್ವೀಕರಿಸುವ ಮೂಲಕ ಕಾರ್ಯಕರ್ತನಾಗಿ ಪಕ್ಷದ ಕೆಲಸ ಆರಂಭಿಸಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಅವರು ನನ್ನ ಮೇಲೆ ವಿಶ್ವಾಸವಿಟ್ಟು ಹೊಸ ಜವಾಬ್ದಾರಿ ನೀಡಿದ್ದಾರೆ. ನನ್ನ ಸಾಮರ್ಥ್ಯ ಮೀರಿ ಆ ವಿಶ್ವಾಸ ಉಳಿಸಿಕೊಳ್ಳಲು ಪ್ರಯತ್ನಿಸುತ್ತೇನೆ ಎಂದರು.
undefined
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮತ್ತು ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ನೇತೃತ್ವದಲ್ಲಿ ಎಲ್ಲ ಚುನಾವಣೆಗಳನ್ನು ಎದುರಿಸಲಿದ್ದೇವೆ. ಘೋಷಣೆಯಾಗಿರುವ ಎಲ್ಲಾ ಚುನಾವಣೆಯಲ್ಲಿಯೂ ಜಯಗಳಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
undefined
ಆರ್‌.ಆರ್‌.ನಗರ, ಶಿರಾ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಆಕಾಂಕ್ಷಿಗಳು ಹಲವರಿರಬಹುದು. ಆದರ, ಪಕ್ಷ ಒಬ್ಬರನ್ನು ಮಾತ್ರ ಆಯ್ಕೆ ಮಾಡಲಿದೆ. ವಿಧಾನಪರಿಷತ್‌ನ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ನಮಗೆ ಪಕ್ಷ ಮುಖ್ಯವಾಗಿದ್ದು, ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸುತ್ತೇವೆ ಎಂದು ತಿಳಿಸಿದರು.
undefined
ಆರ್‌.ಆರ್‌.ನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ರವಿ, ಅದನ್ನು ನಮ್ಮ ಸಂಸದೀಯ ಮಂಡಳಿ ತೀರ್ಮಾನಿಸುತ್ತದೆ. ಮುನಿರತ್ನ ಕೂಡ ಈಗ ಬಿಜೆಪಿ ಸೇರಿದ್ದಾರೆ. ಮುನಿರಾಜು ಗೌಡ ಯುವ ಮೋರ್ಚಾ ಅಧ್ಯಕ್ಷ ಆಗಿದ್ದವರು. ಆಕಾಂಕ್ಷಿಗಳು ಹಲವರು ಇರುತ್ತಾರೆ. ಆದರೆ ಅಭ್ಯರ್ಥಿ ಆಗುವುದು ಒಬ್ಬರೇ ಎಂದು ಮಾರ್ಮಿಕವಾಗಿ ಹೇಳಿದರು.
undefined
ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರ ಪ್ರಸ್ತಾಪಿಸಿದ ಅವರು, ಪಕ್ಷ ಏನು ಸೂಚನೆ ಕೊಡುತ್ತದೆಯೊ ಹಾಗೆ ಮಾಡುತ್ತೇನೆ. ಒಬ್ಬರಿಗೆ ಒಂದೇ ನಿಯಮ ಇದೆಯೋ ಅಥವಾ ಇಲ್ಲವೋ ಗೊತ್ತಿಲ್ಲ. ಪಕ್ಷದ ನಿರ್ಧಾರಕ್ಕೆ ನಾನು ಬದ್ಧ. ಎರಡನ್ನೂ ಮುಂದೆ ಇಟ್ಟು ಆಯ್ಕೆ ಯಾವುದು ಎಂದು ಕೇಳಿದರೆ ನಾನು ಸಂಘಟನೆ ಎನ್ನುತ್ತೇನೆ ಎಂದು ರವಿ ತಿಳಿಸಿದರು.
undefined
click me!