ಅಗತ್ಯ ಬಿದ್ದರೆ ಸಚಿವರು ತ್ಯಾಗಕ್ಕೆ ಸಿದ್ಧರಾಗಬೇಕಾಗುತ್ತದೆ ಎಂಬ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ಕುರಿತ ಪ್ರಶ್ನೆಗೆ ತಾಳ್ಮೆ ಕಳೆದುಕೊಂಡ ಮಹದೇವಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎದುರೇ ಈ ಹೇಳಿಕೆ ನೀಡಿದರು. ಜತೆಗೆ, ಯಾವುದೇ ಕಾರಣಕ್ಕೂ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸಿದ್ದರಾಮಯ್ಯ ಎದುರೇ ಸ್ಪಷ್ಟಪಡಿಸಿದರು. ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರು.